ಕಾಂಗ್ರೆಸ್ ಅಭ್ಯರ್ಥಿ ಬೆಂಬಲಿಸಲು ಶಾಸಕ ರಫೀಕ್ ಮನವಿ
ತುಮಕೂರು: ನಗರದ ಎಲ್ಲ ಪರಿಶಿಷ್ಟ ಜಾತಿ, ಪಂಗಡಗಳು ಒಟ್ಟಾಗಿ ಕಾಂಗ್ರೆಸ್ ಬೆಂಬಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಅವರಿಗೆ ಮತ ಹಾಕಿದರೆ, ಸಿಎಂ ಸಿದ್ದರಾಮಯ್ಯ ಕೈ ಬಲಪಡಿಸುವ ಮೂಲಕ ಕೇಂದ್ರದಲ್ಲಿ ಜನಪರ ಕಾಂಗ್ರೆಸ್ ಮತ್ತೆ ಆಡಳಿತ ನಡೆಸಲು ಸಹಕರಿಸಿದಂತಾಗುತ್ತದೆ ಎಂದು ತುಮಕೂರು ಶಾಸಕ ಡಾ. ರಫೀಕ್ ಅಹಮದ್ ಮನವಿ ಮಾಡಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗ ವತಿಯಿಂದ ಏರ್ಪಡಿಸಿದ್ದ ತುಮಕೂರು ನಗರ ಎಸ್ಸಿ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಹತ್ತು ತಿಂಗಳಿನಲ್ಲಿಯೇ ಅನೇಕ ಭರವಸೆಗಳನ್ನು ಈಡೇರಿಸುವ ಮೂಲಕ ಜನತೆಗೆ ನೀಡಿದ್ದ ಮಾತನ್ನು ಉಳಿಸಿಕೊಂಡಿದೆ.
ಅನ್ನಭಾಗ್ಯ, ಕ್ಷೀರಭಾಗ್ಯ, ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಾಕಷ್ಟು ಶ್ರಮಿಸುವ ಮೂಲಕ ತನ್ನದೇ ಆದ ಕೊಡುಗೆ ನೀಡಿದೆ.
ಮಾತ್ರವಲ್ಲ, 2015ರ ಮಾ.31ರೊಳಗೆ ರು.15 ಸಾವಿರ ಕೋಟಿ ಹಣ ಜನಾಂಗದ ಅಭಿವೃದ್ಧಿಗೆ ಬಳಕೆಯಾಗಬೇಕು ಎಂಬ ಹೊಸ ಕಾನೂನನ್ನೂ ಸಹ ಜಾರಿಗೆ ತಂದಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ವಿಭಾಗ ಅಧ್ಯಕ್ಷ ಆರ್. ರಾಮಕೃಷ್ಣ ಮಾತನಾಡಿ, ಎಸ್ಸಿ ಜನಾಂಗ ಕಾಂಗ್ರೆಸ್ ಬೆಂಬಲಿಸಬೇಕು.
ಈಗಾಗಲೇ ಸಿದ್ದರಾಮಯ್ಯ ತಮ್ಮ ಹತ್ತು ತಿಂಗಳ ಅವಧಿಯಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಯೋಜನೆ ನೀಡಲಿದ್ದಾರೆ ಎಂದು ಅಭಿಪ್ರಾಯಪಟ್ಟರು.
ನಗರ ಪರಿಶಿಷ್ಟ ವಿಭಾಗ ಅಧ್ಯಕ್ಷ ಎಸ್.ಜಿ. ಕೃಷ್ಣಸ್ವಾಮಿ, ಕಾಂಗ್ರೆಸ್ ಜಿಲ್ಲಾ ವಕ್ತಾರ ಜಕಣಾಚಾರ್ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

