ರಸಗೊಬ್ಬರದ ಬಗ್ಗೆ ರೈತರಿಗೆ ಮಾಹಿತಿ
ತಿಪಟೂರು: ತಾಲೂಕಿನ ಬಿದರೆಗುಡಿ ಕಾವಲ್ನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಘದ ವತಿಯಿಂದ ಆಯೋಜಿಸಿದ್ದ ತೆಂಗಿನಲ್ಲಿ ಸುಧಾರಿತ ಬೇಸಾಯ ಕ್ರಮಗಳು ಮತ್ತು ಮರ ಹತ್ತುವ ಸಾಧನ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮ ನಡೆಯಿತು.
ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ಮಣ್ಣು ವಿಜ್ಞಾನದ ವಿಷಯ ತಜ್ಞೆ ಡಾ. ಬಿ.ಮಮತಾ ಅವರು ಅಸಲಿ ಮತ್ತು ನಕಲಿ ರಸಗೊಬ್ಬರವನ್ನು ರೈತರ ತಮ್ಮದೇ ಮಟ್ಟದಲ್ಲಿ ಕಂಡುಕೊಳ್ಳುವ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ವಿವರಿಸಿದರು.
ಕೃಷಿ ವಿಜ್ಞಾನ ಕೇಂದ್ರ ವಿಜ್ಞಾನಿ ಡಾ.ಶಂಕರ್ ಇಂತಹ ತಾಂತ್ರಿಕತೆಯನ್ನು ರೈತರ ಮಟ್ಟದಲ್ಲೆ ಮಾಡಿಕೊಳ್ಳುವುದರಿಂದ ಉತ್ತಮ ರಸಗೊಬ್ಬರ ಹಾಗೂ ಅಧಿಕ ಇಳುವರಿ ಪಡೆಯಲು ಸಹಾಯವಾಗುತ್ತದೆ ಎಂದು ತಿಳಿಸಿದರು.
ಸಾರ್ವಜನಿಕ ಸಭೆ
ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿಯವರು ತುಮಕೂರು ಜಿಲ್ಲೆಯ ವಸಂತನರಸಾಪುರದಲ್ಲಿ 2884.15 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪ್ರದೇಶದ 2ನೇ ಹಂತ ಹಾಗೂ 3ನೇ ಹಂತವನ್ನು ಅಭಿವೃದ್ಧಿಪಡಿಸಲು ಉದ್ದೇಶಿಸಿದ್ದು, ಈ ಕುರಿತು ಸಾರ್ವಜನಿಕ ಪರಿಸರ ಸಭೆಯನ್ನು ಡಿಸೆಂಬರ್ 3 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಕೋರಾ ಹೋಬಳಿ ವಸಂತನರಸಾಪುರದಲ್ಲಿ ಸಾರ್ವಜನಿಕ ಸಭೆ ಕರೆಯಲಾಗಿದೆ.
ಈ ಸಂಬಂಧ ಯೋಜನಾ ಸ್ಥಳದಲ್ಲಿ ವಾಸವಾಗಿರುವ ಆಸಕ್ತ ನಿವಾಸಿಗಳು, ಪರಿಸರಾಸಕ್ತ ಗುಂಪುಗಳು ಮತ್ತು ಈ ಯೋಜನೆಯಿಂದ ತೊಂದರೆಗೊಳಗಾಗಬಹುದಾದ ಸಾರ್ವಜನಿಕರು ತಮ್ಮ ಸಲಹೆಗಳು, ಅನಿಸಿಕೆಗಳು, ಟೀಕೆ ಟಿಪ್ಪಣಿಗಳು ಹಾಗೂ ಅಹವಾಲುಗಳನ್ನು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸಲ್ಲಿಸಲು ಕೋರಲಾಗಿದೆ.
ಆಸಕ್ತ ಸಾರ್ವಜನಿಕರು ಪರಿಸರ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿ ಆಹ್ವಾನ
ತುಮಕೂರು: ತುಮಕೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಪಂಡಿತನಹಳ್ಳಿ ಹ್ಯಾಂಡ್ ಪೋಸ್ಟ್, ಗವಿಯಪ್ಪನಪಾಳ್ಯ, ಗೌಡಿಹಳ್ಳಿ, ಮಲ್ಲಪ್ಪನಹಳ್ಳಿ ಗ್ರಾಮಗಳಲ್ಲಿ ಗೌರವಧನ ಆಧಾರಿತ 4 ಅಂಗನವಾಡಿ ಕೇಂದ್ರದ ಸಹಾಯಕಿಯರ ಹುದ್ದೆ ತಾತ್ಕಾಲಿಕ ಖಾಲಿ ಇದ್ದು, ಸದರಿ ಕೇಂದ್ರಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಬಿ.ಹೆಚ್.ರಸ್ತೆ ಇಂಡಸ್ಟ್ರಿಯಲ್ ಏರಿಯಾ, ತುಮಕೂರು ಗ್ರಾಮಾಂತರ ಇಲ್ಲಿಗೆ ಡಿಸೆಂಬರ್ 7 ರೊಳಗಾಗಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ, ತುಮಕೂರು ಗ್ರಾಮಾಂತರ ಇಲ್ಲಿ ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

