ತುಮಕೂರು

ಪರಮೇಶ್ವರ್ ವಿಕೃತ ಮನಸ್ಸಿನ ವ್ಯಕ್ತಿ: ಟೀಕೆ

Published On :

ತುಮಕೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಸಾವನ್ನು ಬಯಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ವಿಕೃತ ಮನಸ್ಸಿನ ವ್ಯಕ್ತಿ ಎಂದು ರಾಜ್ಯ ಜೆಡಿಎಸ್ ಎಸ್ಸಿ ಘಟಕದ ಸಂಘಟನಾ ಕಾರ್ಯದರ್ಶಿ ಸಿ.ಆರ್. ಶಿವನಂಜಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅವರು ಈ ಕುರಿತು ಹೇಳಿಕೆ ನೀಡಿದ್ದು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ ದೇವೇಗೌಡ, ಕುಮಾರಸ್ವಾಮಿ ಕಾರಣ ಎಂದು ವಿನಾಕಾರಣ ದೂರುವ ಮೂಲಕ ಒಕ್ಕಲಿಗರನ್ನು ತುಳಿಯಲು ಹೊರಟಿದ್ದಾರೆ. ಹಿಂದುಳಿದ ವರ್ಗದ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬಾರದೆಂದು ವಿರೋಧ ವ್ಯಕ್ತಪಡಿಸಿ, ರಾಜ್ಯಾದ್ಯಂತ ಪ್ರತಿಭಟನೆ ಮಾಡಿಸಿದ ಕೀರ್ತಿಯೂ ಪರಮೇಶ್ವರ್ಗೆ ಸಲ್ಲುತ್ತದೆ. ಇನ್ನು ಮೊನ್ನೆ, ಮೊನ್ನೆ ಬೆಂಗಳೂರಿನಲ್ಲಿ ಸ್ವಜಾತಿ ಸಮ್ಮೇಳನ ನಡೆಸಿ, ದಲಿತರಿಗೆ ಮುಖ್ಯಮಂತ್ರಿ ಹುದ್ದೆ ತಪ್ಪಿತೆಂದು ತಮ್ಮ ಪಕ್ಷದ ವಿರುದ್ಧವೇ ಟೀಕಿಸಿ,  ಕಣ್ಣೀರುಗರೆದಿದ್ದು ಸೋಗಲಾಡಿತನವಲ್ಲದೆ ಮತ್ತೇನಲ್ಲ. ವಿಧಾನಸಭೆಯಲ್ಲಿ ಸೋಲುಂಡ ಪರಮೇಶ್ವರ್ಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಕಷ್ಟು ಅವಕಾಶಗಳಿದ್ದರೂ, ಸ್ಪರ್ಧಿಸದೆ ಇರುವುದು ಅವರ ಪಲಾಯನವಾದಕ್ಕೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.