ತುಮಕೂರು

'ರಾಜ್ಯೋತ್ಸವ ನೆಪಮಾತ್ರ ಆಚರಣೆಯಾಗಬಾರದು'

Published On :

ಕುಣಿಗಲ್: ಕನ್ನಡ ರಾಜ್ಯೋತ್ಸವ ಕನ್ನಡ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಆಗಬೇಕಾದ ಚಿಂತನೆಗೆ ವೇದಿಕೆ ಒದಗಿಸಬೇಕೆ ಹೊರತು,  ನೆಪಮಾತ್ರಕ್ಕೆ ನಡೆಸುವ ಕಾರ್ಯಕ್ರಮವಾಗಬಾರದು ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ ಅಭಿಪ್ರಾಯಪಟ್ಟಿದ್ದಾರೆ.
ಪಟ್ಟಣದ ಮಹಾತ್ಮಗಾಂಧಿ ಕಾಲೇಜು ಮೈದಾನದಲ್ಲಿ ಇಲ್ಲಿನ 'ಕೆಚ್ಚೆದೆಯ ವೀರ ಕನ್ನಡಿಗರ ಬಳಗ' ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ದಿಸೆಯಲ್ಲಿ ಸಾಲುಮರದ ತಿಮ್ಮಕ್ಕ ಗ್ರಾಮಾಂತರ ಪ್ರದೇಶದಿಂದ ಬಂದಂತಹವರಾಗಿದ್ದರೂ, ಜಾಗತಿಕ ತಾಪಮಾನದಂತೆ ಗಂಭೀರ ಪರಿಣಾಮದ ಬಗಗಿನ ಅರಿವಿಲ್ಲದಿದ್ದರೂ ನಾವು ನಮ್ಮು ಸುತ್ತಮುತ್ತಲಿನ ಪರಿಸರವನ್ನು ಹಸಿರಾಗಿಸಿ, ಹಸಿರೇ ಉಸಿರೆಂಬ ನಿಟ್ಟಿನಲ್ಲಿ ಸದಾ ಶ್ರಮಿಸುತ್ತಿರುವುದು ಇತರರಿಗೂ ಮಾರ್ಗದರ್ಶಕರಾಗಿರುವುದು ಗಮನಾರ್ಹ ಎಂದರು.
ಸಂಸದ ಡಿ.ಕೆ.ಸುರೇಶ್ ಮಾತನಾಡಿ, ರಾಜ್ಯೋತ್ಸವ ಆಚರಣೆಯನ್ನು ವೈಭವಯುತವಾಗಿ ಆಚರಿಸುವುದು ಸಂಪ್ರದಾಯ ಮಾಡಿಕೊಂಡಿರುವುದು ಸ್ವಾಗತಾರ್ಹ. ಕನ್ನಡ ನಾಡು-ನುಡಿ, ನೆಲ-ಜಲದ ಸಂರಕ್ಷಣೆ ಜೊತೆಯಲ್ಲಿ ಭಾಷಾವಾರು ಪ್ರಾಂತ್ಯ ರಚನೆಯ ಮೇರೆಗೆ ರೂಪಿತಗೊಂಡ ಭಾಷೆಯ ಸಮಗ್ರ ಅಭಿವೃದ್ಧಿ ಕುರಿತು ಚಿಂತನೆ ನಡೆಸಬೇಕಾಗಿದೆ ಎಂದರು.
ಸಾಲುಮರದ ತಿಮ್ಮಕ್ಕ, ತಾಲೂಕು ಕಸಾಪ ಅಧ್ಯಕ್ಷ ದಿನೇಶ್ ಕುಮಾರ್, ಚಿತ್ರ ನಿರ್ದೇಶಕ ಪವನ್ ಒಡೆಯರ್, ಬೆಳ್ಳಿ ರಕ್ತನಿಧಿಯ ಲೋಕೇಶ್ ಸೇರಿದಂತೆ ಸಮಾಜದ ವಿವಿಧ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿದವರನ್ನು ಸನ್ಮಾನಿಸಲಾಯಿತು. ಮಾಜಿ ಶಾಸಕ ಬಿ.ಬಿ.ರಾಮಸ್ವಾಮಿಗೌಡ, ಶಶಿಕಿರಣ್, ಜಿಪಂ ಮಾಜಿ ಅಧ್ಯಕ್ಷ ಲಕ್ಷ್ಮೀನಾರಾಯಣ, ಪುರಸಭೆ ಸದಸ್ಯ ಶಂಕರ, ಬಳಗದ ಅಧ್ಯಕ್ಷ ಕುಣಿಗಲ್ ಶ್ರೀನಿವಾಸ್ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.