ಪ್ರತ್ಯೇಕ ಅಪಘಾತ: ಮೂವರ ಸಾವು
ಶಿರಾ: ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿ ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ.
ಇಲ್ಲಿನ ಮಲ್ಲಿಕ್ ರೆಹಾನ್ ದರ್ಗಾ ಬಳಿ ದ್ವಿಚಕ್ರವಾಹನ ಮತ್ತು ಸಾರಿಗೆ ಬಸ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬನು ಗಾಯಾಳುವಾಗಿ ಆಸ್ಪತ್ರೆ ಸೇರಿರುವ ಘಟನೆ ಮಂಗಳವಾರ ಸಂಜೆ ಜರುಗಿದೆ. ಶಿರಾ ತಾಲೂಕು ಗುಡ್ಡದಹಟ್ಟಿ ಗ್ರಾಮದ ನಾಗರಾಜು(28) ತಗ್ಗಿಹಳ್ಳಿ ಗ್ರಾಮದ ನರಸಿಂಹ ಮೂರ್ತಿ(28) ಮೃತಪಟ್ಟ ದುರ್ದೈವಿಗಳು. ತೀವ್ರವಾಗಿ ಗಾಯಗೊಂಡ ಶಿವರಾಜುವಿಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ಡಿವೈಎಸ್‌ಪಿ ರಾಮನಾಯ್ಕ ಮತ್ತು ನಗರ ಠಾಣಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿ ಕೇಸು ದಾಖಲಿಸಿಕೊಂಡಿದ್ದಾರೆ.
ದ್ವಿಚಕ್ರವಾಹನವೊಂದಕ್ಕೆ ಹಿಂದಿನಿಂದ ವೇಗವಾಗಿ ಧಾವಿಸಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಜರುಗಿದೆ.
ಮೃತನನ್ನು ಶಿರಾ ತಾಲೂಕು ವಡ್ಡನಹಳ್ಳಿಯ ಲಿಖಿತ್ (27) ಎಂದು ಗುರುತಿಸಲಾಗಿದೆ. ಜೊತೆಯಲ್ಲಿ ಪ್ರಯಾಣಿಸುತ್ತಿದ್ದ ಬಾಲಕ ಶರತ್(13) ಬಲಗಾಲು ಮುರಿತಕ್ಕೆ ಒಳಗಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಗೆ ಕಾರಣವಾದ ಕಾರು ಮತ್ತು ಅದರ ಚಾಲಕನನ್ನು ವಶಕ್ಕೆ ಪಡೆದಿರುವ ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

