ಕೆರೆಯಲ್ಲಿ ವಿಸರ್ಜನೆ ಬೇಡ
ತುಮಕೂರು: ಪರಿಸರ ಮಾಲಿನ್ಯವನ್ನು ತಡೆಗಟ್ಟುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯವಾಗಿರುವುದರಿಂದ ನಿಸರ್ಗದತ್ತವಾದ ನಗರ ವ್ಯಾಪ್ತಿಯಲ್ಲಿರುವ ಅಮಾನಿಕೆರೆ, ಶೆಟ್ಟಿಹಳ್ಳಿ ಕೆರೆ, ಅಕ್ಕತಂಗಿಯರ ಕೆರೆ, ಬಡ್ಡಿಹಳ್ಳಿ ಕೆರೆಗಳಲ್ಲಿ ಗಣಪತಿ ವಿಗ್ರಹಗಳನ್ನು ವಿಸರ್ಜನೆ ಮಾಡಬಾರದೆಂದು ನಗರಸಭೆ ಆಯುಕ್ತರು ತಿಳಿಸಿದ್ದಾರೆ.
ಗಣೇಶ ಮೂರ್ತಿಯನ್ನು ಜೇಡಿ ಮಣ್ಣು ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ನಲ್ಲಿ ವಿವಿಧ ಆಕಾರ ಮತ್ತು ವಿವಿಧ ರಾಸಾಯನಿಕ ಬಣ್ಣಗಳಲ್ಲಿ ತಯಾರಿಕೆಯಲ್ಲಿ ಕ್ಯಾಡಿಮಿಯಂ, ಕ್ರೋಮಿಯಂ, ಐರನ್, ನಿಕ್ಕಲ್, ಲೆಡ್, ಜಿಂಕ್ ಮತ್ತು ಕಾಪರ್ಗಳನ್ನು ಉಪಯೋಗಿಸಿ ತಯಾರಿಸಲಾಗುತ್ತಿದ್ದು, ಈ ರಾಸಾಯನಿಕ ವಸ್ತುಗಳನ್ನು ಬಳಸಿ ತಯಾರಿಸಿದ ಗಣೇಶ ಮೂರ್ತಿಯನ್ನು ನೀರಿನಲ್ಲಿ ವಿಸರ್ಜಿಸಿದಲ್ಲಿ ಪರಿಸರ ನೀರು ಮತ್ತು ಜಲಚರಗಳಿಗೆ ಹಾನಿ ಉಂಟಾಗುತ್ತದೆ.
ಗಣಪತಿ ವಿಸರ್ಜನೆ ಮಾಡುವಂತಹವರು ತಮ್ಮ ತಮ್ಮ ಮನೆಗಳಲ್ಲಿ ನೀರಿನ ವ್ಯವಸ್ಥೆ ಮಾಡಿ ಕೊಂಡು ವಿಸರ್ಜನೆ ಮಾಡಲು ವಿನಂತಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

