ವಿದ್ಯಾರ್ಥಿಗಳ ಸಮಗ್ರ ಹಿತಾಸಕ್ತಿಯೇ ವಿಶ್ವವಿದ್ಯಾನಿಲಯದ ಪರಮಗುರಿ
ಕ.ಪ್ರ.ವಾರ್ತೆ ತುಮಕೂರು ಸೆ. 6
ವಿದ್ಯಾರ್ಥಿಗಳ ಸಮಗ್ರ ಹಿತಾಸಕ್ತಿಯೇ ವಿಶ್ವವಿದ್ಯಾನಿಲಯದ ಮುಖ್ಯ ಉದ್ದೇಶವಾಗಿದೆ. ಅಧ್ಯಾಪಕರು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಸಹಕಾರಿಯಾಗಬೇಕು. ಅವರಿಗೆ ಉತ್ತಮ ಬೋಧನೆ, ಮಾರ್ಗದರ್ಶನದ ಜೊತೆಗೆ ಉತ್ತಮ ನಾಗರೀಕರನ್ನಾಗಿ ರೂಪಿಸುವಂತಹ ಜವಾಬ್ದಾರಿ ತುಮಕೂರು ವಿಶ್ವವಿದ್ಯಾನಿಲಯದ ಶಿಕ್ಷಕರ ಮೇಲಿದೆ ಎಂದು ಕುಲಪತಿ ಪ್ರೊ. ಎ.ಎಚ್. ರಾಜಾಸಾಬ್ ಹೇಳಿದರು.
ತುಮಕೂರು ವಿಶ್ವವಿದ್ಯಾನಿಲಯದ ವಾಣಿಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನ ವಿಭಾಗದವರು ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಾ, ಅಧ್ಯಾಪಕರು, ವಿದ್ಯಾರ್ಥಿಗಳ ಒಟ್ಟಾರೆ ಹಿತಾಸಕ್ತಿಯೇ ವಿಶ್ವವಿದ್ಯಾನಿಲಯದ ಪ್ರಮುಖ ಆಶಯ. ಈ ನಿಟ್ಟಿನಲ್ಲಿ ವಿಶ್ವವಿದ್ಯಾನಿಲಯದ ಆಡಳಿತ ವರ್ಗ ಚಿಂತಿಸಿ, ಇವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಸಲಹೆ ನೀಡಿದರು.
ವಿಶ್ವವಿದ್ಯಾನಿಲಯಕ್ಕೆ ಬೆಟ್ಟದಷ್ಟು ಸಮಸ್ಯೆಗಳು ಇರುತ್ತವೆ. ಅವುಗಳನ್ನು ಹಂತ ಹಂತವಾಗಿ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಹಾಗೂ ವಿಶ್ವವಿದ್ಯಾನಿಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇನೆಂದರು.
ಧೈರ್ಯದಿಂದ ಎದುರಿಸಬೇಕು: ಮನುಷ್ಯ ಸಂತೋಷದ ಕ್ಷಣಗಳನ್ನು ಖುಷಿಯಿಂದ ಸವಿಯಬೇಕು ಹಾಗೂ ಕಷ್ಟಗಳು ಬಂದಾಗ ದಿಕ್ಕೆಡದೆ ಅವುಗಳನ್ನು ಧೈರ್ಯದಿಂದ ಎದುರಿಸಬೇಕೆಂದರು.
ಎಸ್.ಐ.ಟಿ ಕಾಲೇಜಿನ ಎಂ.ಬಿ.ಎ. ವಿಭಾಗದ ನಿರ್ದೇಶಕ ಪ್ರೊ. ಎಂ.ಆರ್. ಸೊಲ್ಲಾಪುರ್ರವರು ವಿದ್ಯಾರ್ಥಿಗಳಿಗಾಗಿ ವಿಶೇಷ ಉಪನ್ಯಾಸವನ್ನು ನೀಡಿದರು.
ಡಾ. ಪಿ. ಪರಮಶಿವಯ್ಯ, ವಿಭಾಗದ ಮುಖ್ಯಸ್ಥರು ಸ್ವಾಗತಿಸಿದರು ಹಾಗೂ ಪ್ರೀತಿ ವಂದಿಸಿದರು. ಸಮಾರಂಭದಲ್ಲಿ ಎಂ.ಆರ್. ಸೊಲ್ಲಾಪುರ್, ಪರೀಕ್ಷಾಂಗ ಕುಲಸಚಿವ ಡಾ. ಎಂ. ಜಯರಾಮು, ವಿತ್ತಾಧಿಕಾರಿ ಬಿ.ಕೆ. ಸುರೇಶ್, ಪ್ರಾಧ್ಯಾಪಕರಾದ ಡಾ. ಬಿ.ಶೇಖರ್, ಡಾ. ಸುದರ್ಶನ ರೆಡ್ಡಿ, ಡಾ. ಪ್ರಹ್ಲಾದ್ ರಾಠೋಡ್, ಡಾ. ಶೋಭಾ, ಡಾ. ಪರಮಶಿವಮೂರ್ತಿ, ಡಾ. ಶಿವಲಿಂಗಸ್ವಾಮಿ ಎಚ್.ಕೆ. ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

