ಅಸಮರ್ಪಕ ವಿದ್ಯುತ್ ಪೂರೈಕೆ ಖಂಡಿಸಿ ಪ್ರತಿಭಟನೆ
ಗುಬ್ಬಿ: ಕಳೆದ ಹಲವು ದಿನಗಳಿಂದ ಅಸಮರ್ಪಕ ವಿದ್ಯುತ್ನಿಂದಾಗಿ ಕುಡಿಯುವ ನೀರಿಗೂ ಪರಿತಪಿಸುವಂತಹ
ಸ್ಥಿತಿ ನಿರ್ಮಾಣವಾಗಿದ್ದು ಬೇರೆ ಕಡೆ ಸರಬರಾಜು ಮಾಡುವಂತೆ ಕನಿಷ್ಠ ಪಕ್ಷ 7 ಗಂಟೆಯಾದರೂ ವಿದ್ಯುತ್ ಪೂರೈಕೆ ಮಾಡಬೇಕೆಂದು ಒತ್ತಾಯಿಸಿ ತಾಲೂಕಿನ ಹೇರೂರು, ಕಿಟ್ಟದಕುಪ್ಪೆ, ಹೊದಲೂರು ಮತ್ತು ಅಂಬಾರಪುರ ಗ್ರಾಮದ ರೈತರು ಬೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ನಡೆಯಿತು.
ತಾಲ್ಲೂಕು ಪಂಚಾಯ್ತಿ ಸದಸ್ಯ ಸೋಮೇಶ್ ಮನವಿ ಪತ್ರ ಸಲ್ಲಿಸಿ ಮಾತನಾಡಿ ವಿದ್ಯುತ್ ಕಣ್ಣಾಮುಚ್ಚಾಲೆಯಿಂದ ಓದುವ ವಿದ್ಯಾರ್ಥಿಗಳಿಗೆ ಹಾಗೂ ಕುಡಿಯುವ ನೀರಿಗೂ ಹಾಹಾಕಾರವಾಗಿದ್ದು ಇದರ ಬಗ್ಗೆ ತಲೆಕೆಡಿಸಿಕೊಳ್ಳದ ಅಧಿಕಾರಿಗಳು ನಮ್ಮನ್ನು ನಿರ್ಲಕ್ಷಿಸುತ್ತಿದ್ದು ಇದು ಹೀಗೆ ಮುಂದುವರಿದರೆ ಕಚೇರಿಯ ಮಂದೆ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಅಸಮರ್ಪಕ ವಿದ್ಯುತ್ಪೂರೈಕೆಯಿಂದಾಗಿ ಕನಿಷ್ಟ ಒಂದು ಗಂಟೆಯು ಸಹ ನಿರಂತರವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ ಮಕ್ಕಳಿಗೆ ಪರಿಕ್ಷೆ ಆರಂಭವಾಗಿದ್ದು ಪರಿಕ್ಷೆಗೆ ಓದಿಕೊಳ್ಳಲು ಕೂಡ ಸಾದ್ಯವಾಗದೆ ದೀಪದ ಬೇಳಕಿನಲ್ಲಿ ಒದುವ ಸ್ಥಿತಿ ನಿರ್ಮಾಣವಾಗಿದೆ. ಬೆಸ್ಕಾಂ ಅಧಿಕಾರಿಗಳು ಕೂಡಲೇ ಸೂಕ್ತ ಕ್ರಮಕೈಗೊಳ್ಳದಿದ್ದರೆ ಮತ್ತಷ್ಟು ಉಗ್ರ ಸ್ವರೂಪದ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

