ತುಮಕೂರು

ಮೋದಿ ಪ್ರಧಾನಿಯಾಗುವುದು ಖಚಿತ

Published On :

ಪಾವಗಡ: ಪಕ್ಷದಲ್ಲಿ ಗೊಂದಲವಿಲ್ಲದ ಕಾರಣ ಬಿಜೆಪಿ ಪರ ಅಲೆ ವ್ಯಾಪಕವಾಗಿದ್ದು, ನರೇಂದ್ರಮೋದಿ ಪ್ರಧಾನಿ ಆಗಲಿದ್ದಾರೆ ಎಂದು ರಾಜ್ಯ ಬಿಜೆಪಿ ರೈತ ಮೋರ್ಚ ಅಧ್ಯಕ್ಷ ಪಾವಗಡ ಶಿವಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ಇಂದಿನಿಂದ ತಾಲೂಕಿನದ್ಯಂತ 15 ದಿನಗಳ ಕಾಲ ಕಾರ್ಯಕರ್ತರೊಂದಿಗೆ ಮನೆ ಮನೆ ಮತಯಾಚನೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಗುಜರಾತ್‌ನಲ್ಲಿ ನರೇಂದ್ರಮೋದಿ ಕೈಗೊಂಡ ಅಭಿವೃದ್ಧಿ ಮತ್ತು ಕಾಂಗ್ರೆಸ್ ವೈಪಲ್ಯಗಳ ಬಗ್ಗೆ ಜನತೆಗೆ ಮನವರಿಕೆ ಮಾಡಿ ಮತಯಾಚಿಸುವುದಾಗಿ ತಿಳಿಸಿದರು.
ಚುನಾವಣೆ ಬಳಿಕೆ ಹೇಮಾವತಿ ಯೋಜನೆಯ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಬೃಹತ್ ಹೋರಾಟ ನಡೆಯುವ ಎಚ್ಚರಿಕೆ ನೀಡಿ, ಮೋದಿ ಪಿಎಂ ಆದರೆ ನದಿ ಮೂಲದ ಕುಡಿಯುವ ನೀರಿನ ಯೋಜನೆ ಅನುಷ್ಠಾನ ಸೇರಿದಂತೆ ಶೈಕ್ಷಣಿಕ ಪ್ರಗತಿ, ಉದ್ಯೋಗ ಸೃಷ್ಟಿ ಹಾಗೂ ಕೈಗಾರಿಗಳ ಸ್ಥಾಪನೆ ಮತ್ತು ರೈತರ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆ ಮತ್ತು ತಾಲೂಕಿನ ಪ್ರಗತಿಗೆ ಬದ್ಧರಾಗುವುದಾಗಿ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.