6ರಿಂದ ವೀರಭದ್ರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವ
ಗುಬ್ಬಿ: ತಾಲೂಕಿನ ಇತಿಹಾಸ ಪ್ರಸಿದ್ಧ ವೀರಣ್ಣನಗುಡಿ ಶ್ರೀ ಭದ್ರಕಾಳಿ ಸಮೇತ ವೀರಭದ್ರಸ್ವಾಮಿಯವರ ವಾರ್ಷಿಕ ಜಾತ್ರಾ ಮಹೋತ್ಸವ ಏ. 6 ರಿಂದ ಪ್ರಾರಂಭವಾಗಲಿದ್ದು ಏ.10 ರಂದು ಬ್ರಹ್ಮರಥೋತ್ಸವವು ವೈಭವಯುತವಾಗಿ ನಡೆಯಲಿದೆ ಎಂದು ದೇವಾಲಯದ ಜೀರ್ಣೋದ್ಧಾರ ಟ್ರಸ್ಟ್ ಕಾರ್ಯಾಧ್ಯಕ್ಷ ಎಂ.ವಿ. ಬಸವರಾಜು ತಿಳಿಸಿದ್ದಾರೆ.
ಧಾರ್ಮಿಕ ಇತಿಹಾಸ ಹೊಂದಿರುವ ಸಿ.ಎಸ್.ಪುರ ಹೋಬಳಿ ವೀರಣ್ಣನಗುಡಿ ಶ್ರೀ ಭದ್ರಕಾಳಿ ಸಮೇತ ವೀರಭದ್ರಸ್ವಾಮಿ ವಾರ್ಷಿಕ ಜಾತ್ರಾ ಮಹೋತ್ಸವವು ಪ್ರತಿ ವರ್ಷದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಧಿವತ್ತಾಗಿ ನಡೆಯಲಿದ್ದು ನಾಡಿನ ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿ ತಮ್ಮ ಇಷ್ಟಾರ್ಥ ಪೂಜೆ ಸಲ್ಲಿಸಲಿದ್ದಾರೆ. ಏ.6ರಂದು ಬೆಳಗ್ಗೆ ರುದ್ರಾಭಿಷೇಕ, ಸಂಜೆ ಧ್ವಜಾರೋಹಣ,
ಏ.7 ರಂದು ನಂದೀಪೂಜೆ ಹಾಗೂ ನಂದೀಧ್ವಜ ಪೂಜೆ ನಡೆಯಲಿದ್ದು ಏ.8 ರಂದು ಆರತಿ ಮತ್ತು ಅಗ್ನಿಕೊಂಡ, ಏ.9.ರಂದು ಚಂದ್ರಮಂಡಲೋತ್ಸವ, ಕಲ್ಯಾಣೋತ್ಸವ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ನಿತ್ಯ ಸ್ವಾಮಿಗೆ ವಿಶೇಷ ರುದ್ರಾಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆಯಲಿವೆ ಎಂದು ತಿಳಿಸಿದ್ದಾರೆ. ಭಕ್ತಾದಿಗಳಿಗೆ ದೇವಾಲಯದ ಸೇವಾಕರ್ತರುಗಳಿಂದ ಪ್ರತಿ ನಿತ್ಯ ವಿಶೇಷ ದಾಸೋಹ ವ್ಯವಸ್ಥೆ ಮಾಡಲಾಗಿದ್ದು ದೇವಾಲಯ ಸಮಿತಿವತಿಯಿಂದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ರಥೋತ್ಸವದಂದು ಭಕ್ತಾದಿಗಳಿಂದ ಪಾನಕ, ಫಲಹಾರ ಹಾಗೂ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಜಾತ್ರಾ ಮಹೋತ್ಸವದ ಅಂಗವಾಗಿ ನಾಸಿಕ್ ಡೋಲು, ಕೀಲುಕುದುರೆ ನೃತ್ಯ, ಗೊಂಬೆಗಳ ಕುಣಿತ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

