ಗುಬ್ಬಿ ಪಪಂ: ಜೆಡಿಎಸ್ನ ಸುರೇಶ ಗೌಡ ಅಧ್ಯಕ್ಷ
ಗುಬ್ಬಿ: ಜೆಡಿಎಸ್ನ ಜಿ.ಡಿ.ಸುರೇಶ ಗೌಡರ ಗುಬ್ಬಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಶುಕ್ರವಾರ ಆಯ್ಕೆಯಾದರು. ಉಪಾಧ್ಯಕ್ಷ ಸ್ಥಾನಕ್ಕೆ ಅದೇ ಪಕ್ಷದ ಪುಷ್ಪಾವತಿ. ಎನ್ ಅವಿರೋಧವಾಗಿ ಆಯ್ಕೆ ಆದರು.
ಸುರೇಶ ಗೌಡ 12 ಮತಗಳನ್ನು ಗಳಿಸುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು.
ನನ್ನನ್ನು ಪುನಃ ಆಯ್ಕೆ ಮಾಡಿ ಅಧ್ಯಕ್ಷ ಸ್ಥಾನ ದೊರಕುವಂತೆ ಮಾಡಿದ ಎಲ್ಲರಿಗೂ ಋಣಿಯಾಗಿರುತ್ತೇನೆಂದು ತಿಳಿಸಿದ ಅವರು ಪಟ್ಟಣದ ಜನಸಾಮಾನ್ಯರ ಮೂಲಭೂತ ಸಮಸ್ಯೆಗಳನ್ನು ಪ್ರಾಮಾಣಿಕವಾಗಿ ಬಗೆಹರಿಸುತ್ತೇನೆ ಎಂದು ಸುರೇಶ್ ಗೌಡ ತಿಳಿಸಿದರು.
ಪ್ರಮುಖವಾಗಿ ಕುಡಿಯುವ ನೀರಿನ ಸೌಲಭ್ಯ, ಸ್ವಚ್ಛತೆ, ಚರಂಡಿ ಹಾಗೂ ರಸ್ತೆ ನಿರ್ಮಾಣ ಕೆಲಸಗಳನ್ನು ಹಂತಹಂತವಾಗಿ ಎಲ್ಲಾ ಸದಸ್ಯರ ವಿಶ್ವಾಸವನ್ನು ಗಳಿಸುವ ಮೂಲಕ ಪ್ರಾಮಾಣಕವಾಗಿ ಸೇವೆ ಮಾಡುತ್ತೇನೆ ಎಂದು ಭರವಸೆ ನೀಡಿದರು. ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ಸಂದರ್ಭದಲ್ಲಿ ಪಟಾಕಿ ಸಿಡಿಸುವ ಮೂಲಕ ಅಭಿಮಾನಿಗಳು ಸಂತಸಪಟ್ಟರು.
ಆಯ್ಕೆಯ ಸಮಯದಲ್ಲಿ ಪಟ್ಟಣ ಪಂಚಾಯ್ತಿಯ ಮುಖ್ಯಾಧಿಕಾರಿಯಾದ ಯೋಗಾನಂದ ಹಾಗೂ ಪಟ್ಟಣ ಪಂಚಾಯ್ತಿಯ ಎಲ್ಲಾ ಸದಸ್ಯರು ಪಕ್ಷದ ಕಾರ್ಯಕರ್ತರು ಹಾಜರಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

