ಅನುಮತಿ ಪಡೆಯದ ಅಕ್ರಮ ಶಾಲೆಗಳ ವಿರುದ್ಧ ಕ್ರಮಕ್ಕೆ ಸೂಚನೆ
ಕುಣಿಗಲ್: ತಾಲೂಕಿನಲ್ಲಿ ಅಕ್ರಮ ಶಾಲೆಗಳು ಪ್ರಾರಂಭವಾಗಿದ್ದಲ್ಲಿ ಅವುಗಳ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ಮಾಡಿ ವರದಿ ಸಲ್ಲಿಸುವಂತೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಈಶ್ವರಯ್ಯ ತಿಳಿಸಿದರು. ಶನಿವಾರ ಕಲ್ಲುಪಾಳ್ಯ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಭಕ್ತರಹಳ್ಳಿ ಗ್ರಾಮದಲ್ಲಿ ಖಾಸಗಿ ವಿದ್ಯಾಸಂಸ್ಥೆಯೊಂದು ಅನುಮತಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪತ್ರಿಕೆಗಳಲ್ಲಿ ವರದಿಯಾಗಿದ್ದು, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಯ್ಯ ಅವರಿಗೆ ಸ್ಥಳ ಪರಿಶೀಲನೆ ಮಾಡಿ, ಕೂಡಲೇ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುಗಾಗಿ ತಿಳಿಸಿದರು. ಸಾರ್ವಜನಿಕ ಶಿಕ್ಷಣ ಇಲಾಖೆಯು ಸಾರ್ವಜನಿಕರ ಯಾವುದೇ ರೀತಿಯ ಸಮಸ್ಯೆಗೆ ಸ್ಪಂದಿಸಿದಾಗ ಸಮಸ್ಯೆಗಳು ಇತ್ಯರ್ಥಗೊಂಡು ಇಲಾಖೆ ಮೇಲೆ ಉತ್ತಮ ಅಭಿಪ್ರಾಯ ಮೂಡಲು ಸಹಕಾರಿಯಾಗುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

