ಸಮರ್ಪಕ ಸಾರಿಗೆ ಸೌಲಭ್ಯಕ್ಕೆ ಆಗ್ರಹಿಸಿ ರಸ್ತೆ ತಡೆ
ಕನ್ನಡಪ್ರಭ ವಾರ್ತೆ ತುಮಕೂರು ಸೆ.4
ಪಾವಗಡ ಕೆಎಸ್ಆರ್ಟಿಸಿ ಬಸ್ ಸೌಲಭ್ಯಕ್ಕೆ ಒತ್ತಾಯಿಸಿ ಪಟ್ಟಣದ ಚಳ್ಳಕೆರೆ ರಸ್ತೆಯಲ್ಲಿ ಎಸ್.ಎಫ್.ಐ ವಿದ್ಯಾರ್ಥಿಗಳು ಶಾಲಾ ಕಾಲೇಜು ತೊರೆದು ರಸ್ತೆ ತಡೆ ಚಳುವಳಿ ನಡೆಸಿದರು.
ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಎಸ್ಎಫ್ಐ ಜಿಲ್ಲಾ ಕಾರ್ಯದರ್ಶಿ ಇ. ಶಿವಣ್ಣ ವೆಂಕಟಾಪುರ, ವೈ.ಎನ್. ಹೊಸಕೋಟೆ, ಅರಸಿಕೆರೆ ಮಾರ್ಗವಾಗಿ ವಿದ್ಯಾರ್ಥಿಗಳು ಶಾಲಾ- ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ತೆರಳಲು ಕೆಎಸ್ಆರ್ಟಿಸಿ ಬಸ್ಗಳು ಸಂಚರಿಸುತ್ತಿಲ್ಲ.
ಬಸ್ಪಾಸ್ ಹೊಂದಿದ್ದರು ಸಹ ಯಾವುದೇ ಪ್ರಯೋಜನವಾಗುತ್ತಿಲ್ಲ. ಅಲ್ಲದೆ ಪ್ರತಿ ದಿನ ಖಾಸಗಿ ಬಸ್ಗಳಿಗೆ ಹಣ ನೀಡಿ ಶಾಲಾ-ಕಾಲೇಜುಗಳಿಗೆ ತೆರಳಲು ಕಷ್ಟಕರವಾದ ಸ್ಥಿತಿ ವಿದ್ಯಾರ್ಥಿಗಳಲ್ಲಿ ಇದೆ.
ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿ ಪ್ರತಿದಿನ ಹಣ ಹೊಂದಿಸಲು ಸಾಧ್ಯವಾಗದ ಕಾರಣ ಸರ್ಕಾರಿ ಬಸ್ನ ವಿದ್ಯಾರ್ಥಿ ಪಾಸ್ಗಳನ್ನು ಪಡೆದಿರುತ್ತಾರೆ.
ಪಾಸ್ ಇದ್ದರೂ ಪ್ರಯಾಣಿಸುವಂತಿಲ್ಲ: ಯಾವುದೇ ಸರ್ಕಾರಿ ಬಸ್ಗಳು ಸಮಯಕ್ಕೆ ಸರಿಯಾಗಿ ಬಾರದೇ ಇರುವುದು ಒಂದೆಡೆಯಾದರೆ, ಬರುವ ಅಲ್ಪ-ಸ್ವಲ್ಪಬಸ್ಗಳು ಸಹ ವಿದ್ಯಾರ್ಥಿ ಪಾಸ್ಗಳನ್ನು ಕಡೆಗಣಿಸಿ ವಿದ್ಯಾರ್ಥಿಗಳನ್ನು ಬಸ್ಗೆ ಹತ್ತಿಸದೆ ಸಂಚರಿಸುತ್ತಿವೆ ಎಂದಿದ್ದಾರೆ.
ಬಸ್ಗಳು ಸರಿಯಾದ ಸಮಯಕ್ಕೆ ಬಾರದ ಕಾರಣ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ಹೋಗಲು ಸಾದ್ಯವಾಗುತ್ತಿಲ್ಲ. ಕೂಡಲೇ ಇತ್ತ ಗಮನಹರಿಸಿ ಸೂಕ್ತ ಸಮಯಕ್ಕೆ ಸರ್ಕಾರಿ ಬಸ್ ಸಂಚರಿಸುವಂತೆ ಮಾಡಬೇಕು ಎಂದು ಇ. ಶಿವಣ್ಣ ಆಗ್ರಹಿಸಿದ್ದಾರೆ.
ಅಧಿಕಾರಿಗಳು ಇತ್ತ ಗಮನಹರಿಸಲಿ: ಇದು ಕೇವಲ ಪಾವಗಡ ತಾಲೂಕಿನ ಸಮಸ್ಯೆ ಮಾತ್ರವಲ್ಲದೆ ಇಡೀ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಇದೇ ಸ್ಥತಿ ಇದೆ ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಗಮನ ಹರಿಸಿ ವಿದ್ಯಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿರುವ ಅವರು ಸಾರಿಗೆ ಇಲಾಖೆಯ ಅಧಿಕಾರಿಗಳು ಈ ಕೂಡಲೇ ಸೂಕ್ತ ಕ್ರಮ ಕೈಗೊಳ್ಲದೆ ಹೋದರೆ ಉಗ್ರ ಹೋರಾಟಕ್ಕೆ ಎಸ್.ಎಫ್.ಐ ಮುಂದಾಗಲಿದೆ ಎಂದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಕೆ.ಎಸ್.ಆರ್.ಟಿ.ಸಿ ಡಿಪೋ ಈರಣ್ಣ ಆಗಮಿಸಿ ಬೇಡಿಕೆಗಳ ಮನವಿ ಪತ್ರವನು ಪಡೆದು ಸಮಸ್ಯೆಯನ್ನು ಬಗೆಹರಿಸುವ ಭರವಸೆ ನೀಡಿದರು.
ಎಸ್.ಎಫ್.ಐ ತಾಲೂಕು ಮುಖಂಡರಾದ ನವೀನ್, ಚೈತ್ರ, ಚಾಂದೂ ಸುಬ್ರಮಣ್ಯ, ಗಾಯತ್ರಿ, ವೆಂಕಟೇಶ್, ಸುಮಿತ್ರ ಮುಂತಾದವರು ಪ್ರತಿಭಟನೆ ನೇತೃತ್ವ ವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

