ಯುವಜನತೆಗೆ ವಿಜ್ಞಾನದ ಮಹತ್ವ ಅಗತ್ಯ: ಪ್ರೊ. ಪ್ರಸಾದ್
ಗುಬ್ಬಿ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ದೇಶದ ಯುವಜನತೆಗೆ ವಿಜ್ಞಾನದ ಮಹತ್ವ ಅತ್ಯಗತ್ಯವಾಗಿದ್ದು ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿಯ ಜೊತೆಗೆ ವೈಜ್ಞಾನಿಕ ಅರಿವು ಮತ್ತು ಮಾಹಿತಿ ಪಡೆದುಕೊಂಡು ಆದರ್ಶ ವಿದ್ಯಾರ್ಥಿಗಳಾಗುವಂತೆ ಇಸ್ರೋ ಸಂಸ್ಥೆಯ ನಿವೃತ್ತ ವಿಜ್ಞಾನಿ ಪ್ರೊ. ಪ್ರಸಾದ್ ಕರೆ ನೀಡಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ, ತುಮಕೂರು ಅಸೋಸಿಯೇಷನ್ ಫಾರ್ ಸೈನ್ಸ್ ಎಜುಕೇಶನ್, ಪದವಿ ಪೂರ್ವ ಶಿಕ್ಷಣ ಇಲಾಖೆ, ವಿಜ್ಞಾನ ಕೇಂದ್ರ ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಏರ್ಪಡಿಸಿದ್ದ ವಿಜ್ಞಾನ ಉಪನ್ಯಾಸ ಮಾಲೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮತನಾಡಿದ ಅವರು ಇಂದಿನ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಅಧ್ಯಯನ ಮತ್ತು ಸಂಶೋಧನೆಗಳ ಬಗ್ಗೆ ಸಮಗ್ರವಾದ ಮಾಹಿತಿ ನೀಡುವ ಸದುದ್ದೇಶದಿಂದ ವಿಜ್ಞಾನ ಉಪನ್ಯಾಸ ಮಾಲೆಯನ್ನು ಏರ್ಪಡಿಸಿರುವುದಾಗಿ ತಿಳಿಸಿದರು.
ತುಮಕೂರು ವಿಜ್ಞಾನ ಕೇಂದ್ರದ ಅಧ್ಯಕ್ಷರಾದ ಸಿ.ವಿಶ್ವನಾಥ್ ಮಾತನಾಡಿ ಡಾ.ನಂಜುಂಡಪ್ಪ ವರದಿಯನ್ವಯ ತೀರಾ ಹಿಂದುಳಿದ ಜಿಲ್ಲೆಯ ಐದು ತಾಲೂಕುಗಳಲ್ಲಿ ವಿಜ್ಞಾನ ಮತ್ತು ಸಂಶೋಧನೆ ಅಭಿವೃದ್ಧಿ ವೇದಿಕೆಯಡಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ವಿಜ್ಞಾನ ಉಪನ್ಯಾಸ ಮಾಲೆಯನ್ನು ಏರ್ಪಡಿಸಿರುವುದಾಗಿ ತಿಳಿಸಿದ ಅವರು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಗತಿಯ ಜೊತೆಗೆ ವೈಜ್ಞಾನಿಕ ಮಹತ್ವ ಮತ್ತು ವಿಜ್ಞಾನದ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಕೆ.ಎಸ್.ಸಿದ್ದಲಿಂಗಪ್ಪ ಮಾತನಾಡಿದರು.
ಕಾರ್ಯಾಗಾರದಲ್ಲಿ ವಿದ್ಯಾವಾಹಿನಿ ಸಂಸ್ಥೆಯ ಕಾರ್ಯದರ್ಶಿಗಳಾದ ಕೆ.ಬಿ.ಜಯಣ್ಣ, ಪ್ರಾಚಾರ್ಯ ಎಸ್. ಕುಮಾರಸ್ವಾಮಿ, ಉಪನ್ಯಾಸಕರಾದ ಜಿ.ಟಿ.ಕುಮಾರ್, ಶೋಭಾಬಾಯಿ, ಕೆ.ಶ್ರೀನಿವಾಸಮೂರ್ತಿ ಮುಂತಾದವರು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

