ನಿಟ್ಟೂರು ಬ್ಲಾಕ್ ಕಾಂಗ್ರೆಸ್ಗೆ ನೇಮಕ
ಗುಬ್ಬಿ: ಗುಬ್ಬಿ ವಿಧಾನಸಭಾ ಕ್ಷೇತ್ರದಲ್ಲಿನ ಎರಡು ಬ್ಲಾಕ್ ನ ಎಲ್ಲಾ ಕಾರ್ಯಕರ್ತರು ಒಗ್ಗೂಡಿ ಚುನಾವಣೆ ಎದುರಿಸಲು ರೂಪು ರೇಷೆ ರಚಿಸಬೇಕಿದೆ ಎಂದು ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಕರಾನಂದ ತಿಳಿಸಿದರು. ಪಟ್ಟಣದ ಪ್ರವಾಸಿಮಂದಿರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಗಳಿಸಿದ ಮತಗಳೊಟ್ಟಿಗೆ ಕೇಂದ್ರ ಮತ್ತು ರಾಜ್ಯದ ಕಾಂಗ್ರೆಸ್ ಸರ್ಕಾರ ಕೈಗೊಂಡ ಜನಪರ ಕಾರ್ಯಗಳನ್ನು ಮನಗೊಂಡ ಮತದಾರ ಕಾಂಗ್ರೆಸ್ಗೆ ಮತ ನೀಡುವ ಭರವಸೆ ಇದೆ ಎಂದರು.
ಕಾರ್ಯಕರ್ತರ ಸಭೆ: ಸೆ.5 ರಂದು ಪಟ್ಟಣದ ಎಸ್.ಎಂ.ಪ್ಯಾಲೇಸ್ನಲ್ಲಿ ಕಾರ್ಯಕರ್ತರ ಸಭೆ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ಅವರ ನೇತೃತ್ವದಲ್ಲಿ ನಡೆಯುವ ಈ ಸಭೆಗೆ ರಾಜ್ಯ ವೀಕ್ಷಕರಾದ ಮಹಿಮಾ ಪಟೇಲ್, ಎಸ್ಸಿ ಘಟಕದ ರಾಜ್ಯಾಧ್ಯಕ್ಷ ಮಂಜುನಾಥ್, ಕಾನೂನು ಘಟಕದ ರಾಜ್ಯಾಧ್ಯಕ್ಷ ಧನಂಜಯ ಭಾಗವಹಿಸಿ ಮುಂದಿನ ನಡೆ ಬಗ್ಗೆ ಚರ್ಚಿಸಿ, ಅಗತ್ಯ ಮಾರ್ಗದರ್ಶನ ನೀಡಲಿದ್ದಾರೆ ಎಂದರು. ಕೆಪಿಸಿಸಿ ಸದಸ್ಯ ಕೆ.ಆರ್.ತಾತಯ್ಯ, ಎಸ್ಸಿ ಘಟಕದ ದೊಡ್ಡಯ್ಯ, ಯುವ ಕಾಂಗ್ರೆಸ್ನ ಮಂಜುನಾಥ್, ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ತಿಪಟೂರಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ
ತಿಪಟೂರು: ನಗರದ ಚಿನ್ಮಯ ಮಿಷನ್ ವತಿಯಿಂದ ಶ್ರೀಕೃಷ್ಣ ಮಂದಿರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶ್ರದ್ಧಾಭಕ್ತಿ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಸಾಮೂಹಿಕ ವಿಷ್ಣು ಸಹಸ್ರನಾಮ ಪಾರಾಯಣ, ಭಜನೆ ಮತ್ತು ಶ್ರೀಕೃಷ್ಣನಿಗೆ ಏಕದಶ ದ್ರವ್ಯಗಳಿಂದ ಅಭಿಷೇಕ, ತುಳಸಿ ಅರ್ಚನೆ, ಸಾಮೂಹಿಕ ಮುಕುಂದಮಾಲಾ ಪಾರಾಯಣ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮಗಳು ನಡೆದವು. ಅಲ್ಲದೆ ಶ್ರೀಕೃಷ್ಣ ಲೀಲಾಮೃತ ನೃತ್ಯ ರೂಪಕ ಜೊತೆಗೆ ಸಂಗೀತ ಕಲಾಕಾರರೆಲ್ಲರೂ ಒಂದುಗೂಡಿ ಶ್ರೀಕೃಷ್ಣನ ಭಜನೆಗಳನ್ನೊಳಗೊಂಡ ಭಜನ ಸಂಧ್ಯಾ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆದವು. ಶ್ರೀ ಕೃಷ್ಣ ಮಂದಿರದಲ್ಲಿ ವೇದಮಂತ್ರ, ಯೋಗಾಸನ, ಬಾಲವಿಹಾರ, ದೇವಿಗ್ರೂಪ್, ಸ್ವಾಧ್ಯಾಯ ತರಗತಿಗಳು ಜೊತೆಗೆ ಭಗವದ್ಗೀತೆ ಕಂಠಪಾಠ ಸ್ಪರ್ಧೆಗಳು ನಡೆಯಲಿದ್ದು, ಆಸಕ್ತರು 08134-254206 ಅಥವಾ 9986963638 ಸಂಪರ್ಕಿಸಬಹುದೆಂದು ಕಾರ್ಯದರ್ಶಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

