ಗಣೇಶ ಹಬ್ಬಾಚರಣೆಗೆ ಮುಂಜಾಗ್ರತಾ ಕ್ರಮ
ಕ.ಪ್ರ.ವಾರ್ತೆ ಕುಣಿಗಲ್ ಸೆ. 8
ಪಟ್ಟಣದ ವಿವಿಧೆಡೆ 53 ಕಡೆ ಗಣೇಶಮೂರ್ತಿಯ ಸ್ಥಾಪನೆಗೆ ಮನವಿ ಬಂದಿದ್ದು, ಎಲ್ಲರಿಗೂ ಸೂಕ್ತ ನಿಯಮಾನುಸಾರ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಹಲವು ಸಲಹೆಗಳನ್ನು ನೀಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿಯಿಂದ ಗಣೇಶ ಹಬ್ಬಾಚರಣೆಗೆ, ಎಲ್ಲಾ ಮುಂಜಾಗೃತ ಕ್ರಮ ಕೈಗೊಳ್ಳಲಾಗಿದೆ ಎಂದು ಆರಕ್ಷಕ ವೃತ್ತ ನಿರೀಕ್ಷಕ ಧಮೇಂದ್ರ ತಿಳಿಸಿದರು.
ಗುರುವಾರ ರಾತ್ರಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈಗಾಗಲೆ ಗಣೇಶ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ವಿವಿಧ ಕೋಮಿನ ಮುಖಂಡರೊಂದಿಗೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದು, ಮೂರ್ತಿ ಸ್ಥಾಪಿಸುವ ಪೆಂಡಾಲ್ಗಳಲ್ಲಿ, ವಿಸರ್ಜಿಸುವವರೆಗೂ, ಕನಿಷ್ಠ ಇಬ್ಬರು ರಾತ್ರಿವೇಳೆ ತಂಗುವಂತೆ, ಯಾವುದೇ ಅಗ್ನಿ ಆಕಸ್ಮಿಕ ಸಂಭವಿಸಿದಂತೆ ಮುನ್ನಚ್ಚರಿಕೆ ಕ್ರಮ ಕೈಗೊಳ್ಳುವುದು ಸೇರಿದಂತೆ 22 ಅಂಶಗಳು ಸುರಕ್ಷತಾ ಕ್ರಮಗಳ ಬಗ್ಗೆ ಮೂರ್ತಿ ಪ್ರತಿಷ್ಠಾಪಿಸುವ ಆಯೋಜಕರಿಗೆ ಸೂಚಿಸಲಾಗಿದ್ದು, ಎಲ್ಲರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಗಣೇಶಮೂರ್ತಿ ವಿಸರ್ಜನೆಗೆ ಆರ್ಎಂಸಿ ಯಾರ್ಡ್ನ ಕಲ್ಯಾಣಿಯಲ್ಲಿ ವ್ಯವಸ್ಥೆಗೊಳಿಸಲು ಪುರಸಭೆ ಮತ್ತು ತಾಲೂಕು ಆಡಳಿತದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಗಣೇಶ ಹಬ್ಬ ಪ್ರಾರಂಭವಾಗಿ ವಿಸರ್ಜನೆ ಕಾರ್ಯ ಮುಗಿಯುವವರೆಗೂ ಸಾರ್ವಜನಿಕ ಆಸ್ಪತ್ರೆ, ಅಗ್ನಿಶಾಮಕ ಠಾಣೆಗಳಲ್ಲಿ ಅಗತ್ಯ ಸಿಬ್ಬಂದಿ ಸನ್ನದ್ಧವಾಗಿರುವಂತೆ ಈಗಾಗಲೆ ಮನವಿ ಮಾಡಲಾಗಿದ್ದು, ಪ್ರಸಕ್ತ ದಿನಗಳಲ್ಲಿ ಚಿನ್ನದ ಬೆಲೆ ಏರಿಕೆಯಾಗಿರುವ ಕಾರಣ, ಹಬ್ಬದ ಸಂದರ್ಭದಲ್ಲಿ ಮಹಿಳೆಯರು ವಿನಾಕಾರಣ ಚಿನ್ನಾಭರಣಗಳನ್ನು ಪ್ರದರ್ಶನ ಮಾಡಿಕೊಂಡು ನಿರ್ಜನ ಪ್ರದೇಶದಲ್ಲಿ ಸಂಚರಿಸುವುದಾಗಲಿ, ಚಿಕ್ಕ ವಯಸ್ಸಿನ ಮಕ್ಕಳಿಗೆ ಹಾಕಿದಾಗ ಅಗತ್ಯ ಎಚ್ಚರಿಕೆವಹಿಸುವಂತೆ, ಯಾವುದೇ ಪ್ರದೇಶದಲ್ಲಿ ಅಪರಿಚಿತರು ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದರೆ, ಸ್ಥಳೀಯ ಠಾಣೆಗೆ 08132-220229 ಕರೆ ಮಾಡಿ ಮಾಹಿತಿ ನೀಡುವಂತ ಮನವಿ ಮಾಡಿದರು. ಜಿಲ್ಲೆಯಲ್ಲೆ ಮೊದಲ ಬಾರಿಗೆ ಪಟ್ಟಣದ ಕೆಲವೆಡೆ ಸಿಸಿಟಿವಿ ಅಳವಡಿಸಿದ ಕಾರಣ ದ್ವಿಚಕ್ರ ವಾಹನ ಕಳ್ಳತನ ಪ್ರಮಾಣ ಗಣನೀಯವಾಗಿ ಇಳಿಮುಖವಾಗಿದೆ ಎಂದರು.
ಕಡಿಮೆ ದರದಲ್ಲಿ ಮನೆಗಳ ಸುರಕ್ಷತೆಗೆ ಎಲೆಕ್ಟ್ರಾನಿಕ್ ಸಿಗ್ನಲ್ ವ್ಯವಸ್ಥೆಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಮಾಲೀಕರು ಮನೆಯಲ್ಲಿಲ್ಲದ ಸಮಯದಲ್ಲಿ ಕಳ್ಳತನಕ್ಕೆ ಯತ್ನಿಸಿದಲ್ಲಿ ಮೊಬೈಲ್ಗೆ ಸಂದೇಶ ಬರುವ ವ್ಯವಸ್ಥೆ ಇದ್ದು ಇಂತಹ ಸುರಕ್ಷತ ಕ್ರಮ ಕೈಗೊಳ್ಳುವ ದಿಸೆಯಲ್ಲಿ ಮನೆಮಾಲೀಕರು ಮುಂದಾಗುವ ಮೂಲಕ ಅಪರಾಧ ಪ್ರಕರಣಗಳ ತಡೆಗೆ ಇಲಾಖೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದರು. ಕುಣಿಗಲ್ ಪಿಎಸೈ ಗುರುಪ್ರಸಾದ್ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

