ಬಸವರಾಜು ಗೆಲವು ನಿಶ್ಚಿತ
ತಿಪಟೂರು: ತಾಲೂಕಿನ ಎಲ್ಲಾ ಕಾರ್ಯಕರ್ತರು ಹಾಗೂ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಬಿಜೆಪಿ ಅಭ್ಯರ್ಥಿ ಬಸವರಾಜು ಅವರಿಗೆ ತಾಲೂಕಿನಿಂದ ಅತ್ಯಧಿಕ ಬಹುಮತ ಬರುವುದು ನಿಶ್ಚಿತ ಎಂದು ಬಿಜೆಪಿ ಮುಖಂಡ ಲೋಕೇಶ್ವರ ತಿಳಿಸಿದರು.
ಪಟ್ಟಣದ ಬಿಜೆಪಿ ಕಾರ್ಯಾಲಯ ಉದ್ಘಾಟನಾ ಸಭೆಯಲ್ಲಿ ಮಾತನಾಡಿದ ಅವರು ಜಿಲ್ಲೆಗೆ ಹಾಗೂ
ತಾಲೂಕಿಗೆ ಬಿ.ಎಸ್. ಯಡಿಯೂರಪ್ಪನವರು ಅತಿ ಹೆಚ್ಚಿನ ಅನುದಾನವನ್ನು ನೀಡಿ ಅಭಿವೃದ್ಧಿ ಕಾರ್ಯಗಳನ್ನು ನಡೆಸಿರುವುದು ಬಸವರಾಜು ಗೆಲವಿಗೆ ಅನುಕೂಲಕರವಾಗಲಿದೆ. ಕೇಂದ್ರದ ಕಾಂಗ್ರೆಸ್ ಅಡಳಿತ ಭ್ರಷ್ಟಾಚಾರದಿಂದ ಕೂಡಿದ್ದು, ಎಲ್ಲಾ ಸಮೀಕ್ಷೆಗಳಲ್ಲು ಕಾಂಗ್ರೆಸ್ ಹಿಂದಿರುವುದು ಸ್ಪಷ್ಟವಾಗಿದೆ. ಜೆಡಿಎಸ್ ಅಭ್ಯರ್ಥಿ ಕೃಷ್ಣಪ್ಪ ಜಿಲ್ಲೆಗೆ ಹೊರಗಿನವರಾಗಿದ್ದು ಹಣ ಬಲ, ಜಾತಿ ಬಲ ನಂಬಿ ಕಣಕ್ಕಿಳಿದಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಬಸವರಾಜು ಕ್ಷೇತ್ರಕ್ಕೆ ಸಾಕಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಹೆಚ್ಚಿನ ಸಾಧನೆ ಮಾಡಿದ್ದು, ಬಹುಮತದಿಂದ ಗೆಲ್ಲುವುದು ನಿಶ್ಚಿತ ಎಂದು ತಿಳಿಸಿದರು.
ಕಳೆದ ಒಂದು ವರ್ಷದಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ ಎಂದು ಆಪಾದಿಸಿದ ಅವರು ಮಳೆಗಾಲದಲ್ಲಿಯೂ ಕೂಡ ತಾಲೂಕಿನ 23 ಕೆರೆಗಳಲ್ಲಿ 4 ಕೆರೆಯನ್ನೂ ತುಂಬಿಸದ ಕ್ಷೇತ್ರದ ಶಾಸಕರ ನಿಷ್ಕ್ರಿಯತೆ ಎದ್ದು ಕಾಣುತ್ತಿದ್ದು, ಆ ಪಕ್ಷದ ಕಾರ್ಯಕರ್ತರ ಬಿಜೆಪಿಗೆ ಬಂದು ಸೇರುತ್ತಿದ್ದಾರೆ ಎಂದರು.
ಮಾಜಿ ಶಾಸಕ ಬಿ.ಸಿ.ನಾಗೇಶ್ ಮಾತನಾಡಿ ಬಿಜೆಪಿ ಕಾರ್ಯಕರ್ತರು ಸಾಕಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಿದ್ದು ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸದೃಢ ಸರ್ಕಾರ ಬರಬೇಕೆಂಬ ವಾತಾವರಣ ಜಿಲ್ಲೆಯ ಕಾರ್ಯಕರ್ತರಲ್ಲಿದೆ ಎಂದು ತಿಳಿಸಿದರು.
ಮಹಿಳಾ ಸಮಾವೇಶ: ಏ.2 ರಿಂದ 4ರವರೆಗೆ ಎಲ್ಲಾ ಕ್ಷೇತ್ರಗಳಲ್ಲಿ ಮಹಿಳಾ ಸಮಾವೇಶ ಆಯೋಜನೆ ಮಾಡಲಾಗಿದ್ದು, ಆ ಮೂಲಕ ಶೇ. 50ರಷ್ಟಿರುವ ಮಹಿಳಾ ಮತದಾರರ ಮನ ಗೆಲ್ಲುವ ಯೋಜನೆ ರೂಪಿಸಲಾಗಿದೆ ಎಂದರು. ಜೊತೆಗೆ ತಾಲೂಕಿನ ಪ್ರತಿ ಹೋಬಳಿಯಲ್ಲೂ ಗ್ರಾಮ ಪಂಚಾಯಿತಿ ಮಟ್ಟದ ಕಾರ್ಯಕರ್ತರ ಸಭೆ ನಡೆಯಲಿದ್ದು, ಏ.2ರಂದು ನೊಣವಿನಕೆರೆ ಬೋಹಳಿ, 3ರಂದು ಕಸಬಾ ಹೋಬಳಿ, 4ರಂದು ಹೊನ್ನವಳ್ಳಿ ಹಾಗೂ ಏ.5ರಂದು ಕಿಬ್ಬನಹಳ್ಳಿ ಹೋಬಳಿಯಲ್ಲಿ ಸಭೆ ಆಯೋಜಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸುದ್ದಿಗೋಷ್ಠಿಯಲ್ಲಿ ನಗರಸಭೆ ಅಧ್ಯಕ್ಷೆ ಗೀತಾ, ಸದಸ್ಯ ನಿಜಗುಣ ಇತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

