ವಿವಿ ಪ್ರತ್ಯೇಕ ಕ್ಯಾಂಪಸ್ ಚಿಂತನೆ
ಕನ್ನಡಪ್ರಭ ವಾರ್ತೆ ತುಮಕೂರು ಸೆ.4
ತುಮಕೂರು ವಿಶ್ವ ವಿದ್ಯಾಲಯಕ್ಕೆ ಇದೇ ತಿಂಗಳ 18 ರಂದು ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಆಗಮಿಸಲಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತುಮಕೂರು ವಿವಿ ಕುಲಪತಿ ಡಾ. ಎ.ಎಚ್. ರಾಜಾಸಾಬ್ ತಿಳಿಸಿದರು. ಅವರು ತುಮಕೂರು ವಿವಿ ಕುಲಪತಿಯಾದ ನಂತರ ಕರೆಯಲಾಗಿದ್ದ ಪ್ರಥಮ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.
ಕಲಾಂ ಅವರ ಭೇಟಿ ತುಮಕೂರು ವಿವಿಗೆ ಇದೇ ಮೊದನೆಯದಾಗಿದ್ದು, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂವಾದದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
ಹೊಸ ಕೋರ್ಸ್: ತುಮಕೂರು ವಿವಿ ಶೈಕ್ಷಣಿಕ ಪ್ರಗತಿಯ ದೃಷ್ಟಿಯಿಂದ ಹಲವಾರು ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲು ಚಿಂತನೆ ನಡೆಸಿದೆ. ಜಿಲ್ಲೆಯ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸಸ್ಯಶಾಸ್ತ್ರ, ಪ್ರಾಣಿಶಾಸ್ತ್ರ, ಜೈವಿಕ ತಂತ್ರಜ್ಞಾನ ಹಾಗೂ ಸೂಕ್ಷ್ಮಜೀವಶಾಸ್ತ್ರ ವಿಷಯಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಪ್ರಸ್ತಾವನೆಗೆ ಈಗಾಗಲೇ ವಿಶ್ವ ವಿದ್ಯಾಲಯದ ಹಣಕಾಸು ಸಮಿತಿ, ವಿದ್ಯಾವಿಷಯಕ ಪರಿಷತ್, ಸಿಂಡಿಕೇಟ್ ಸಮಿತಿ ಅನುಮೋದನೆ ನೀಡಿವೆ. ಎಂದರು.
ಬಿಕಾಂಗೆ ಬೇಡಿಕೆ: ವಿಶ್ವ ವಿದ್ಯಾಲಯದ ಘಟಕ ಕಾಲೇಜಿನಲ್ಲಿ ಬಿಕಾಂ ತರಗತಿಗಳಿಗೆ ಹೆಚ್ಚಿನ ಬೇಡಿಕೆಯಿರುವುದು ಕಂಡು ಬಂದಿದೆ. ಪ್ರಸಕ್ತ ವರ್ಷದಲ್ಲೇ ಒಂದು ಹೆಚ್ಚುವರಿ ವಿಭಾಗವನ್ನು ತೆರೆಯಲಾಗಿದೆ. ಮುಂದಿನ ವರ್ಷ ಇನ್ನಷ್ಟು ವಿಭಾಗ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಈ ನಿಟ್ಟಿನಲ್ಲಿ 4 ಹೆಚ್ಚುವರಿ ಬೋಧಕ ಹುದ್ದೆಗೆ ಅನುಮೋದನೆ ಕೋರಿ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲಾಗಿದೆ. ಬಿಕಾಂಗೆ ಪ್ರತ್ಯೇಕ ಕಾಲೇಜು ತೆರೆಯಲು ಕನಿಷ್ಟ ರು. 1 ಕೋಟಿ ಗಳಿಗಿಂತಲೂ ಹೆಚ್ಚು ಹಣ ಬೇಕಿದೆ. ಜತೆಗೆ ಸಿಬ್ಬಂದಿ ಹೆಚ್ಚುವರಿಯಾಗಿ ಬೇಕಾಗಲಿದೆ ಎಂದರು.
ಪ್ರತ್ಯೇಕ ಕ್ಯಾಂಪಸ್ಗೆ ಪ್ರಸ್ತಾವನೆ: ವಿಶ್ವ ವಿದ್ಯಾಲಯಕ್ಕೆ ಪ್ರತ್ಯೇಕ ಕ್ಯಾಂಪಸ್ ಹೊಂದಲು ಕನಿಷ್ಠ 250-300 ಎಕರೆ ಜಾಗದ ಅವಶ್ಯಕತೆಯಿದೆ. ದೇವರಾಯನದುರ್ಗದ ಹಳೇ ಜಾಗವನ್ನು ತಾವು ಪರಿಶೀಲಿಸಿರುವುದಾಗಿಯೂ, ಪ್ರಕರಣ ನ್ಯಾಯಾಲಯದಲ್ಲಿರುವುದು ತಮ್ಮ ಗಮನಕ್ಕೆ ಬಂದಿದೆ. ಬಿದರೆಕಟ್ಟೆ ಬಳಿ 142 ಎಕರೆ ಇರುವುದು ಕಂಡು ಬಂದಿದೆ. ಕೋರಾದ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 300 ಎಕರೆ ಕೊಟ್ಟರೂ ಸರಿಯೇ ಎಂದ ಕುಲಪತಿಗಳು, ಆದಷ್ಚು ಬೇಗ ಸರ್ಕಾರ ವಿವಿ ಗೆ ಕನಿಷ್ಠ 250 ರಿಂದ 300 ಎಕರೆ ಜಾಗ ನೀಡುವಂತೆ ಮನವಿ ಮಾಡಲಾಗಿದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

