ಒತ್ತುವರಿ ಭೂಮಿ ವಾಪಸ್ಗೆ ಸಮಿತಿ ರಚನೆ
ತುಮಕೂರು: ಹೊಸ ತಾಲೂಕುಗಳ ರಚನೆಯಿಂದ ಸರ್ಕಾರ ಹಿಂದೆ ಸರಿದಿಲ್ಲ ಎಂದು ಕಂದಾಯ ಸಚಿವ ವಿ. ಶ್ರೀನಿವಾಸ ಪ್ರಸಾದ್ ಸ್ಪಷ್ಟಪಡಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 43 ಹೊಸ ತಾಲೂಕುಗಳ ರಚನೆಗೆ ಪ್ರಸ್ತಾಪವಿದೆ. ಹೊಸ ತಾಲೂಕುಗಳ ರಚನೆಗೆ ದೊಡ್ಡ ಮೊತ್ತದ ಹಣ ಬೇಕಾಗುತ್ತದೆ. ಸಂಪನ್ಮೂಲ ಕ್ರೋಢೀಕರಣದ ಜತೆಗೆ ಹೊಸ ತಾಲೂಕುಗಳ ರಚನೆಗೆ ಸರ್ಕಾರ ಚಾಲನೆ ನೀಡಲಿದೆ. ಹೊಸ ತಾಲೂಕುಗಳ ರಚನೆ ಸಂಬಂಧ ಈಗಾಗಲೇ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ ಎಂದರು.
ಹೊಸ ಟಾಸ್ಕ್ಪೋರ್ಸ್: ರಾಜ್ಯ ಸರ್ಕಾರ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಯೋಜನೆ ಜಾರಿಗೆ ಸಾವಿರಾರು ಕೋಟಿ ಖರ್ಚಾಗಿದೆ.
ಸರ್ಕಾರಿ ಭೂಮಿ ಒತ್ತುವರಿ ಸಂಬಂಧ ನೇಮಿಸಲಾಗಿದ್ದ ಎ.ಟಿ. ರಾಮಸ್ವಾಮಿ ವರದಿ ಹಾಗೂ ಬಾಲಸುಬ್ರಮಣ್ಯಂ ವರದಿ ಜಾರಿಗೆ ನಿವೃತ್ತ ಐಎಎಸ್ ಅಧಿಕಾರಿ ಅಧ್ಯಕ್ಷತೆಯಲ್ಲಿ ಹೊಸ ಟಾಸ್ಕ್ಪೋರ್ಸ್ ರಚಿಸಿ, ಭೂಮಿ ವಾಪಸ್ ಪಡೆಯಲು ಶೀಘ್ರದಲ್ಲೇ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ನಕ್ಸಲ್ ಮಾತುಕತೆಗೆ ಆಹ್ವಾನ: ನಕ್ಸಲ್ ಚಟುವಟಿಕೆ ರಾಜ್ಯದಲ್ಲಿ ಇಳಿಮುಖವಾಗಿದೆ. ಇನ್ನೂ ನಕ್ಸಲ್ ಚಟುವಟಿಕೆಯಲ್ಲಿರುವವರಿಗೆ ಮಾತುಕತೆಗೆ ಆಹ್ವಾನಿಸಲಾಗಿದೆ. ಮಾತುಕತೆ ಮೂಲಕ ಸಮಸ್ಯೆ ಬಗಹೆರಿಸುವ ಪ್ರಯತ್ನ ಮಾಡಲಾಗುವುದು ಎಂದು ಶ್ರೀನಿವಾಸಪ್ರಸಾದ್ ತಿಳಿಸಿದರು.
100 ದಿನಗಳ ಆಡಳಿತ ತೃಪ್ತಿ ತಂದಿದೆ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ 100 ದಿನಗಳ ಆಡಳಿತ ತೃಪ್ತಿ ತಂದಿದೆ. ಹೀಗಾಗಿ ಇತ್ತೀಚೆಗೆ ನಡೆದ ಲೋಕಸಭಾ ಉಪಚುನಾವಣೆಯಲ್ಲಿ ಜನತೆ ಗೆಲುವು ತಂದುಕೊಟ್ಟಿದ್ದಾರೆ. ಮುಂಬರುವ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸ ಕಾಂಗ್ರೆಸ್ಗಿದೆ. ಲೋಕಸಭಾ ಚುನಾವಣೆ ಸಂಬಂಧ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ಗಾಂಧಿ ಈಗಾಗಲೇ ಸೂಚನೆ ನೀಡಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

