ತುಮಕೂರು

ಶಿಕ್ಷಕರು ಜ್ಞಾನದಾಹ ತೀರಿಸುವ ಅಕ್ಷಯ ಪಾತ್ರೆ

Published On :

ಶಿರಾ: ಶಿಕ್ಷಕರು ದೇಶದ ಜನರ ಜ್ಞಾನದಾಹವನ್ನು ತೀರಿಸುವ ಅಕ್ಷಯ ಪಾತ್ರೆಗಳು ಎಂದು ತಾ.ಪಂ. ಉಪಾಧ್ಯಕ್ಷ ಉದಯಶಂಕರ್ ತಿಳಿಸಿದರು.
ಅವರು ನಗರದ ಶ್ರೀ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಶಿಕ್ಷಣ ಇಲಾಖೆ ಏರ್ಪಡಿಸಿದ್ದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜಯಂತಿ ಮತ್ತು ಶಿಕ್ಷಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ದಾರಿ ತಪ್ಪುತ್ತಿರುವ ಇಂದಿನ ಸಮಾಜಕ್ಕೆ ಸೂಕ್ತ ಸಲಹೆ ಸೂಚನೆ ನೀಡುವ ಕರ್ತವ್ಯ ಶಿಕ್ಷಕರದ್ದಾಗಿದೆ ಎಂದರು.
ಅಧ್ಯಕ್ಷತೆಯನ್ನು ತಾ.ಪಂ. ಅಧ್ಯಕ್ಷೆ ಗಂಗಮ್ಮ ಸಿದ್ದಹನುಮಯ್ಯ ವಹಿಸಿದ್ದರು. ಪ್ರಾಸ್ತವಿಕ ನುಡಿಗಳನ್ನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಾಜ್‌ಕುಮಾರ್ ಶಿಕ್ಷಕರು ಪ್ರಯತ್ನಪಟ್ಟರೆ ಇಡೀ ಜಗತ್ತನ್ನು ಬದಲಾಯಿಸುವ ಶಕ್ತಿ ಹೊಂದಿದ್ದು ಈ ದೇಶಕ್ಕೆ ಗುರುಗಳ ಮಾರ್ಗದರ್ಶನ ಅಗತ್ಯವಿದೆ. ಶಿಕ್ಷಕರು ಏನನ್ನಾದರೂ ಸಾಧಿಸಬಹುದು ಎಂಬುದನ್ನು ಸರ್ವಪಲ್ಲಿ ರಾಧಕೃಷ್ಣನ್ ಅವರು ಸಾಧಿಸಿ ತೋರಿಸಿದ್ದು, ಅವರ ಆದರ್ಶ ಶಿಕ್ಷಕರಿಗೆ ದಾರಿದೀಪವಾಗಿದೆ ಎಂದರು.
ತಹಸೀಲ್ದಾರ್ ಚಂದ್ರಶೇಖರಯ್ಯ ಅವರು ಮಾತನಾಡಿ ಶಿಕ್ಷಕರ ಸಾಧನೆ ನೆನೆಯುವ ದಿನ ಇದಾಗಿದ್ದು, ಎಲ್ಲಾ ಸ್ಥಾನಗಳಿಗೂ ಮಿಗಿಲಾದುದು ಗುರುವಿನ ಸ್ಥಾನ. ಶಿಕ್ಷಕರು ಗುರು ಎಂಬ ಹೆಮ್ಮೆಯಿಂದ ವಿದ್ಯಾದಾನ ಮಾಡಬೇಕು. ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವುದು ಶಿಕ್ಷಕರ ಜವಾಬ್ದಾರಿಯಾಗಿದೆ ಎಂದರು.
ಪುಸ್ತಕ ಬಿಡುಗಡೆ: ಸಮಾರಂಭದಲ್ಲಿ ಶಿಕ್ಷಕ, ಸಾಹಿತಿ ಕೆ.ಎಸ್. ಚಿದಾನಂದ್ ಅವರ ಒಲವಿನ ಅಲೆಗಳು ಎಂಬ ಕವಲ ನಂಕಲನವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ರಾಜ್‌ಕುಮಾರ್ ತಾ.ಪಂ. ಅಧ್ಯಕ್ಷೆ ಗಂಗಮ್ಮ ಸಿದ್ದಹನುಮಯ್ಯ ಸಹ ಪ್ರಾಧ್ಯಾಪಕ ಡಾ. ಡೊಮ್ನಿ, ಬಿಡುಗಡೆಗೊಳಿಸಿದರು.
ಮೆರವಣಿಗೆ: ಪ್ರಾರಂಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಸರ್ವಪಲ್ಲಿ ರಾಧಕೃಷ್ಣನ್ ಅವರ
ಭಾವಚಿತ್ರವನ್ನು ಪಟ್ಟಣದ ಪ್ರಮುಖ ಬೀದಿಗಳಲ್ಲಿ ತಾಲೂಕಿನ ಶಿಕ್ಷಕರ ಸಮ್ಮುಖದಲ್ಲಿ ಮೆರವಣಿಗೆ ನಡೆಸಿ ಸಮಾರಂಭಕ್ಕೆ ಕರೆ ತರಲಾಯಿತು.
ಸನ್ಮಾನ: ಸಮಾರಂಭದಲ್ಲಿ ತಾಲೂಕಿನ 30 ಕ್ಕೂ ಹೆಚ್ಚು ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು.
ಮುಖ್ಯ ಅತಿಥಿಗಳಾಗಿ ಜಿ.ಪಂ. ಸದಸ್ಯ ಅರೇಹಳ್ಳಿ ರಮೇಶ್, ತಾ.ಪಂ. ಇ.ಓ. ಡಾ.ವೇದಮೂರ್ತಿ, ಖಾಸಗಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಅನಂತರಾಮು, ಬಿ.ಆರ್.ಸಿ. ಸಿದ್ದರಾಜು, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹಿಮಂತರಾಜು, ತಾಲೂಕು ನೌಕರ ಸಂಘದ ಅಧ್ಯಕ್ಷ ಲಕ್ಷ್ಮೀಶ್, ಕಾರ್ಯದರ್ಶಿ ಲತಾ.ಎಸ್, ಕೆನರಾ ಬ್ಯಾಂಕ್ ವ್ಯವಸ್ಥಾಪಕಿ  ಭಾರತಿ.ಆರ್. ಪಾಟೀಲ್ ಸೇರಿದಂತೆ ಹಲವರು ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.