ಸೀಮೆಎಣ್ಣೆ ಪಡೆಯಲು ಆಧಾರ್ ಕಾರ್ಡ್ ಸಂಗ್ರಹಣೆ
ತುಮಕೂರು: ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಆಯುಕ್ತರ ಸೂಚನೆ ಮೇರೆಗೆ ಸಾರ್ವಜನಿಕರ ಪಡಿತರ ವಿತರಣೆ ವ್ಯವಸ್ಥೆಯಡಿ ಪಡಿತರ ಸೀಮೆಎಣ್ಣೆ ಪಡೆಯಲು ತುಮಕೂರು ಜಿಲ್ಲೆಯ ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಂದ ಆಧಾರ ಕಾರ್ಡ್ನ ಸಂಖ್ಯೆಗಳನ್ನು ಸಂಗ್ರಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಸೆಪ್ಟೆಂಬರ್ ತಿಂಗಳಲ್ಲಿ ನ್ಯಾಯಬೆಲೆ ಅಂಗಡಿಯವರು ಮತ್ತು ಚಿಲ್ಲರೆ ಸೀಮೆಎಣ್ಣೆ ವಿತರಕರು ಸೀಮೆಎಣ್ಣೆಯನ್ನು ವಿತರಿಸುವ ವೇಳೆಯಲ್ಲಿ ಆಧಾರ್ ಸಂಖ್ಯೆಯನ್ನು ಸಂಗ್ರಹಿಸಲು ಸೂಚಿಸಲಾಗಿದ್ದು, ಗ್ಯಾಸ್ ಸಂಪರ್ಕ ಪಡೆಯದಿರುವವರಿಗೆ ಪಡಿತರ ಸೀಮೆಎಣ್ಣೆ ನೀಡಲಾಗುತ್ತಿದೆ. ಅನಿಲರಹಿತ ಪಡಿತರ ಚೀಟಿ ಹೊಂದಿದ ಕುಟುಂಬದ ಸದಸ್ಯರ ಪೈಕಿ 18 ವರ್ಷ ಮೇಲ್ಪಟ್ಟ ಮಹಿಳಾ ಸದಸ್ಯರು ತಮ್ಮ ಆಧಾರ ಸಂಖ್ಯೆಯನ್ನು ನೀಡದೇ ಇರುವವರಿಗೆ ಅಕ್ಟೋಬರ್ ತಿಂಗಳಲ್ಲಿ ಸೀಮೆಎಣ್ಣೆಯನ್ನು ಸ್ಥಗಿತಗೊಳಿಸಲಾಗುವುದೆಂದು ತಿಳಿಸಿದೆ.
ಸೆಪ್ಟೆಂಬರ್ ತಿಂಗಳಿಗೆ ಎ.ಪಿ.ಎಲ್. ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ಹಂಚಿಕೆ ಇರುವುದಿಲ್ಲ. ಬಿ.ಪಿ.ಎಲ್. ಮತ್ತು ಅಂತ್ಯೋದಯ ಅನ್ನ ಯೋಜನೆಯ ಅನಿಲರಹಿತ ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ವಿತರಿಸಲಾಗುವುದು.
ಜಿಲ್ಲೆಯಾದ್ಯಂತ ಪಡಿತರ ಸೀಮೆಎಣ್ಣೆಗೆ ಪ್ರತಿ ಲೀಟರ್ಗೆ ರು.16.20 ಪೈಸೆ ದರವನ್ನು ಸರ್ಕಾರವು ನಿಗದಿಪಡಿಸಿದ್ದು, ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಹಣವನ್ನು ನ್ಯಾಯಬೆಲೆ ಅಂಗಡಿಯವರು ಪಡೆದಲ್ಲಿ ಅಥವಾ ನಿಗದಿಪಡಿಸಿದ್ದಕ್ಕಿಂತ ಕಡಿಮೆ ಪ್ರಮಾಣ ವಿತರಣೆ ಮಾಡಿದಲ್ಲಿ ಅಂತಹ ನ್ಯಾಯಬೆಲೆ ಅಂಗಡಿಯವರ ವಿರುದ್ದ ಸಂಬಂಧಿಸಿದ ತಾಲೂಕಿನ ತಹಸೀಲ್ದಾರ್ ಅವರ ಕಚೇರಿಗೆ ಹಾಗೂ ಸಹಾಯಕ ನಿರ್ದೇಶಕರು, ಅನೌಪಚಾರಿಕೆ ಪಡಿತರ ಕಚೇರಿ, ತುಮಕೂರು ಇವರಿಗೆ ದೂರನ್ನು ನೀಡಲು ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

