ತುಮಕೂರು

20 ಸೀಟು ಖಚಿತ, ಕಾಂಗ್ರೆಸ್ ಪರ ಅಲೆ

Published On :

ತುಮಕೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ 20 ಸೀಟು ಗೆಲ್ಲುವ ವಿಶ್ವಾಸವಿದೆ ಎಂದು ರಾಜ್ಯ ಅಬಕಾರಿ ಸಚಿವ ಜಾರಕಿಹೊಳಿ ತಿಳಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತುಮಕೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡ ಪರ ಜಿಲ್ಲಾ ಕಾಂಗ್ರೆಸ್ ಮುಖಂಡರ ಜತೆ ಪ್ರಚಾರ ಕೈಗೊಂಡಿದ್ದು, ಇನ್ನೆರಡು ಕ್ಷೇತ್ರಗಳಲ್ಲಿ ಪ್ರಚಾರ ಕೈಗೊಳ್ಳಬೇಕಿದೆ. ಕಾಂಗ್ರೆಸ್ ಪರ ಅಲೆ ಇರುವುದು ಕಂಡು ಬಂದಿದ್ದು, ಗೆಲುವಿನ ವಿಶ್ವಾಸವಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯನವರ 10 ತಿಂಗಳ ಆಡಳಿತಾವಧಿ, ಕಾಂಗ್ರೆಸ್ ನೇತೃತ್ವದ ಕೇಂದ್ರ ಯುಪಿಎ ಸರ್ಕಾರದ 10 ವರ್ಷಗಳ ಆಡಳಿತಾವಧಿ ಸಾಧನೆ ಕಾಂಗ್ರೆಸ್ ಗೆಲುವಿಗೆ ಕಾರಣವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಿರೀಕ್ಷಿತ ಸಾಧನೆ ಮಾಡದಿದ್ದರೆ: ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಆಧಾರದ ಮೇಲೆ ಕೆಲಸ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಗರಿಷ್ಠ 20 ಸೀಟು ಗೆಲ್ಲುವ ವಿಶ್ವಾಸವಿದೆ. ನಿರೀಕ್ಷಿತ ಸೀಟುಗಳು ಲಭ್ಯವಾಗದಿದ್ದರೆ, ನೋಡೋಣ.  ಚುನಾವಣೆಯ ನಂತರ ಆ ಮಾತು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ತಾವು ಪ್ರವಾಸ ಮಾಡಿದ ವೇಳೆ, ತಮಗಿರುವ ಮಾಹಿತಿ ಪ್ರಕಾರ ಕಾಂಗ್ರೆಸ್  ಸರ್ಕಾರ ನಿರೀಕ್ಷಿತ ಸಾಧನೆ ಮಾಡುವುದು ಖಚಿತ ಎಂದರು.
ಗೊಂದಲ ಸ್ವಾಭಾವಿಕ: ಚುನಾವಣೆ ವೇಳೆ ಗೊಂದಲ ಸ್ವಾಭಾವಿಕ. ಆದರೆ ನಿರಂತರವಲ್ಲ. ಮಂಡ್ಯ ಸೇರಿದಂತೆ ಒಂದೆರಡು ಕಡೆ ಗೊಂದಲ  ಪ್ರತಿಭಟನೆ ಇರಬಹುದು. ಇದು ಕಾಂಗ್ರೆಸ್ ಗೆ ಮಾತ್ರ ಸೀಮಿತವಲ್ಲ. ಬೇರೆ ಪಕ್ಷಗಳಲ್ಲೂ ಇರುತ್ತೆ ಎನ್ನುವುದು ಗಮನಾರ್ಹ. ಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರಲ್ಲ ಎಂದರು. ರೈತ ಅರಭಾವಿ ಆತ್ಮಹತ್ಯೆ ಪ್ರಕರಣ ಮುಗಿದ ಅಧ್ಯಾಯ. ಈ ಕುರಿತು ವರದಿ ಇನ್ನೂ ಬಂದಿಲ್ಲ. ಈ ಸಂಬಂಧ ಹೆಚ್ಚಿಗೆ ಏನೂ ಹೇಳಲು ಬಯಸುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್. ಷಫಿ ಅಹಮದ್, ತುಮಕೂರು ನಗರ ಕಾಂಗ್ರೆಸ್ ಶಾಸಕ ಡಾ. ರಫೀಕ್ ಅಹಮದ್, ಎಸ್.ಟಿ. ಕಾಂಗ್ರೆಸ್ ಘಟಕದ ಮುಖ್ಯಸ್ಥ ತು.ಬಿ. ಮಲ್ಲೇಶ್ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.