ತುಮಕೂರು

'ಸರ್ಕಾರಿ ಒತ್ತುವರಿ ಭೂಮಿ ವಶಕ್ಕೆ ಚಾಲನೆ'

Published On :

ತುಮಕೂರು: ಒತ್ತುವರಿಯಾಗಿರುವ ಸರ್ಕಾರಿ ಭೂಮಿ ವಶಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ತಿಳಿಸಿದರು.
ಅವರು ತುಮಕೂರಿನಲ್ಲಿ ಏರ್ಪಾಟಾಗಿದ್ದ ದಲಿತರ ಹಾಗೂ ಬಡವರ ಭೂಮಿ ಸಂರಕ್ಷಣಾ ಸಮಾರಂಭದಲ್ಲಿ ಭೂಮಿ ನಮ್ಮ ಹಕ್ಕು ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದರು.
ಬೆಂಗಳೂರಿನಲ್ಲಿ ಒಂದುವರೆ ಲಕ್ಷಕ್ಕೂ ಹೆಚ್ಚು ಎಕರೆ ಪ್ರದೇಶ ಒತ್ತುವರಿಯಾಗಿರುವುದು ಕಂಡು ಬಂದಿದ್ದು, ಈಗಾಗಲೇ 30 ಸಾವಿರಕ್ಕೂ ಹೆಚ್ಚು ಎಕರೆ ಪ್ರದೇಶವನ್ನು ವಾಪಸ್ ಪಡೆಯಲಾಗಿದೆ. ಹಾಗೆಯೇ ವಿವಿಧ ಜಿಲ್ಲೆಗಳಲ್ಲಿ 11 ವರೆ ಲಕ್ಷಕ್ಕೂ ಹೆಚ್ಚು ಎಕರೆ ಸರ್ಕಾರಿ ಭೂಮಿ ಒತ್ತುವರಿಯಾಗಿರುವುದು ಕಂಡು ಬಂದಿದೆ. ಇದನ್ನು ಕೂಡ ವಾಪಸ್ ಪಡೆಯಲು ಕ್ರಮ ವಹಿಸಲಾಗಿದೆ ಎಂದರು.
ದಲಿತರ, ಬಡಜನತೆಯ ಭೂಮಿ ನುಂಗಿರುವವರ ಕುರಿತು ಕ್ರಮ ತೆಗೆದುಕೊಳ್ಳಲಾಗುವುದು. ಕೇವಲ ಹೆಂಡಕ್ಕೆ ದಲಿತರ, ಬಡ ಜನತೆಯ ಭೂಮಿ ಮಾರಾಟವಾಗಿರುವ ಉದಾಹರಣೆಗಳಿವೆ ಎಂದು ಸಚಿವರು ಮಾರ್ಮಿಕವಾಗಿ ನುಡಿದರು.
ಸಾಮಾಜಿಕ ನ್ಯಾಯಕ್ಕೆ ಬದ್ಧ:  ಕಾಂಗ್ರೆಸ್ ಸರ್ಕಾರ ದಲಿತರ, ಬಡಜನತೆಯ ಪರವಾಗಿದೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿದೆ. ಕಾನೂನು ಮೂಲಕ ಬದಲಾವಣೆ ಸಾಧ್ಯ. ಸಂವಿಧಾನದ ಆಶಯ ಈಡೇರಿಸಲು ಬದ್ದವಾಗಿದ್ದು, ದಲಿತರ, ಬಡಜನತೆಯ ಭೂಮಿ ಕಬಳಿಸುವವರ, ಸರ್ಕಾರಿ ಭೂಮಿ ಒತ್ತುವರಿದಾರರ ವಿರುದ್ದ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಜರುಗಿಸಲಾಗುತ್ತದೆ. ಇದರಲ್ಲಿ ಯಾವುದೇ ರಾಜಿಯಿಲ್ಲ ಎಂದು ಸಮಾರಂಭದಲ್ಲಿ ಉಪಸ್ಥಿತರಿದ್ದ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಭರವಸೆ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.