ತುಮಕೂರು

ಯುದ್ಧಕ್ಕೆ ಹೆದರಿದ ಪ್ರಧಾನಿ

Published On :

ಕ.ಪ್ರ.ವಾರ್ತೆ ಟಿ ತುಮಕೂರು ಟಿ ಏ.4
ಪ್ರಧಾನಿ ಮನಮೋಹನ್ ಸಿಂಗ್ ಚುನಾವಣಾ ಯುದ್ಧಭೂಮಿಯಿಂದ ಓಡಿ ಹೋಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಹಾಗೂ ಬಿಜೆಪಿ ಮುಖಂಡ ಬಿ.ಎಸ್.ಯಡಿಯೂರಪ್ಪ ಲೇವಡಿ ಮಾಡಿದರು.
ಅವರು ತುಮಕೂರು ಲೋಕಸಭಾ ಕ್ಷೇತ್ರದ ಹೆಬ್ಬೂರಿನಲ್ಲಿ ಹೋಬಳಿ ಮಟ್ಟದ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ, ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರ ಪರವಾಗಿ ಮತಯಾಚನೆ ಮಾಡಿ ಮಾತನಾಡಿದರು.
ಪ್ರಧಾನಿಯೂ ಅಖಾಡದಲ್ಲಿಲ್ಲ. ಸೋನಿಯಾಗಾಂಧಿಯವರ ಸೊಲ್ಲಿಲ್ಲ. ರಾಹುಲ್ ಗಾಂಧಿ ನಾಯಕತ್ವ ವಹಿಸಿಕೊಳ್ಳಲು ಮುಂದೆ ಬರುತ್ತಿಲ್ಲ ಎಂದು ಲೇವಡಿ ಮಾಡಿದ ಯಡಿಯೂರಪ್ಪ, ಕಾಂಗ್ರೆಸ್ ಜನವಿರೋಧಿ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರು, ಕಾರ್ಮಿಕರು ಮತ್ತು ವಿರೋಧ ಪಕ್ಷಗಳ ನಾಯಕರ ಬಗ್ಗೆ ಹಗುರವಾಗಿ ಮಾತನಾಡುವ ಮನೋಭಾವವನ್ನು ಬದಲಿಸಿಕೊಳ್ಳದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಠಿಣವಾದ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಬಿ.ಎಸ್. ವೈ ಎಚ್ಚರಿಕೆ ನೀಡಿದರು.
ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಿದ್ದಾಗ ವಿಷ ಸೇವಿಸಿ ಮೃತಪಟ್ಟ ರೈತ ವಿಠಲ್ ಅರಭಾವಿ ಅವರ ಬಗ್ಗೆ ಕೇವಲವಾಗಿ ಮಾತನಾಡುವ ಮೂಲಕ ಮುಖ್ಯಮಂತ್ರಿ ರೈತರ ಬಗ್ಗೆ ತಮಗಿರುವ ಅಸಡ್ಡೆಯನ್ನು ತೋರ್ಪಡಿಸಿದ್ದಾರೆ. ಅರಭಾವಿ ಹೆಂಡ ಕುಡಿದು ಸತ್ತ ಎಂದು ಹೇಳುವ ಮೂಲಕ ರೈತ ಸಮೂಹಕ್ಕೆ ಮುಖ್ಯಮಂತ್ರಿಗಳು ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಆ ರೈತ ಹೆಂಡ ಕುಡಿದು ಸತ್ತಿದ್ದಲ್ಲಿ ಆತನ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರು. ಗಳ ಪರಿಹಾರ
ಕೊಟ್ಟಿದ್ದೇಕೆ ಎಂದು ಪ್ರಶ್ನಿಸಿದ ಬಿಎಸ್ವೈ, ರೈತರ ಬಗ್ಗೆ ಕೇವಲವಾಗಿ ಮಾತನಾಡುವುದನ್ನು ನಿಲ್ಲಿಸುವಂತೆ ಒತ್ತಾಯಿಸಿದರು.
ಸಿಬಿಐ ತನಿಖೆ ನಡೆಯಲಿ: ಉಗ್ರಗಾಮಿಗಳ ವಿರುದ್ಧ ಹೋರಾಟ ಮಾಡಿದ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ಅವರ ಹತ್ಯೆಗೆ ಇಲಾಖೆಯ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿದ ಯಡಿಯೂರಪ್ಪ, ಈ ಬಗ್ಗೆ ಸಿಬಿಐ ತನಿಖೆ ನಡೆಸುವಂತೆ ವಿರೋಧ ಪಕ್ಷಗಳು ಹಾಗೂ ಮೃತರ ಪತ್ನಿ ಒತ್ತಾಯಿಸಿದರೂ ಆ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗೆ ಅಪಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಂಡೆ ಅವರ ತಲೆಯಲ್ಲಿ ಗುಂಡು ಸಿಗಲಿಲ್ಲ ಎಂದು ಹೇಳುವ ಮುಖ್ಯಮಂತ್ರಿಗಳ ಮಾತನ್ನು ಕಟುವಾಗಿ ಟೀಕಿಸಿದ ಬಿಎಸ್ವೈ  ಆ ಗುಂಡು ಮುಖ್ಯಮಂತ್ರಿಗಳ ಮನೆಯಲ್ಲಿ ಇರಬೇಕು ಎಂದು ವ್ಯಂಗ್ಯವಾಡಿದರು.
ಅಭಿವೃದ್ಧಿ ಶೂನ್ಯ ವರ್ಷ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ 2013-14 ನೇ ಸಾಲಿನ ವರ್ಷ ಅಭಿವೃದ್ಧಿ ಶೂನ್ಯ ವರ್ಷವಾಗಿದೆ ಆರೋಪಿಸಿದ  ಬಿಎಸ್ವೈ, ಇದಕ್ಕಾಗಿ ನಿಮ್ಮನ್ನು ಮುಖ್ಯಮಂತ್ರಿ ಮಾಡಬೇಕಿತ್ತೇ ಎಂದು ಪ್ರಶ್ನಿಸಿದರು.
ಕಾಂಗ್ರೆಸ್ನಲ್ಲಿ ನಾಯಕರ ಕೊರತೆ: ಕಾಂಗ್ರೆಸ್ ಪಕ್ಷದಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ನಾಯಕರ ಕೊರತೆ ಕಂಡು ಬರುತ್ತಿದೆ ಎಂದು ಆರೋಪಿಸಿದ ಅವರು, ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಇರುವುದರಿಂದ ಮನಮೋಹನ್ ಸಿಂಗ್ ಅವರಾಗಲಿ, ಸೋನಿಯಾಗಾಂಧಿ ಅವರಾಗಲಿ, ರಾಹುಲ್ ಗಾಂಧಿ ಅವರಾಗಲಿ ನಾಯಕತ್ವ ವಹಿಸಿಕೊಳ್ಳಲು ಮುಂದೆ ಬರುತ್ತಿಲ್ಲ. ಯುದ್ಧ ಭೂಮಿಯಲ್ಲಿ ಶಸ್ತ್ರ ತ್ಯಾಗ ಮಾಡಿ ಓಡಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ಗೌಡ, ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜು ಸೇರಿದಂತೆ ಇತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.