'ವಿದ್ಯಾರ್ಥಿಗಳಿಗೆ ವಿಶಾಲ ಜಗತ್ತಿನ ಜ್ಞಾನ ಅಗತ್ಯ'
ತುಮಕೂರು: ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಪಠ್ಯದ ಜತೆಗೆ ವಿಶಾಲ ಜಗತ್ತಿನ ಜ್ಞಾನವನ್ನು ಅಳವಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ವಿದ್ಯಾವಾಹಿನಿ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಜಯಣ್ಣ ಅಭಿಪ್ರಾಯಪಟ್ಟರು. ಅವರು ನಗರದ ವಿದ್ಯಾವಾಹಿನಿ ಪ್ರಥಮ ದರ್ಜೆ ಕಾಲೇಜಿನ ಬಿಸಿಎ ವಿಭಾಗದ 3ನೇ ಮತ್ತು 5ನೇ ಸೆಮಿಸ್ಟರ್ನ ವಿದ್ಯಾರ್ಥಿಗಳು ಅಮೆರಿಕಾದ ಮಿಚಿಗನ್ ವಿವಿ ಯಿಂದ ಇಂಟರ್ನೆಟ್ ಟೆಕ್ನಾಲಜಿ ಅಂಡ್ ಸೆಕ್ಯೂರಿಟಿ ಎಂಬ ವಿಷಯ ಕುರಿತು ಆನ್ಲೈನ್ ಕೋರ್ಸ್ನಲ್ಲಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿ ಸರ್ಟಿಫಿಕೇಟ್ ಪಡೆದು ಕಾಲೇಜಿಗೆ ಕೀರ್ತಿ ತಂದ 42 ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿದರು.
ಸಂಸ್ಥೆಯ ಕಾರ್ಯದರ್ಶಿ ಎನ್.ಬಿ. ಪ್ರದೀಪ್ಕುಮಾರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ ಮಾತನಾಡಿ ಹೊರದೇಶದ ವಿಶ್ವವಿದ್ಯಾಲಯದಿಂದ ಆನ್ಲೈನ್ ಸರ್ಟಿಫಿಕೇಟ್ ಪಡೆದಿರುವ ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ. ನಮ್ಮ ಕಂಪ್ಯೂಟರ್ ಲ್ಯಾಬ್ಗಳಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಜತೆಗೆ ಇಂಟರ್ನೆಟ್ ಸೌಲಭ್ಯ ಕಲ್ಪಿಸಿದ್ದೇವೆ. ಇದರ ಸದುಪಯೋಗ ಪಡೆದುಕೊಂಡು ಇನ್ನೂ ಉನ್ನತ ಮಟ್ಟದ ಜ್ಞಾನವನ್ನು ಪಡೆದು ಎತ್ತರಕ್ಕೆ ಬೆಳೆಯುವಂತಾಗಬೇಕು ಎಂದು ಆಶಿಸಿದರು.
ಇಂತಹ ಕಾರ್ಯಕ್ರಮಗಳಿಗೆ ಮುಖ್ಯ ಪ್ರೇರಣೆಯಾಗಿ ಕೆಲಸ ಮಾಡಿದವರು ವಿಭಾಗದ ಮುಖ್ಯಸ್ಥ ಮಧುಪ್ರಿಯಾ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಉಪನ್ಯಾಸಕಿ ಕಲಾವತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

