ತುಮಕೂರು

ಪರಿಸರ ಸ್ನೇಹಿ ಗಣಪತಿ ಜಾಥಾ

Published On :

ತುಮಕೂರು: ಪರಿಸರ ಸ್ನೇಹಿ ಗಣಪತಿ ಪ್ರತಿಷ್ಠಾಪಿಸಿ ಪರಿಸರ ಉಳಿಸಿ ಮಣ್ಣಿನ ಗಣಪನನ್ನು ಸ್ಥಾಪಿಸಿ ಜಲಚರಗಳನ್ನು ರಕ್ಷಿಸಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗುತ್ತಾ ಮಕ್ಕಳು ಪರಿಸರ ಸ್ನೇಹಿ ಗಣಪನ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಿದರು.
ಕಳ್ಳಂಬೆಳ್ಳದ ಶ್ರೀ ಮರಡಿ ರಂಗನಾಥ ಗ್ರಾಮಾಂತರ ಪ್ರೌಢಶಾಲೆ ಮತ್ತು ಚಿಕ್ಕನಹಳ್ಳಿಯ ಶಾಂತಲಾ ಪ್ರೌಢಶಾಲೆ ಹಾಗೂ ಸರಕಾರಿ ಪ್ರೌಢಶಾಲೆ ಪೌರ ಕ್ಲಬ್ ವಿದ್ಯಾರ್ಥಿಗಳು ಜಾಗೃತಿ ಜಾಥವನ್ನು ಕೈಗೊಂಡರು. ಪೌರ ಪ್ರಜ್ಞೆಗಾಗಿ ಮಕ್ಕಳ ಚಳುವಳಿ ಹಾಗೂ ಕಳ್ಳಂಬೆಳ್ಳದ ಸ್ವಾಮಿ ವಿವೇಕಾನಂದ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಶಿರಾ ತಾಲೂಕಿನ ವಿವಿಧೆಡೆಗಳಲ್ಲಿ ಜಾಥವನ್ನು ಏರ್ಪಡಿಸಲಾಗಿತ್ತು.
ಕಳ್ಳಂಬೆಳ್ಳ ಶಾಲೆಯ ಜಾಥಕ್ಕೆ ಆಡಳಿತ ಮಂಡಳಿ ಅಧ್ಯಕ್ಷ ಕಾಂತರಾಜು ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜು ಚಾಲನೆ ನೀಡಿದರು, ನಂತರ ಮಕ್ಕಳು ಕಳ್ಳಂಬೆಳ್ಳ ಗ್ರಾಮದ ಬೀದಿಗಳಲ್ಲಿ ಪರಿಸರ ಸ್ನೇಹಿ ಗಣಪ ಪ್ರತಿಷ್ಟಾಪನೆ ಕುರಿತ ಘೋಷಣೆಗಳನ್ನು ಕೂಗಿದರು.
ಚಿಕ್ಕನಹಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸರ್ಕಾರಿ ಪ್ರೌಢಶಾಲೆ, ಶಾಂತಲಾ ಪ್ರೌಢಶಾಲೆಗಳ ಶಿಕ್ಷಕರು ಮತ್ತು ಮಕ್ಕಳು ಭಾಗವಹಿಸಿದ್ದರು.  ಸ್ವಾಮಿ ವಿವೇಕಾನಂದ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಯೋಜನಾ ಸಂಯೋಜಕ ರಂಗರಾಜು, ಪೌರ ಶಿಕ್ಷಕ ಮಂಜುನಾಥ್ ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.