'ಪೌಷ್ಟಿಕ ಆಹಾರಕ್ಕೆ ಆದ್ಯತೆ ಇರಲಿ'
ಗುಬ್ಬಿ: ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕತೆಯುಳ್ಳ ಆಹಾರ ನೀಡುವ ಮೂಲಕ ಮಕ್ಕಳನ್ನು ಉತ್ತಮ ಆರೋಗ್ಯವಂತರನ್ನಾಗಿ ಮಾಡುವತ್ತ ತಾಯಂದಿರು ಹೆಚ್ಚಿನ ಗಮನ ಹರಿಸುವಂತೆ ತಾಲ್ಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಹೊನ್ನೇಶಪ್ಪ ನೀಡಿದರು.
ತಾಲೂಕಿನ ಬಿದರೆ ವೃತ್ತದ ತಿರುಮಲದೇವರ ಹಟ್ಟಿ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಏರ್ಪಡಿಸಿದ್ದ ವಿಶ್ವ ಪೌಷ್ಟಿಕತಾ ಸಪ್ತಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಸಿಗುವ ಸ್ಥಳೀಯ ಹಣ್ಣು-ತರಕಾರಿಗಳನ್ನು ಬಳಸಿಕೊಂಡು ಗುಣಮಟ್ಟದ ಅಡುಗೆ ತಯಾರಿಸಿ ತಮ್ಮ ಮಕ್ಕಳಿಗೆ ನೀಡುವುದರಿಂದ ಮಕ್ಕಳು ಉತ್ತಮ ಆರೋಗ್ಯವಂತರಾಗಲು ಸಾಧ್ಯ ಎಂದರು.
ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಬಹಳಷ್ಟು ಮಕ್ಕಳು ಅಪೌಷ್ಟಿಕತೆಯ ಸಮಸ್ಯೆ ಎದುರಿಸುತ್ತಿದ್ದು, ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳ ತಾಯಂದಿರಿಗೆ ಸ್ಥಳೀಯವಾಗಿ ದೊರೆಯುವ ಸೊಪ್ಪು ಮತ್ತು ತರಕಾರಿಗಳನ್ನು ಬಳಸಿಕೊಂಡು ಉತ್ತಮ ಪೌಷ್ಟಿಕತೆಯಿಂದ ಕೂಡಿದ ಆಹಾರಗಳನ್ನು ತಯಾರಿಸಲು ಸೂಕ್ತ ಮಾಹಿತಿ ಮತ್ತು ಮಾ ರ್ಗದರ್ಶನ ನೀಡಲಾಗುತ್ತಿದೆ ಎಂದು ತಿಳಿಸಿದರು.
ತಾಪಂ ಉಪಾಧ್ಯಕ್ಷೆ ಚಿಕ್ಕಮ್ಮ, ಗ್ರಾಪಂ ಮಾಜಿ ಸದಸ್ಯ ಬಸವರಾಜು, ಮಹಿಳಾ ಮೇಲ್ವಿಚಾರಕಿ ಸ್ವರ್ಣ, ಅಂಗನವಾಡಿ ಕಾರ್ಯಕರ್ತೆ ರಾಧಾ ಮುಂತಾದವರು ಭಾಗವಹಿಸಿದ್ದರು. ವಿವಿಧ ಬಗೆಯ ಆಹಾರಗಳನ್ನು ಪ್ರದರ್ಶನಕ್ಕಿಡಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

