ತುಮಕೂರು

'ಪವನ ಶಕ್ತಿ ಉತ್ಪಾದನೆಗೆ ಆದ್ಯತೆ ನೀಡಬೇಕು'

Published On :

ತುಮಕೂರು: ಕಡಿಮೆ ವೆಚ್ಚದಲ್ಲಿ  ಪವನಶಕ್ತಿ  ವಿದ್ಯುತ್ ಉತ್ಪಾದನೆ ಮಾಡಬಹುದಾಗಿದ್ದು ಪವನ ಶಕ್ತಿಗೆ ಆದ್ಯತೆ ನೀಡಬೇಕೆಂದು ಬೆಂಗಳೂರಿನ ಕೆಎಸ್ಸಿಎಸ್ಟಿಯ ಡಾ. ಎಸ್.ಜಿ. ಶ್ರೀಕಂಠೇಶ್ವರ ಸ್ವಾಮಿ ಅಭಿಪ್ರಾಯಪಟ್ಟರು.
ಅವರು ತುಮಕೂರಿನ ಸಿದ್ದಾರ್ಥ ಕಾಲೇಜಿನ ವಿದ್ಯುತ್ ಹಾಗೂ ವಿದ್ಯುನ್ಮಾನ ವಿಭಾಗದಿಂದ ಮೂರು ದಿವಸಗಳ ಕಾಲ ಪವನ ಶಕ್ತಿ ಉತ್ಪಾದನೆ ಕುರಿತ ತಾಂತ್ರಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ರಾಜ್ಯದಲ್ಲಿ ಕೇವಲ 20 ಮೆಗಾವ್ಯಾಟ್ ವಿದ್ಯುತ್ ಅನ್ನು ಪವನ ಶಕ್ತಿ ಮೂಲಕ ಉತ್ಪಾದಿಸಲಾಗುತ್ತಿದೆ. ಇನ್ನಷ್ಟು ಹೆಚ್ಚಿನ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಪವನ ಶಕ್ತಿಯಿಂದ ಸಾಧ್ಯ ಎಂದರು.
ಪ್ರಪಂಚದಲ್ಲಿ ಪವನಶಕ್ತಿ ವಿದ್ಯುತ್ ಉತ್ಪಾದನೆಯಲ್ಲಿ ಚೀನ ದೇಶ ಮೊದಲನೆ ಸ್ಥಾನದಲ್ಲಿದೆ. ಭಾರತದಲ್ಲಿ ಪವನ ಶಕ್ತಿ ಉತ್ಪಾದನೆಗೆ ಬೇಕಾದ ಎಲ್ಲಾ ಸೌಲಭ್ಯಗಳು ಇದ್ದರೂ ಕೂಡ ಅದಕ್ಕೆ ಹೆಚ್ಚಿನ ಆದ್ಯತೆ ಇಲ್ಲ ಎಂದು ಅವರು ವಿಷಾದಿಸಿದರು.
ತಮಿಳುನಾಡಿನಲ್ಲಿ ಹೆಚ್ಚು: ಭಾರತವು ಪವನಶಕ್ತಿ ಉತ್ಪಾದನೆಯಲ್ಲಿ 5ನೇ ಸ್ಥಾನದಲ್ಲಿದ್ದು ತಮಿಳುನಾಡಿನಲ್ಲಿ ಹೆಚ್ಚಿನ ಪವನಶಕ್ತಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ. ಆದ್ದರಿಂದ ಅವರು ಹೆಚ್ಚಿನ ಪ್ರಾಮುಖ್ಯತೆಯನ್ನು ಪವನಶಕ್ತಿ ವಿದ್ಯುತ್ ಉತ್ಪಾದನೆಗೆ ನೀಡಬೇಕೆಂದು ಕರೆ ನೀಡಿದರು.
ಅಧ್ಯಕ್ಷತೆಯನ್ನು ಸಂಸ್ಥೆಯ ಪ್ರಾಂಶುಪಾಲ ಡಾ. ಕೆ.ಎ. ಕೃಷ್ಣಮೂರ್ತಿ ವಹಿಸಿದ್ದರು. ಅವರು ಮಾತನಾಡಿ ನಾವು ವಿದ್ಯುತ್ ಬಳಕೆಯ ಜಾಗದಲ್ಲಿ ಒಂದು ಯೂನಿಟ್ ವಿದ್ಯುತ್ ಉಳಿಸಿದರೆ ಉತ್ಪಾದನಾ ಜಾಗದಲ್ಲಿ ಐದು ಯೂನಿಟ್ ಉತ್ಪಾದನೆ ಮಾಡಿದಂತಾಗುತ್ತದೆ ಎಂದರು.  

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.