ಪಹಣಿ ಪ್ರತಿ ವಿತರಣೆ: ಜಿಲ್ಲಾಧಿಕಾರಿ ಘೋಷಣೆ
Published On :
ತುಮಕೂರು: ಜಿಲ್ಲೆಯ ಎಲ್ಲಾ ತಾಲೂಕು ಭೂಮಿ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಆಯಾ ತಾಲೂಕಿಗೆ ಸಂಬಂಧಿಸಿದಂತೆ ಯಾವುದೇ ಗ್ರಾಮದ ಸರ್ವೆ ನಂಬರ್‌ನ ಪಹಣಿಯನ್ನು ರೈತರು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ 10 ತಾಲೂಕು ಕೇಂದ್ರಗಳಲ್ಲಿ ಭೂಮಿ ಕೇಂದ್ರ ಹಾಗೂ ಜಿಲ್ಲೆಯ 50 ನಾಡಕಚೇರಿಗಳಲ್ಲಿ ಅಟಲ್‌ಜೀ ಜನಸ್ನೇಹಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದ್ದು, ಆಯಾ ತಾಲೂಕಿಗೆ ಸಂಬಂಧಿಸಿದ ಎಲ್ಲಾ ಹೋಬಳಿ ಪಹಣಿ ಪ್ರತಿಗಳನ್ನು ವಿತರಿಸಲಾಗುತ್ತಿದೆ. ಹೆಚ್ಚಿನ ಮಾಹಿತಿಗಾಗಿ ರೈತರು ತಾಲೂಕು ತಹಸೀಲ್ದಾರ್ ಅಥವಾ ಅಟಲ್‌ಜೀ ಜನಸ್ನೇಹಿ ಕೇಂದ್ರದ ಉಪತಹಸೀಲ್ದಾರರನ್ನು ಸಂಪರ್ಕಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಗೂಂಡಾ ಕಾಯ್ದೆಯಡಿ ಕ್ರಮ: ತುಮಕೂರು ಜಿಲ್ಲೆಯಲ್ಲಿ ಚುನಾವಣೆ ನಿಮಿತ್ತ ನಕಲು ಮದ್ಯ ತಯಾರಿಸಿ, ಸಾಗಾಣಿಕೆ ಮಾಡಿ, ಹಂಚಿಕೆ ಮಾಡುವವರ ವಿರುದ್ದ ಹಾಗೂ ನಕಲಿ ಮದ್ಯ ಶೇಖರಿಸಿಟ್ಟಿದ್ದ ಮನೆ ಮಾಲೀಕರು ಮತ್ತು ಸಾಗಾಣಿಕೆ ಮಾಡುವ ವಾಹನದ ಮಾಲೀಕರ ವಿರುದ್ದ ಗೂಂಡಾ ಕಾಯ್ದೆಯಡಿ ಕ್ರಮ ಜರುಗಿಸಿ ಬಂಧಿಸಲಾಗುವುದೆಂದು ಸಾರ್ವಜನಿಕರಲ್ಲಿ ಎಚ್ಚರಿಕೆ ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

