ತುಮಕೂರು

ಸ್ಥಳ ಪರಿಶೀಲನೆಗೆ ಅಧಿಕಾರಿಗಳ ನಿಯೋಜನೆ: ನಟರಾಜ್ ಭರವಸೆ

Published On :

ತುಮಕೂರು: ತುಮಕೂರಿನ ಭಾರತೀ ನಗರದ ಅಂಗನವಾಡಿ ಕೇಂದ್ರಕ್ಕೆ ತಾತ್ಕಾಲಿಕವಾಗಿ ಉತ್ತಮವಾದ ಬಾಡಿಗೆ ಕಟ್ಟಡಕ್ಕೆ ವರ್ಗಾಯಿಸಲಾಗುವುದು. ಈ ಸಂಬಂಧ ಅಧಿಕಾರಿಗಳನ್ನು ಸ್ಥಳ ಪರಿಶೀಲನೆಗೆ ಕಳುಹಿಸಲಾಗುವುದು. ಶಾಶ್ವತ ಪರಿಹಾರಕ್ಕಾಗಿ ನಗರಸಭೆಯಿಂದ ನಿವೇಶನ ಪಡೆಯಲು ಪ್ರಯತ್ನಿಸಲಾಗುವುದು ಎಂದು ಉಪನಿರ್ದೇಶಕರ ಅನುಪಸ್ಥಿತಿಯಲ್ಲಿ ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರೂಪಣಾಧಿಕಾರಿ ನಟರಾಜ್ ಭರವಸೆ ನೀಡಿದರು.ಅವರು ಆವಿಷ್ಕಾರ-ಪ್ರಗತಿಪರ ಸಾಂಸ್ಕೃತಿಕ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಎಸ್.ಎನ್.ಸ್ವಾಮಿ ನೇತೃತ್ವದ ಎಐಎಂಎಸ್‌ಎಸ್‌ನ ಕಾಮ್ರೇಡ್ ಎಂ.ವಿ.ಕಲ್ಯಾಣಿ ಮತ್ತು ಎಐಡಿವೈಓನ ಕಾಮ್ರೇಡ್ ನರಸಿಂಹರಾಜು ಹಾಗೂ ನಾಗರಿಕರನ್ನೊಳಗೊಂಡ ನಿಯೋಗದ ಜೊತೆ ಚರ್ಚೆ ನಡೆಸುತ್ತಾ ಮೇಲಿನ ಭರವಸೆ ನೀಡಿದರು. ಭಾರತೀನಗರದ ಅಂಗನವಾಡಿಯು ಸಮಸ್ಯೆಗಳ ಆಗರವಾಗಿದೆ ಮತ್ತು ಪೋಷಕರ ಆತಂಕಕ್ಕೆ ಕಾರಣವಾಗಿದೆ ಎಂಬ ಅಂಶವನ್ನು ತಮ್ಮ ಗಮನಕ್ಕೆ ತರಲು ಮತ್ತು ಶೀಘ್ರ ಪರಿಹಾರ ಕಾರ್ಯಗಳನ್ನು ಆರಂಭಿಸಬೇಕೆಂದು ಒತ್ತಾಯಿಸಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ (ಎಐಎಂಎಸ್‌ಎಸ್) ಮತ್ತು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಓ) ತುಮಕೂರು ಜಿಲ್ಲಾ ಘಟಕಗಳು ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮುಂದೆ ಪೋಷಕರು ಹಾಗೂ ನಾಗರಿಕರ ಪ್ರತಿಭಟನೆಯನ್ನು ನಡೆಸಿತು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಎಐಎಂಎಸ್‌ಎಸ್‌ನ ಜಿಲ್ಲಾ ಸಂಘಟನಾಕಾರರಾದ ಕಾಮ್ರೇಡ್ ಎಂ.ವಿ.ಕಲ್ಯಾಣಿ ಮಾತನಾಡಿ, ಅಂಗನವಾಡಿ ಕೇಂದ್ರವು ಮೂಲಭೂತ ಸೌಕರ್ಯಗಳಿಲ್ಲದೆ ನರಳುತ್ತಿದೆ. ಸೋರುವ ಮತ್ತು ಬೀಳುವಂತಿರುವ ಕಟ್ಟಡ, ಶೌಚಾಲಯ, ಕುಡಿಯುವ ನೀರು, ಮುಂತಾದ ಕನಿಷ್ಠ ಸೌಲಭ್ಯವೂ ಇಲ್ಲ. ಜೊತೆಗೆ ಸುತ್ತಲೂ ಇರುವ ಕೊಚ್ಚೆ, ಮುಂದುಗಡೆಯ ರಸ್ತೆ ಮಕ್ಕಳಿಗೆ ಅನಾರೋಗ್ಯಕರ ಪರಿಸ್ಥಿತಿಯನ್ನು ಸೃಷ್ಟಿಸಿದೆ ಎಂದರು. ಮಕ್ಕಳಿಗೆ ಅಪಾಯವಾಗುವ ಮೊದಲೇ ಎಚ್ಚರಿಕೆ ವಹಿಸಬೇಕೆಂದು ಒತ್ತಾಯಿಸಿದರು. ಎಐಡಿವೈಓನ ಜಿಲ್ಲಾ ಸಂಘಟನಾಕಾರರಾದ ಕಾಮ್ರೇಡ್ ನರಸಿಂಹರಾಜು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.