ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ವಸಂತ್ ಕುಮಾರ್ ನೇಮಕ
ತುರುವೇಕೆರೆ: ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ತಾಲೂಕಿನ ಬೂವನಹಳ್ಳಿ ಬಿ.ಎಸ್.ವಸಂತ್ ಕುಮಾರ್ ಅವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್ ನೇಮಕ ಮಾಡಿದ್ದಾರೆ.
ಈಗಾಗಲೇ ಕಳೆದ ಐದಾರು ವರ್ಷಗಳಿಂದ ಪಕ್ಷದ ವಿವಿಧ ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಬಿ.ಎಸ್.ವಸಂತ್ಕುಮಾರ್ ಪಕ್ಷವನ್ನು ತುರುವೇಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಬಲಿಷ್ಠಗೊಳ್ಳಲು ಪ್ರಯತ್ನಿಸಿದ್ದಾರೆ. ಇವರ ಸೇವೆಯನ್ನು ಗುರುತಿಸಿರುವ ಜಿಲ್ಲಾ ಅಧ್ಯಕ್ಷ ಷಫಿ ಅಹಮದ್ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ನೇಮಿಸಿ ಆದೇಶಿಸಿದ್ದಾರೆ.
ಕಾರ್ಯದರ್ಶಿ ಹುದ್ದೆಯನ್ನು ಸದ್ಬಳಕೆ ಮಾಡಿಕೊಂಡು ಜಿಲ್ಲಾ ಮಟ್ಟದಲ್ಲಿ ಮತ್ತೂ ಪ್ರಬಲವಾಗಿ ಬೆಳೆಸಲು ಮುಂದಾಗಬೇಕು ಎಂದು ಬಿ.ಎಸ್.ವಸಂತ್ ಕುಮಾರ್ಗೆ ಸೂಚಿಸಿದ್ದಾರೆ.
ಹಾಲು ಉತ್ಪಾದಕರಿಗೆ
ಬೋನಸ್ ವಿತರಣೆ
ತುರುವೇಕೆರೆ: ತಾಲೂಕಿನ ಹುಲ್ಲೇಕೆರೆಯ ಹಾಲು ಉತ್ಪಾದಕರಿಗೆ ಕಳೆದ 10-11 ನೇ ಸಾಲಿನ ಬೋನಸ್ ವಿತರಿಸಲಾಯಿತು. ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಒಟ್ಟು 120 ಮಂದಿ ರೈತರಿದ್ದು, ಇವರಿಗೆ ಸುಮಾರು 91 ಸಾವಿರ ರೂಗಳಿಗೂ ಹೆಚ್ಚು ಬೋನಸ್ ನೀಡಲಾಗಿದೆ ಎಂದು ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕ ಸಿ.ವಿ.ಮಹಲಿಂಗಪ್ಪ ತಿಳಿಸಿದರು. ಮುಂಬರುವ ದಿನಗಳಲ್ಲಿ ಸಂಘಕ್ಕೆ ಕಟ್ಟಡ ಕಟ್ಟಿಕೊಳ್ಳುವ ಸಲುವಾಗಿ ಅನುದಾನ ನೀಡುವ ಭರವಸೆ ನೀಡಿದರು.10-11ನೇ ಸಾಲಿನಲ್ಲಿ ಮೆಡಿಕಲ್ ಆನಂದ್ಮೂರ್ತಿ ಉತ್ತಮ ಗುಣಮಟ್ಟದ ಹಾಲನ್ನು ಸಂಘಕ್ಕೆ ನೀಡಿದ್ದರ ಫಲವಾಗಿ ಸುಮಾರು 2, 400 ಬೋನಸ್ ಪಡೆದರು. ಸಂಘದ ಅಧ್ಯಕ್ಷ ಹೆಚ್.ಎನ್. ಶಿವಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಜಿಲ್ಲಾ ಹಾಲು ಒಕ್ಕೂಟದ ನೂತನ ನಿರ್ದೇಶಕ ಸಿ.ವಿ.ಮಹಲಿಂಗಪ್ಪ ಅವರರನ್ನು ಸನ್ಮಾನಿಸಲಾಯಿತು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

