ಬಾಲ್ಯವಿವಾಹ ನಿಷೇಧದ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಅಗತ್ಯ
ತಿಪಟೂರು: ಬಾಲ್ಯ ವಿವಾಹವನ್ನು ತಡೆಗಟ್ಟುವ ಸಲುವಾಗಿ ಪ್ರೌಢಶಾಲಾ ಮಟ್ಟದ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುತ್ತಿರುವುದು ಸಮಂಜಸವಾಗಿದೆ ಎಂದು ತಹಸೀಲ್ದಾರ್ ಮಂಜುನಾಥ್ ತಿಳಿಸಿದರು.
ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ ತಾಲೂಕು ಆಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಯೋಗದಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳ ಸಮಾಜದಲ್ಲಿ ಬಾಲ್ಯ ವಿವಾಹವನ್ನು ನಿರ್ಮೂಲನೆ ಕುರಿತಂತೆ ಅರಿವು ಮೂಡಿಸಲು ಮಾರ್ಗದರ್ಶನ ನೀಡಿದರು.
21ವರ್ಷ ಒಳಗಿನ ಹುಡುಗ ಹಾಗೂ 18 ವರ್ಷದೊಳಗಿನ ಹುಡುಗಿಯರ ನಡುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹ ಎಂದು ಪರಿಗಣಿಸಲಾಗುವುದು. ಆದ್ದರಿಂದ ಯಾವುದೇ ರೀತಿಯಲ್ಲೂ ಬಾಲ್ಯವಿವಾಹ ನಿಷೇಧದ ಕುರಿತಂತೆ ಕ್ರಮಕೈಗೊಳ್ಳಲು ವಿದ್ಯಾರ್ಥಿಗಳು ಗಮನಹರಿಸಬೇಕು. ಬಾಲ್ಯ ವಿವಾಹ ನಿಷೇಧ ಕಾರ್ಯಕ್ರಮದ ಅಭಿಯಾನವನ್ನು ಯಶಸ್ವಿಗೊಳಿಸಲು ವಿದ್ಯಾರ್ಥಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ತಿಳಿಸಿದರು. ಶಿಕ್ಷಣ ಸಂಯೋಜಕ ಕೋಡಚಾರ್ ವಿದ್ಯಾರ್ಥಿಯರಿಗೆ ಬಾಲ್ಯವಿವಾಹ ನಿಷೇಧ ಕಾಯ್ದೆ ಅನುಷ್ಠಾನ ಕುರಿತು ಪ್ರಮಾಣ ವಚನ ಬೋಧಿಸಿದರು. ಸಿಡಿಪಿಓ ಪಿ.ಓಂಕಾರಪ್ಪ ಪ್ರಾಸ್ತಾವಿಕ ನುಡಿಗಳನ್ನಾಡಿದರು.
ಸಮಾಜ ಕಲ್ಯಾಣಾಧಿಕಾರಿ ಮಂಜುನಾಥ್, ಕಾರ್ಮಿಕ ಅಧೀಕ್ಷಕ ಧರ್ಮಪ್ಪ, ಶಾಲಾ ಮುಖ್ಯೋಪಾಧ್ಯಾಯ ಸಿದ್ದರಾಜು, ಮೇಲ್ವಿಚಾರಕಿಯರಾದ ಬಿ.ಎನ್.ಪ್ರೇಮಾ, ಭಾಗ್ಯಮ್ಮ ಸೇರಿದಂತೆ ಶಾಲೆಯ ಎಲ್ಲಾ ಸಹ ಶಿಕ್ಷಕರು ಭಾಗವಹಿಸಿದ್ದರು. ಇದೇ ದಿನ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಗುರುಕುಲ ಆಂಗ್ಲ ಪ್ರೌಢಶಾಲೆ, ಠಾಗೂರ್ ಕನ್ನಡ ಮತ್ತು ಆಂಗ್ಲ ಪ್ರೌಢಶಾಲೆಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು. ಡಿ.9ರವರೆಗೆ ತಾಲೂಕಿನ ಎಲ್ಲಾ 58 ಪ್ರೌಢಶಾಲೆಗಳಲ್ಲಿ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದೆಂದು ಸಿಡಿಪಿಓ. ಪಿ.ಓಂಕಾರಪ್ಪ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

