ತುಮಕೂರು

ಎಂ.ಕೃಷ್ಣಪ್ಪ ಮತ ಯಾಚನೆ

Published On :

ತಿಪಟೂರು: ತುಮಕೂರು ಲೋಕಸಭಾ ಜೆಡಿಎಸ್ ಅಭ್ಯರ್ಥಿ ಎ.ಕೃಷ್ಣಪ್ಪನವರು ತಾಲೂಕಿನ ಪ್ರಮುಖ ಹೋಬಳಿ ಕೇಂದ್ರಗಳಾದ ಕಿಬ್ಬನಹಳ್ಳಿ, ನೊಣವಿನಕೆರೆ ಮತ್ತು ರಸ್ತೆ ಆಜುಬಾಜು ಗ್ರಾಮಗಳು ಸೇರಿದಂತೆ ಪಟ್ಟಣದ ಗಾಂಧಿನಗರದ ಪ್ರಮುಖ ಬೀದಿಗಳಲ್ಲಿ ಇಂದು ರೋಡ್ ಶೋ ಮೂಲಕ ಮತ ಯಾಚಿಸಿದರು.  ಈ ವೇಳೆ ಮಾತನಾಡಿದ ಅವರು ಕ್ಷೇತ್ರದ ಜನತೆ ನನ್ನನ್ನು ಜಯಶೀಲರನ್ನಾಗಿ ಮಾಡಿದರೆ ಏಷ್ಯಾದಲ್ಲೇ ಅತಿ ದೊಡ್ಡ ತೆಂಗಿನ ಮಾರುಕಟ್ಟೆ ತಿಪಟೂರಿನಲ್ಲಿದ್ದು ಕೊಬ್ಬರಿಗೆ ಹೆಚ್ಚಿನ ಬೆಂಬಲ ಬೆಲೆಗೆ ಕ್ರಮ ಕೈಗೊಳ್ಳಲಾಗುವುದು. ಮೂಲಭೂತ ಸೌಕರ್ಯಗಳಾದ ರಸ್ತೆ,ಕುಡಿಯುವ ನೀರು, ಬಸ್ ಸೌಕರ್ಯ, ಬರಪೀಡಿತ ಪ್ರದೇಶಗಳಿಗೆ ನೀರಿನ ವ್ಯವಸ್ಥೆ ಮತ್ತು ಜಿಲ್ಲಾ ಹಾಗೂ ತಾಲೂಕು ಸರ್ಕಾರ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಿ ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ತಿಪಟೂರು ಜಿಲ್ಲೆಯಾಗುವ ಎಲ್ಲಾ ಅರ್ಹತೆ ಹೊಂದಿದ್ದು ತಿಪಟೂರು ಜಿಲ್ಲೆಯಾಗಿಸಲು ಸರ್ಕಾರದ ಮಟ್ಟದಲ್ಲಿ ಹೋರಾಟ ನಡೆಸುವೆ ಎಂದರು.  ತಾಲೂ ಕು ಜೆಡಿಎಸ್ ಅಧ್ಯಕ್ಷ ಗುರುಮೂರ್ತಿ, ಜಿ.ಪಂ.ಸದಸ್ಯರಾದ ಆನಂದರವಿ, ರಾಧಾನಾರಾಯಣಗೌಡ, ಜೆಡಿಎಸ್ ಮುಖಂಡರಾದ ಜಕ್ಕನಹಳ್ಳಿ ಲಿಂಗರಾಜು, ಪ್ರಶಾಂತ್, ನಟರಾಜ್, ಗುರುಪ್ರಸನ್ನ, ಹಿಂಡಿಸ್ಕೆರೆ ಶಿವಶಂಕರ್,  ನಗರಸಭಾ ಸದಸ್ಯರಾದ ರೇಖಾಅನೂಪ್,ಕೋಟೆ ಪ್ರಭು,ಸೊಪ್ಪು ಗಣೇಶ್, ಅಲ್ಪಸಂಖ್ಯಾತ ಮುಖಂಡರಾದ ನೂರ್ಜಾನ್, ಫಾಯಾಜ್, ಇಮ್ರಾನ್, ರುಕ್ಸಾನ ಬಾನು, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಬು ಸೇರಿದಂತೆ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು.
ಹನುಮೇಗೌಡರ ಗೆಲವು ನಿಶ್ಚಿತ
ಗುಬ್ಬಿ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಮಹತ್ವ ಪೂರ್ಣವಾದ ಜನಪರ ಯೋಜನೆಗಳನ್ನು ಜಾರಿಗೊಳಿಸಿದ್ದು ಸರ್ಕಾರದ ಮಹತ್ವದ ಯೋಜನೆಗಳೇ ಪ್ರಸಕ್ತ ಲೋಕಸಭಾ ಚುನಾವಣೆಯಲ್ಲಿ ಶ್ರೀರಕ್ಷೆಯಾಗಲಿದ್ದು ಈ ಬಾರಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಮುದ್ದಹನುಮೇಗೌಡರನ್ನು ಗೆಲ್ಲಿಸಲು ನಿರ್ಧರಿಸಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಹೊನ್ನಗಿರಿ ಗೌಡ ತಿಳಿಸಿದರು.ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಪಕ್ಷದ ಎಲ್ಲಾ ಮುಖಂಡರು, ವಿವಿಧ ಘಟಕಗಳ ಪದಾಧಿಕಾರಿಗಳು ಒಗ್ಗಟ್ಟಿನಿಂದ ಪ್ರಸಕ್ತ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಗೆಲವಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದರು.ಕೆಪಿಸಿಸಿ ಸದಸ್ಯ ಕೆ.ಆರ್.ತಾತಯ್ಯ ಮಾತನಾಡಿ ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ಸಂಪೂರ್ಣ ಸಹಕಾರ ನೀಡುವಂತೆ ಮನವಿ ಮಾಡಿದರು.ಗುಬ್ಬಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಭರತ್ ಗೌಡ ಹಾಗೂ ಶಂಕರಾನಂದ ಮಾತನಾಡಿದರು.ಸುದ್ದಿಗೋಷ್ಠಿಯಲ್ಲಿ ಹಲವು ಪ್ರಮುಖರು ಭಾಗವಹಿಸಿದ್ದರು.
ಸಿಪಿಐಗೆ ಮತ ನೀಡಿ: ಗಿರೀಶ್
ತಿಪಟೂರು: ತುಮಕೂರು ಲೋಕಸಭಾ ಕ್ಷೇತ್ರದ ಸಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ವಿ.ಚಿನ್ನಪ್ಪನವರ ಪರ ಜಿಲ್ಲಾ ಲೋಕಸಭಾ ಪ್ರಚಾರ ಸಮಿತಿ ಮುಖ್ಯಸ್ಥ ಗಿರೀಶ್ ಜಾಥಾ ಹಮ್ಮಿಕೊಂಡು ಶುಕ್ರವಾರ ಮತ ಪ್ರಚಾರ ನಡೆಸಿದರು.  ಗಿರೀಶ್ ಮಾತನಾಡಿ ಸಿಪಿಐ, ಫಾರ್ವರ್ಡ್ ಬ್ಲಾಕ್, ರೈತ ಸಂಘಟನೆಗಳು ಮತ್ತು ಜಾತ್ಯತೀತ ಪ್ರಗತಿಪರ ಸಂಘಟನೆಗಳ ಬೆಂಬಲಿತ ಅಭ್ಯರ್ಥಿ ವಿ.ಚಿನ್ನಪ್ಪನವರನ್ನು ಚುನಾಯಿಸಬೇಕೆಂದು ಮನವಿ ಮಾಡಿದ ಅವರು, ಡಾ.ಪರಮಶಿವಯ್ಯ ಆಧಾರಿತ ನೀರಾವರಿ ಯೋಜನೆಯನ್ನು ಜಾರಿಗೆ ತರುವುದು, ರೈತರ ಬೆಳೆಗೆ ವೈಜ್ಞಾನಿಕ ಬೆಲೆ, ಕೊಬ್ಬರಿಗೆ ಬೆಂಬಲ ಬೆಲೆ, ಕಾರ್ಮಿಕರಿಗೆ ರೂ.10ಸಾವಿರ ಕನಿಷ್ಠ ಕೂಲಿ ನಿಗದಿ, 60 ವರ್ಷ ತುಂಬಿದ ರೈತರಿಗೆ ಕನಿಷ್ಠ ರು. 3ಸಾವಿರ ಪಿಂಚಣಿ ನಾವು ಅಧಿಕಾರಕ್ಕೆ ಬಂದಲ್ಲಿ ಜಾರಿಗೊಳಿಸುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮುಖಂಡರಾದ ಗೌಡರಂಗಪ್ಪ, ವಾಸುದೇವಕುಮಾರ್, ರೈತ ಮುಖಂಡ ಶಶಿಕಾಂತ್, ಕಟ್ಟಡ ಕಾರ್ಮಿಕ ಗೋಪಾಲ, ಐ.ಟಿ.ಎ.ಜಿ.ಪಂ.ನ ಪ್ರಸನ್ನಕುಮಾರ್ ಮತ್ತಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.