ಅಧಿಕಾರಿಗಳು ಸಮಸ್ಯೆಗಳಿಗೆ ಸ್ಪಂದಿಸಲಿ'
ಮಧುಗಿರಿ: ಅಧಿಕಾರಿಗಳು ಎಲ್ಲರೊಂದಿಗೆ ಸಮಾನ ಮನೋಭಾವದಿಂದ ಸ್ಪಂದಿಸಿ ತಮ್ಮ ಕರ್ತವ್ಯ ಪಾಲಿಸಿದಾಗ ಮಾತ್ರ ಬಾಬು ಜಗಜೀವನ್ರಾಮ್ ಜನ್ಮ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಉಪವಿಭಾಗಾಧಿಕಾರಿ ಅನಿತಾಲಕ್ಷ್ಮೀ ಕಿವಿಮಾತು ಹೇಳಿದರು.
ಇಲ್ಲಿನ ಮಿನಿ ವಿಧಾನಸೌಧದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತದ ವತಿಯಿಂದ ಏರ್ಪಡಿಸಿದ್ದ ಬಾಬು ಜಗಜೀವನ್ರಾಮ್ 107ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಧಿಕಾರಿಗಳು ಸಾರ್ವಜನಿಕರೊಂದಿಗೆ ಪ್ರೀತಿ, ವಿಶ್ವಾಸ ಹಾಗೂ ಸೌಜನ್ಯದಿಂದ ಸ್ಪಂದಿಸಿ ಅಚ್ಚುಕಟ್ಟಾಗಿಕೆಲಸ ನಿರ್ವಹಿಸುವ ಜೊತೆಗೆ ಜಾತ್ಯತೀತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಕರೆ ನೀಡಿದ ಅವರು, ಬಾಬು ಜಗಜೀವನರಾಮ್ ಹಿಂದುಳಿದ ವರ್ಗದಲ್ಲಿ ಜನಿಸಿದರೂ ಕೂಡ ದೇಶದ ಉನ್ನತ ಸ್ಥಾನಗಳಿಸಿ ಸಾಮಾಜಿಕ ನ್ಯಾಯಕ್ಕೆ ಬದ್ಧರಾಗಿದ್ದರು ಎಂದರು.
ಡಿಡಿಪಿಐ ಟಿ.ಎಸ್.ಆಂಜನಪ್ಪ, ತಹಸೀಲ್ದಾರ್ ಕೆ. ರಮೇಶ್ ಮತ್ತಿತರರು ಮಾತನಾಡಿದರು.
ಜಿಪಂ ಎಇಇ ಕೃಷ್ಣಮೂರ್ತಿ, ಎಆರ್ಸಿ ತಿಪ್ಪೇಸ್ವಾಮಿ, ಬಿಇಒ ವೈ.ಎನ್.ರಾಮಕೃಷ್ಣಯ್ಯ, ಸಿಡಿಪಿಒ ಸೋಮಸುಂದರ್, ಸಮಾಜ ಕಲ್ಯಾಣಾಧಿಕಾರಿ ಮಹದೇವಯ್ಯ, ಡಿವೈಎಸ್ಪಿ ಗುರುಸ್ವಾಮಿ, ಸಿಪಿಐ ಗಿರೀಶ್ ನಾಯಕ್, ಪಿಎಸ್ಐ ಎಂ.ಅಂಬರೀಷ್, ಪುರಸಭೆ ಮುಖ್ಯಾಧಿಕಾರಿ ಬಿ.ಶುಭ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

