ತುಮಕೂರು

ಬಗರ್ ಹುಕುಂ ಜಮೀನು ಸಕ್ರಮಗೊಳಿಸಲು ಆಗ್ರಹ

Published On :

ಗುಬ್ಬಿ: ಬಗರ್ ಹುಕುಂ ಸಾಗುವಳಿ ಜಮೀನುಗಳನ್ನು ಸಕ್ರಮಗೊಳಿಸುವುದು ಸೇರಿದಂತೆ ವಿ. ಸುಬ್ರಮಣಿಯನ್ ವರದಿಯನ್ನು ಕೂಡಲೇ ಸರ್ಕಾರ ಜಾರಿಗೊಳಿಸುವಂತೆ ಒತ್ತಾಯಿಸಿ ನವೆಂಬರ್ 28 ರಿಂದ 3 ದಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧರಣಿ ನಡೆಸುವುದಾಗಿ ಬಹುಜನ ಸಮಾಜ ಪಕ್ಷದ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಸೋಮಶೇಖರ್ ತಿಳಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಭಾಗವಹಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಬಗರ್ ಹುಕುಂ ಸಾಗುವಳಿಗಾಗಿ ಫಾರಂ.ನಂ.50,5 3 ರಲ್ಲಿ ಅರ್ಜಿ ಸಲ್ಲಿಸಿರುವ ಎಲ್ಲಾ ಫಲಾನುಭವಿಗಳಿಗೂ ತ್ವರಿತವಾಗಿ ಅರ್ಜಿ ಇತ್ಯರ್ಥ ಪಡಿಸಿ ಸಾಗುವಳಿ ಮಾಡುತ್ತಿರುವ ಜಮೀನುಗಳನ್ನು ಮುಂಜೂರು ಮಾಡಿ ಸಾಗುವಳಿ ಪತ್ರ ನೀಡುವಂತೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿದರು.
ರಿಯಲ್ ಎಸ್ಟೇಟ್‌ನಂತಹ ಭೂಮಾಫಿಯಾಗಳು ರಾಜ್ಯಾದ್ಯಂತ ಅಕ್ರಮವಾಗಿ ಕಬಳಿಸಿರುವ ಭೂಮಿಯನ್ನು ಸರಕಾರ ತಕ್ಷಣ ವಶಪಡಿಸಿಕೊಂಡು ಭೂರಹಿತ ಕುಟುಂಬಗಳಿಗೆ ಹಂಚಿಕೆ ಮಾಡುವಂತೆ ಮನವಿ ಮಾಡಿದ ಅವರು 1991 ಮತ್ತು 1999 ರ ಅವಧಿಯಲ್ಲಿ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದ ಮತ್ತು ನಂತರದ ದಿನಗಳಲ್ಲಿ ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ಹಿಡುವಳಿದಾರರಿಗೆ ಮತ್ತೂಮ್ಮೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು  ಒತ್ತಾಯಿಸಿದರು. ಸರಕಾರ ಕೂಡಲೇ ಭೂನ್ಯಾಯ ಮಂಡಳಿ ರಚಿಸಿ ಭೂರಹಿತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡಬೇಕೆಂದರು. ಸುದ್ದಿಗೋಷ್ಠಿಯಲ್ಲಿ ಬಹುಜನ ಸಮಾಜ ಪಕ್ಷದ ಜಿಲ್ಲಾಧ್ಯಕ್ಷ ಕೆ.ಸಿ.ಶಿವಣ್ಣ, ಉಪಾಧ್ಯಕ್ಷ ಮಹಮದ್ ಅಫಿಜುಲ್ಲಾ, ತಾಲ್ಲೂಕು ಕಾರ್ಯದರ್ಶಿ ಶಿವರುದ್ರಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.