ಡಾ.ಅಂಬೇಡ್ಕರ್ ಜಯಂತಿ 14ಕ್ಕೆ
ಮೈಸೂರು: ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರ ನಾಯಕ ಡಾ.ಬಿ.ಆರ್.ಅಂಬೇಡ್ಕರ್ ಅವರ 123ನೇ ಜನ್ಮ ದಿನಾಚರಣೆ ಅಂಗವಾಗಿ ಏ.14ರ ಬೆಳಗ್ಗೆ 9.30ಕ್ಕೆ ಪುರಭವನ ಆವರಣದ ಡಾ.ಬಿ.ಆರ್. ಅಂಬೇಡ್ಕರ್ ಪತ್ರಿಮೆಗೆ ಮಾಲಾರ್ಪಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ತಾತ್ಕಾಲಿಕ ಜ್ಯೇಷ್ಠತಾ ಪಟ್ಟಿ ಪ್ರಕಟ
ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಡಳಿತ ವ್ಯಾಪ್ತಿಯಡಿಯ ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಗ್ರೇಡ್-1 ದೈಹಿಕ ಶಿಕ್ಷಣ ಶಿಕ್ಷಕರ ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದೆ. ಪಟ್ಟಿಯನ್ನು ನೇರ ನೇಮಕಾತಿ, ಬಡ್ತಿ ಪಡೆದು ಗ್ರೇಡ್- 1ರ ದೈಹಿಕ ಶಿಕ್ಷಣ ಶಿಕ್ಷಕರ ಸೇವಾ ಮಾಹಿತಿ ಆಧರಿಸಿ ಕಳೆದ 2011 ಜ.1 ರಲ್ಲಿ ಇದ್ದಂತೆ ರಾಜ್ಯಮಟ್ಟದ ಗ್ರೇಡ್- 1 ದೈಹಿಕ ಶಿಕ್ಷಣ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಪಟ್ಟಿಯನ್ನು ಇಲಾಖಾ ವೆಬ್ಸೈಟ್ ಡಿಡಿಠಣಣಣಢಿಢಿಢಿ.ಝ್ಛ್ಟ್ಟಟಜಜ್ಡ್ಛಛಡ್ಝ್ಟಿಟಿ.್ಞಛ್ಠ.ಟ್ಝ್ಛಿ.್ಝಟಿ ರಲ್ಲಿ ಹಾಗೂ ಸಂಬಂಧಿಸಿದ ಬಿಇಒ ಕಚೇರಿಯಲ್ಲಿ ಪ್ರಕಟಿಸಿದ್ದು, ಬಾಧಿತ ಶಿಕ್ಷಕರು ಆಕ್ಷೇಪಣೆಗಳಿದ್ದಲ್ಲಿ 30 ದಿನಗಳೊಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ಬಿಇಒ ಕಚೇರಿಗೆ ಆಕ್ಷೇಪಣೆ ಸಲ್ಲಿಸಿ ಸ್ವೀಕೃತಿ ಪಡೆಯಬಹುದು ಎಂದು ಡಿಡಿಪಿಐ ಎಚ್.ಆರ್. ಬಸಪ್ಪ ತಿಳಿಸಿದ್ದಾರೆ.
ಕಾಂಗ್ರೆಸ್ ಪ್ರಚಾರರಥಯಾತ್ರೆ
ಮೈಸೂರು: ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಚ್. ವಿಶ್ವನಾಥ್ ಪರ ಪ್ರಚಾರ ನಡೆಸಲು ಶಾಸಕ ಎಂ.ಕೆ.ಸೋಮಶೇಖರ್ ಅವರು ರೂಪಿಸಿರುವ ರಥಯಾತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿ. ಶ್ರೀನಿವಾಸಪ್ರಸಾದ್ ಸೋಮವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಕೇಂದ್ರ ಯುಪಿಎ ಸರ್ಕಾರ ಲೋಕಪಾಲ್ ಬಿಲ್ ಮಸೂದೆ ಜಾರಿಗೆ ತರುವ ಮೂಲಕ ದೇಶದಲ್ಲಿ ಭ್ರಷ್ಟಾಚಾರವನ್ನು ಹೋಗಲಾಡಿಸಲು ಹೆಜ್ಜೆ ಇಟ್ಟಿದೆ. ಪ್ರತಿಯೊಬ್ಬರಿಗೂ ಶಿಕ್ಷಣ ದೊರಕಲು ಶಿಕ್ಷಣ ಹಕ್ಕು ಕಾಯಿದೆ ಜಾರಿಗೆ ತರಲಾಯಿತು. ರಾಜ್ಯ ಸರ್ಕಾರ ಅನ್ನಭಾಗ್ಯ, ಕ್ಷೀರಭಾಗ್ಯ ಜಾರಿಗೆ ತಂದಿದೆ. ಇವೆಲ್ಲವನ್ನು ಗಮನಿಸಿ ಮತದಾರ ಕಾಂಗ್ರೆಸ್ ಬೆಂಬಲಿಸಲಿದ್ದಾನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಶಾಸಕ ಎಂ.ಕೆ.ಸೋಮಶೇಖರ್ ಮಾತನಾಡಿ, ಕೆ.ಆರ್.ವಿಧಾನಸಭಾ ಕ್ಷೇತ್ರದಾದ್ಯಂತ ಈ ರಥಯಾತ್ರೆ ಚಲಿಸಲಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ನೀಡಿರುವ ಮಹತ್ತರ ಕೊಡುಗೆಗಳನ್ನು ಮನೆ ಮನೆಗೂ ತಲುಪಿಸಲಾಗುವುದು ಎಂದರು. ಇದೇ ವೇಳೆ ಅಭ್ಯರ್ಥಿ ಎಚ್. ವಿಶ್ವನಾಥ್, ಶಾಸಕ ತನ್ವೀರ್ ಸೇಠ್, ಮಾಜಿ ಸಚಿವೆ ರಾಣಿ ಸತೀಶ್, ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ದಾಸೇಗೌಡ, ಮುಖಂಡರಾದ ಎಂ.ಶಿವಣ್ಣ, ರವಿಶಂಕರ್, ಶ್ರೀನಾಥ್ ಬಾಬು ಇದ್ದರು.ಸ್ವರ್ಣಬಿಂದು
ಪ್ರಾಶನ ನಾಳೆ
ಮಂಡ್ಯ: ಮೈಸೂರಿನ ಕಶ್ಯಪ್ ಆಯುರ್ವೇದಿಕ್ ಕ್ಲಿನಿಕ್ ವತಿಯಿಂದ ಗಾಂಧಿನಗರದ 2ನೇ ಕ್ರಾಸ್ ಹೊಸಹಳ್ಳಿ ರಸ್ತೆಯಲ್ಲಿರುವ ಸರ್ವಿಸ್ ಪಾಯಿಂಟ್ನಲ್ಲಿ ಏ.9 ರಂದು ಬೆಳಗ್ಗೆ 7 ರಿಂದ ಸಂಜೆ 4.30ರವರೆಗೆ ಮಕ್ಕಳಿಗೆ ಸ್ವರ್ಣಬಿಂದು ಪ್ರಾಶನ ಹಾಕಲಾಗುವುದು. ಮಾಹಿತಿಗೆ ಮೊ.94498-33344, 94481-30003 ಇಲ್ಲಿಗೆ ಸಂಪರ್ಕಿಸಬಹುದು.
ಸುತ್ತೂರುಶ್ರೀ ಭೇಟಿ
ಮೈಸೂರು: ಮಾಜಿ ಶಾಸಕ ಎಚ್.ಎಸ್. ಶಂಕರಲಿಂಗೇಗೌಡ ಅವರ ಅಂತ್ಯಕ್ರಿಯೆ ವೇಳೆ ಸುತ್ತೂರು ಮಠದ ಶಿವರಾತ್ರಿದೇಶಿಕೇಂದ್ರ ಸ್ವಾಮೀಜಿ ಭೇಟಿ ನೀಡಿದ್ದರು. ಹೆಬ್ಬಾಳು ಕೈಗಾರಿಕಾ ಪ್ರದೇಶ ವ್ಯಾಪ್ತಿಯ ಎಚ್.ಎಸ್. ಶಂಕರಲಿಂಗೇಗೌಡ ಅವರಿಗೆ ಸೇರಿದ ಸ್ಥಳದಲ್ಲಿ ನಡೆದ ಅಂತ್ಯಕ್ರಿಯೆ ವೇಳೆ ಶ್ರೀಗಳು ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಅಲ್ಲದೆ ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ ಸಹ ಮೃತರ ಅಂತಿಮ ದರ್ಶನ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

