ರೈತನ ಆತ್ಮಹತ್ಯೆಗೆ ಸಿಎಂ ನಿರ್ಲಕ್ಷ್ಯವೇ ಕಾರಣ
ತಿಪಟೂರು: ರೈತ ವಿಠಲ ಭೀಮಪ್ಪ ಅರಬಾವಿ ಬೆಳಗಾವಿ ಸುವರ್ಣ ಸೌಧ ಎದುರು ಕಬ್ಬು ಬೆಳೆಗಾರರ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸಮಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯೇ ಪ್ರಮುಖ ಕಾರಣ ಎಂದು ತಾಲೂಕು ಕೆಜೆಪಿ ಘಟಕವು ಆರೋಪಿಸಿ ಸಿ.ಎಂ.ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸಿಂಗ್ರಿ ನಂಜಪ್ಪ ವೃತ್ತದಲ್ಲಿ ತಾಲ್ಲೂಕು ಕೆಜೆಪಿ ಮುಖಂಡರಾದ ಲೋಕೇಶ್ವರ ಅವರ ನೇತೃತ್ವದಲ್ಲಿ ಕೆಜೆಪಿ ಕಾರ್ಯಕರ್ತರು, ಮುಖ್ಯಮಂತ್ರಿ ರೈತ ಸಮುದಾಯದ ವಿರೋಧಿ ಎಂದು ಘೋಷಣೆ ಕೂಗುತ್ತಾ ಸಿದ್ದರಾಮಯ್ಯ ಅವರ ಪ್ರತಿಕೃತಿ ದಹಿಸಿದರು.
ಇಂದು ಕರವೇಯಿಂದ ಕನ್ನಡ ರಾಜ್ಯೋತ್ಸವ
ಹುಳಿಯಾರು: ಹೋಬಳಿ ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಕರವೇ ಮಹಿಳಾ ಘಟಕ ಹಾಗೂ ಹೋಬಳಿ ಸಂಘ ಸಂಸ್ಥೆಗಳ ಸಹಯೋಗದಲ್ಲಿ 58ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಶನಿವಾರ ನಡೆಯಲಿದೆ. ಬೆಳಿಗ್ಗೆ 9 ಗಂಟೆಗೆ ಕರವೇ ವೃತ್ತದಲ್ಲಿ ಧ್ವಜಾರೋಹಣ ನೆರವೇರಿಸಿ ನಂತರ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ನಾಸಿಕ್ ಡೋಲು ಸೇರಿದಂತೆ ವಿವಿಧ ವೇಷಗಳನ್ನು ಧರಿಸಿದ ವೇಷಧಾರಿಗಳೊಂದಿಗೆ ಮೆರವಣಿಗೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು, ಕನ್ನಡಾಭಿಮಾನಿಗಳು ಆಗಮಿಸಿಸುವಂತೆ ಹೋಬಳಿ ಘಟಕದ ಅಧ್ಯಕ್ಷ ಶ್ರೀನಿವಾಸ್ ಕೋರಿದ್ದಾರೆ.
ಮಕ್ಕಳಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ
ಹುಳಿಯಾರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಂದು ಕ್ಷೇತ್ರವೂ ನಿತ್ಯ ಪೈಪೋಟಿಯಿಂದ ಸಾಗುತ್ತಿರುವ ಹಿನ್ನಲೆಯಲ್ಲಿ ಪ್ರಾಥಮಿಕ ಹಂತದಿಂದದಲೇ ಮಕ್ಕಳಿಗೆ ಪಾಠದ ಜೊತೆಗೆ ವಿವಿಧ ಆಟೋಟಗಳಲ್ಲಿ ಭಾಗವಹಿಸುವಂತೆ ಮಾಡಿ ಅವರಲ್ಲಿ ಸ್ಪರ್ಧಾತ್ಮಕ ಮನೋಭಾವ ಮೂಡುವಂತೆ ಮಾಡಬೇಕೆಂದು ಹುಳಿಯಾರ್ ಕ್ಲ್ಲಸ್ಟರ್ನ ಸಿಆರ್ಪಿ ಪ್ರೇಮಲೀಲಾ ತಿಳಿಸಿದರು. ಹುಳಿಯಾರಿನ ಎಂಪಿಎಸ್ ಶಾಲಾ ಮೈದಾನದಲ್ಲಿ ನಡೆದ ಹೋಬಳಿ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಮಕ್ಕಳ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮಕ್ಕಳ ಬದುಕು ಸುಂದರವಾಗಿ ರೂಪಿಗೊಳ್ಳುವುದು ಅವರ ಪ್ರಾಥಮಿಕ ಹಂತದ ತರಗತಿಗಳಲ್ಲಿ. ಈ ಹಂತದಲ್ಲಿ ಶಿಕ್ಷಕರು ಮಕ್ಕಳಿಗೆ ಸೂಕ್ತರೀತಿಯಲ್ಲಿ ಬೋಧಿಸುವ ಮೂಲಕ ಅವರಲ್ಲಿ ಸಮಾಜದ ಬಗ್ಗೆ ಅರಿವು ಮೂಡಿಸಬೇಕು, ಜೊತೆಗೆ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ ಅವುಗಳಿಗೆ ಜೀವ ತುಂಬುವ ಕೆಲಸ ಮಾಡಬೇಕು ಎಂದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರೋಟರಿ ಸಂಸ್ಥೆ ಅಧ್ಯಕ್ಷೆ ಗಂಗಾಧರರಾವ್ ಮಾತನಾಡಿ, ಪ್ರತಿಯೊಂದು ಸ್ಪರ್ಧೆಯಲ್ಲಿ ಸೋಲು ಗೆಲವು ಇರುತ್ತದೆ. ಶಿಕ್ಷಕರು ಮಕ್ಕಳಿಗೆ ಆಟೋಟಗಳ ಬಗ್ಗೆ ಮನವರಿಕೆ ಮಾಡಿಕೊಟ್ಟು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ಮುಂದೆ ಬರುವಂತೆ ಮಾಡಬೇಕು ಎಂದರು. ರೋಟರಿ ಸಂಸ್ಥೆವತಿಯಿಂದ ಪ್ರಥಮ,ದ್ವಿತೀಯ, ತೃತೀಯ ಬಹುಮಾನವಾಗಿ ಪದಕೋಶಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಪಿಯುಸಿ ಶಾಲೆಯ ಸಂಗೀತ ಶಿಕ್ಷಕ ಸುಭಾಷ್ ಪಾಟೀಲ್, ಕನಕದಾಸ ಶಾಲೆಯ ಚಂದ್ರಯ್ಯ, ಬಸವಲಿಂಗಯ್ಯ, ಎಸ್.ಡಿ.ಎಂ.ಸಿ ಅಧ್ಯಕ್ಷ ಲೋಕೇಶಣ್ಣ ಸೇರಿದಂತೆ ಇತರ ಶಿಕ್ಷಕರು ಹಾಜರಿದ್ದರು. ಶಿಕ್ಷಕ ರಂಗಸ್ವಾಮಿ ಸ್ವಾಗತಿಸಿ, ದಕ್ಷಿಣಮೂರ್ತಿ ನಿರೂಪಿಸಿ, ಎಚ್.ಜಿ.ರಂಗಸ್ವಾಮಿ ವಂದಿಸಿದರು.
ಅಪರಿಚಿತ ವ್ಯಕ್ತಿ ಶವ ಪತ್ತೆ
ಕುಣಿಗಲ್: ಅಪರಿಚಿತ ವ್ಯಕ್ತಿಯ ಶವ ಕುಣಿಗಲ್ ದೊಡ್ಡಕೆರೆಯಲ್ಲಿ ಪತ್ತೆಯಾಗಿದೆ. ಮೃತನು ಸುಮಾರು 30 ವರ್ಷದವನಾಗಿದ್ದು, ಸ್ನಾನಮಾಡಲೆಂದು ಕೆರೆಗೆ ಇಳಿದು ಮೃತಪಟ್ಟಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಕತ್ತಿನಲ್ಲಿ ಕರೆದಾರ, ತಾಯಿತ ಇದ್ದು, ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

