ತುಮಕೂರು

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಒಬ್ಬನ ಸಾವು, ಐವರಿಗೆ ತೀವ್ರ ಗಾಯ

Published On :

ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿರುವ ಮಾಕಳಿ ಬಸ್ ನಿಲ್ದಾಣದ ಬಳಿ ನಿಂತಿದ್ದ ಲಾರಿಗೆ ವೇಗವಾಗಿ ಬಂದ ಮಾರುತಿ ವ್ಯಾನ್‌ನ ಚಾಲಕನ ನಿಯಂತ್ರಣ ತಪ್ಪಿ  ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಒಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಾಯಗೊಂಡಿರುವ ಘಟನೆ  ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  
ಮೃತಪಟ್ಟವರನ್ನು ಶಿರಾ ತಾಲೂಕಿನ ಮೂರ್ತಿ (40) ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡಿರುವ ಮೋಹನ್ ಕುಮಾರ್ (21), ಭಾಗ್ಯಮ್ಮ (45), ಅಭಿಲಾಷ (22), ಹೇಮ (1) ಹಾಗೂ ಇನ್ನೊಬ್ಬರ ಹೆಸರು ತಿಳಿದಿಲ್ಲ. ಗಾಯಗೊಂಡವರನ್ನು ದಾಸರಹಳ್ಳಿಯ ಸಂಜೀವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೊಳಗಾದವರೆಲ್ಲರೂ ಒಂದೇ ಕುಟುಂಬದವರಾಗಿದ್ದು ತುಮಕೂರು ಜಿಲ್ಲೆ ಶಿರಾ ತಾಲೂಕಿನವರು. ಯುಗಾದಿ ಹಬ್ಬದ ಪ್ರಯುಕ್ತ ಬೆಂಗಳೂರಿನ ಸಂಬಂದಿಕರ ಮನೆಗೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ದುರ್ಘಟನೆ ಸಂಭವಿಸಿದೆ. ಈ ಬಗ್ಗೆ  ಮಾದನಾಯಕನಹಳ್ಳಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.


ಜೆಡಿಎಸ್ ಅಸ್ತಿತ್ವ ಉಳಿಸಿಕೊಳ್ಳಲಿದೆ: ಅನ್ನದಾನಿ


ಮಳವಳ್ಳಿ: ಮಂಡ್ಯ ಲೋಕಸಭಾ ಕ್ಷೇತ್ರ ಪ್ರತಿಷ್ಠಿತ ಕಣವಾಗಿದ್ದು ಜೆಡಿಎಸ್ ಜಿಲ್ಲೆಯಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ಮಾಜಿ ಶಾಸಕ ಕೆ.ಅನ್ನದಾನಿ ತಿಳಿಸಿದರು.ಪಟ್ಟಣದ ಹೊರವಲಯದ ಕಣಗಲು ಬೊಮ್ಮದೇವರ ದೇವಸ್ಥಾನದ ಬಳಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಮಂಡ್ಯ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪುಟ್ಟರಾಜು ಯೋಗ್ಯ ವ್ಯಕ್ತಿಯಾಗಿದ್ದು ಹಿಂದುಳಿದ, ಶೋಷಿತ ವರ್ಗಗಳ ಜನರ ನೋವಿಗೆ ಸ್ಪಂದಿಸುವ ಏಕೈಕ ಅಭ್ಯರ್ಥಿ ಎಂದರೆ ತಪ್ಪಾಗಲಾರದು ಎಂದು ತಿಳಿಸಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.