ನಗರ ಕಾಲೇಜುಗಳಲ್ಲಿ ಪಠ್ಯೇತರ ಚಟುವಟಿಕೆ ಉದ್ಘಾಟನೆ
ಕನ್ನಡಪ್ರಭ ವಾರ್ತೆ ಹಾಸನ ಸೆ. 4
ನಗರದ ಪ್ರತ್ಯೇಕ ಕಾಲೇಜುಗಳಲ್ಲಿ ಬುಧವಾರ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು. ಸಾಂಸ್ಕೃತಿಕ ಚಟುವಟಿಕೆ, ಎನ್ಎಸ್ಎಸ್, ಸ್ಕೌಟ್ಸ್ ಗೈಡ್ಸ್ ಸೇರಿದಂತೆ ನಾನಾ ಸಂಘಗಳ ಚಟುವಟಿಕೆಗಳ ಉದ್ಘಾಟನೆಗೊಂಡಿತು.
ಕಲಾ ಕಾಲೇಜು: ಕಾಲೇಜು ಶಿಕ್ಷಣ ಇಲಾಖೆ ಮತ್ತು ಸರ್ಕಾರಿ ಕಲಾ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ನಡೆದ ಪಠ್ಯೇತರ ಚಟುವಟಿಕೆಗಳನ್ನು ಶಾಸಕ ಎಚ್.ಎಸ್.ಪ್ರಕಾಶ್ ಉದ್ಘಾಟಿಸಿದರು. ಉಪನ್ಯಾಸಕರ ಹುದ್ದೆ ಮಹತ್ವಾದಾಗಿದ್ದು, ಸಮಾಜದಲ್ಲಿ ಅವರಿಗೆ ಗೌರವ ನೀಡಬೇಕು. ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಉಪನ್ಯಾಸಕರ ಮೇಲೆ ಗೌರವ ಕಡಿಮೆಯಾಗುತ್ತಿದೆ ಎಂದ ಅವರು, ಇತ್ತೀಚೆಗೆ ವಿದ್ಯಾರ್ಥಿಗಳು ವಿಚಾರ ವಿನಿಮಯ ಮಾಡಿಕೊಳ್ಳುವಂತಹ ಭಾವನೆ ಇಲ್ಲ. ಆದ್ದರಿಂದ ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಂಡು ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಹೇಳಿದರು. ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್, ಸಂಸ್ಕೃತಿ ಚಿಂತಕ ಪ್ರೊ.ಹಿ.ಶಿ.ರಾಮಚಂದ್ರೇಗೌಡ, ಕಾಲೇಜಿನ ಪ್ರಾಂಶುಪಾಲ ಡಾ.ಐ.ಎಂ.ಮೋಹನ್ ಇತರರು ಇದ್ದರು.
ಎವಿಕೆ ಕಾಲೇಜು: ನಾನಾ ಸಂಘಗಳನ್ನು ಜಿಲ್ಲಾ ಎಸ್ಪಿ ರವಿ ಡಿ.ಚನ್ನಣ್ಣನವರ್ ಉದ್ಘಾಟಿಸಿದರು. ದೇಶಕ್ಕೆ ಸಚ್ಚಾತ್ರಿತರು ಬೇಕಾಗಿದ್ದಾರೆ. ಜೊತೆಗೆ ಶಿಕ್ಷಣ ತಜ್ಞರ ಅವಶ್ಯಕತೆ ಇದೆ ಎಂದ ಅವರು, ವಿದ್ಯಾರ್ಥಿಗಳ ಕೇವಲ ಶಿಕ್ಷಿತರಾದರೇ ಸಾಲದು. ಕಲಿಕೆಯ ಸಂದರ್ಭದಲ್ಲಿ ಪ್ರಶ್ನಿಸುವಂತಹ ಮನೋಭಾವ ಹೊಂದಿ ಶಿಕ್ಷಣವನ್ನು ಕಲಿತಾಗ ಮಾತ್ರ ಜೀವನದಲ್ಲಿ ಸಾಧನೆ ಮಾಡಲು ಸಾಧ್ಯ. ಯಾರು ಶ್ರಮಪಟ್ಟು ಶ್ರದ್ಧೆಯಿಂದ ಕಲಿಯುತ್ತಾರೋ ಅಂತವರು ತಮ್ಮ ಗುರಿಯನ್ನು ಮುಟ್ಟುತ್ತಾರೆ. ಆದ್ದರಿಂದ ಯಾವುದೇ ಕೆಲಸ ಮಾಡಿದರೂ ಬಹಳ ಶ್ರದ್ಧೆ ಹಾಗೂ ಶ್ರಮದಿಂದ ಮಾಡಬೇಕು ಎಂದು ಕಿವಿ ಮಾತು ಹೇಳಿದರು.
ಮಾಜಿ ಶಾಸಕ ಬಿ.ಆರ್.ಗುರುದೇವ್, ಕಾಲೇಜಿ ಆಡಳಿತ ಮಂಡಳಿಯ ಆರ್.ಟಿ.ದೇವೇಗೌಡ, ಶ್ರೀಕಂಠ, ಎ.ಜೆ.ರಾಮನಾಥನ್, ಖಜಾಂಚಿ ಶೇಷಗಿರಿ, ಪದವಿ ಕಾಲೇಜಿನ ಪ್ರಾಂಶುಪಾಲೆ ಶೈಲಜಾಕುಮಾರಿ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶಶಿಕಲಾ ಮೊದಲಾದವರು ಕಾರ್ಯಕ್ರಮದಲ್ಲಿ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

