ತುಮಕೂರು

ಸುದ್ದಿ ಸಂಕ್ಷೇಪ

Published On :

ಕಸಾಯಿಖಾನೆಗೆ ಮಾರುವವರ ವಿರುದ್ಧ ಕ್ರಮ
ತುಮಕೂರು: ನಗರ ಹಾಗೂ ಜಿಲ್ಲೆಯ ವ್ಯಾಪ್ತಿಯಲ್ಲಿ ಗೋ ಹತ್ಯೆ ಮತ್ತು ಕಸಾಯಿಖಾನೆಗಳಿಗೆ ಹಸು, ಎಮ್ಮೆಗಳನ್ನು ಕಾನೂನು ಬಾಹಿರವಾಗಿ ಸಾಗಣೆ ಮಾಡುತ್ತಿರುವ ಪ್ರಕರಣಗಳು ಇತ್ತೀಚಿನ ಕೆಲವು ತಿಂಗಳಿನಿಂದ ಜಾಸ್ತಿಯಾಗುತ್ತಿರುವ ಬಗ್ಗೆ ಬಿಜೆಪಿ ತುಮಕೂರು ಜಿಲ್ಲಾಧ್ಯಕ್ಷ ಹಾಗೂ ಶಾಸಕ ಸುರೇಶ್ ಗೌಡರ ನೇತೃತ್ವದ ತಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಮಣ ಗುಪ್ತ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು. ದಿನದಿಂದ ದಿನಕ್ಕೆ ಗೋ ಹತ್ಯೆ ಹಾಗೂ ಕಸಾಯಿಖಾನೆಗೆ ಸಾಗಿಸುವ ಮಾಹಿತಿಗಳು ಬರುತ್ತಿರುವ ಬಗ್ಗೆ ಬಿಜೆಪಿ ಜಿಲ್ಲಾ ಘಟಕ ಗಮನ ಸಳೆದ ಶಾಸಕ ಹಾಗೂ ಜಿಲ್ಲಾಧ್ಯಕ್ಷ ಸುರೇಶ್ ಗೌಡರು, ಸಮಸ್ಯೆಗಳ ಗಂಭೀರತೆಯನ್ನು ವಿವರಿಸಿದರು. ಈ ಸಂಬಂಧ ಗೋ ಹತ್ಯೆ ಹಾಗೂ ಕಸಾಯಿಖಾನೆಗಳಿಗೆ ಸಾಗಿಸುತ್ತಿದ್ದ ಸಮಯದಲ್ಲಿ ಹಿಡಿದು, ಠಾಣೆಗೆ ಒಪ್ಪಸಿದರೂ, ಒಪ್ಪಿಸಿದವರ ಮೇಲೆಯೇ ಎಫ್.ಐ.ಆರ್. ದಾಖಲು ಹಾಗೂ ಗೂಂಡಾ ಕಾಯ್ದೆ ಸೇರ್ಪಡೆ ಬೆದರಿಕೆ ಹಾಕುವ ಕೆಲವು ಪೋಲಿಸ್ ಅಧಿಕಾರಿಗಳ ವರ್ತನೆಯನ್ನು ಗಮನ ಸೆಳೆದರು. ಈ ಬಗ್ಗೆ ಗಂಭೀರವಾಗಿ ಪ್ರಕರಣಗಳನ್ನು ಗಮನಿಸುತ್ತಿದ್ದು ಪರಿಶೀಲಿಸಿ ಕ್ರಮ ಕೈಗೊಳ್ಳುವ ಕುರಿತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ಬಿಜೆಪಿ ನಿಯೋಗಕ್ಕೆ ಭರವಸೆ ನೀಡಿದರು. ನಿಯೋಗದಲ್ಲಿ ಜಿಲ್ಲಾ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅಖಿಲಾನಂದ್, ತುಮಕೂರು ನಗರಾಧ್ಯಕ್ಷ ಕೆ.ಪಿ.ಮಹೇಶ್, ಉಪೇಂದ್ರ ಕುಮಾರ್ ಮತ್ತು ಅರುಣ್ ಉಪಸ್ಥಿತರಿದ್ದರು.
ಗಣೇಶ ವಿಸರ್ಜನೆ: ನಗರಸಭೆಯ  ನೀರಿನ ಟ್ಯಾಂಕರ್ ವ್ಯವಸ್ಥೆ
ತುಮಕೂರು: ತುಮಕೂರು ನಗರ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿಗಳನ್ನು ಸೂಕ್ತ ರೀತಿಯಲ್ಲಿ ವಿಸರ್ಜನೆ ಮಾಡುವ ಸಲುವಾಗಿ ಗಣೇಶ ಹಬ್ಬದಂದು ಸಾಯಂಕಾಲ 6 ರಿಂದ 10 ಗಂಟೆಯವರೆಗೆ ನಗರಸಭೆಯ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ತಮ್ಮ ಮನೆಗಳಲ್ಲಿ ಇಡುವ ಗಣೇಶ ಮೂರ್ತಿಗಳನ್ನು ವಿಸರ್ಜಿಸಿ ಅನುಕೂಲ ಪಡೆಯಬೇಕೆಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ. ಬಟವಾಡಿ ಆಂಜನೇಯ ದೇವಸ್ಥಾನದ  ಬಳಿ, ಶೆಟ್ಟಿಹಳ್ಳಿ ರಸ್ತೆಯ ರಾಘವೇಂದ್ರ ಸ್ವಾಮಿ  ಮಠದ ಬಳಿ, ನಗರಸಭಾ ಕ:ಕೇರಿ ಆವರಣ, ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ, ವಿದ್ಯಾನಗರದ ಆರ್.ಟಿ.ಓ. ಕ:ಕೇರಿ ಹಿಂಭಾಗದಲ್ಲಿರುವ ನಗರಸಭೆಯ ವಾಟರ್ ಹೌಸ್‌ನಲ್ಲಿ ನಗರಸಭೆಯ ನೀರಿನ ಟ್ಯಾಂಕರ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ.
ಮಾಂಸ ಮಾರಾಟ ನಿಷೇಧ: ಗೌರಿ ಗಣೇಶ ಹಬ್ಬದ ಪ್ರಯುಕ್ತ ಮಾಂಸ ಮಾರಾಟ ನಿಷೇಧಿತ ದಿನವೆಂದು ಘೋಷಿಸಲ್ಪಟ್ಟಿದ್ದು, ಸೆ. 7ರ ಸಂಜೆ 6 ರಿಂದ ಸೆ.9 ರ ಮಧ್ಯರಾತ್ರಿ 12 ಗಂಟೆಯವರೆಗೆ ತುಮಕೂರು ನಗರಸಭೆ ವ್ಯಾಪ್ತಿಯಲ್ಲಿ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚುವುದು,  ಈ ಅವಧಿಯಲ್ಲಿ ಮಾಂಸ ಮಾರಾಟ ಮಾಡುವುದಾಗಲಿ, ಸಂಗ್ರಹಣೆ ಮಾಡುವುದಾಗಲಿ ನಿಷೇಧಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.