ಸಾಹಿತ್ಯ ಭವನಕ್ಕೆ 1.25 ಲಕ್ಷ ದೇಣಿಗೆ
ತುಮಕೂರು: ನಗರದ ಕಲ್ಪತರು ಸಾಂಸ್ಕೃತಿಕ ವೇದಿಕೆ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ. ಸಿ.ಎಚ್. ಮರಿದೇವರು ಜಿಲ್ಲಾ ಕನ್ನಡ ಸಾಹಿತ್ಯ ಭವನಕ್ಕೆ 1 ಲಕ್ಷ ರು. ದೇಣಿಗೆ ಮತ್ತು ದತ್ತಿ ನಿಧಿಗಾಗಿ 25 ಸಾವಿರ ರು. ದೇಣಿಗೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಸೋಮು ಭಾಸ್ಕರಾಚಾರ್ ಅವರಿಗೆ ನೀಡಿದರು.
ಕನ್ನಡ ಸಾಹಿತ್ಯ ಭವನಕ್ಕೆ ಹಣಕಾಸಿನ ಕೊರತೆ ಇರುವುದನ್ನು ಮನಗಂಡು ಕಟ್ಟಡದ ನಿರ್ಮಾಣಕ್ಕಾಗಿ ಒಂದು ಲಕ್ಷ ದೇಣಿಗೆ ನೀಡಿ ಉಪಕರಿಸಿದ್ದಾರೆ. ಇದೇ ರೀತಿಯಲ್ಲಿ ಚಿಕ್ಕನಾಯಕನಹಳ್ಳಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕನ್ನಡ ಸಾಹಿತ್ಯ ಭವನಕ್ಕೂ ಒಂದು ಲಕ್ಷ ರು. ದೇಣಿಗೆ ನೀಡಿದ್ದಾರೆ. ತುಮಕೂರಿನಲ್ಲಿ ಕನ್ನಡ ಭವನ ನಿರ್ಮಾಣಗೊಂಡು ಸಾರಸ್ವತ ಲೋಕಕ್ಕೆ ಅರ್ಪಿತವಾಗಿ ನಿರಂತರ ಚಟುವಟಿಕೆಗಳನ್ನು ನಡೆಸಲು ಆಶಿಸಿಸದರು. ಇದೇ ರೀತಿ ಜಿಲ್ಲೆಯ ಸಾಹಿತ್ಯ ಪ್ರೇಮಿಗಳು ಮುಂದಾಗಿ ದೇಣಿಗೆ ನೀಡುವುದರ ಮೂಲಕ ಕನ್ನಡ ಭವನ ಪೂರ್ಣಗೊಳ್ಳಲು ನೆರವಾಗಬೇಕೆಂದು ಕೋರಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಸೋಮು ಭಾಸ್ಕರಾಚಾರ್ ಮಾತನಾಡಿ ಕನ್ನಡ ಸಾಹಿತ್ಯ ಭವನ ತುಮಕೂರು ನಗರದಲ್ಲಿ ವಿಶಿಷ್ಟ ನಿರ್ಮಾಣಗೊಳ್ಳುತ್ತಿದ್ದು ಹಣಕಾಸಿನ ಕೊರತೆಯಿಂದ ಅರ್ಧಕ್ಕೆ ನಿಂತಿದೆ. ಈ ಕಟ್ಟಡ ಪೂರ್ಣಗೊಳ್ಳಲು ಸರ್ಕಾರ ಹಾಗೂ ದಾನಿಗಳು ಉದಾರವಾದ ಹಣಕಾಸಿನ ನೆರವು ನೀಡಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಪ್ರೊ.ಸಿ.ಹೆಚ್. ಮರಿದೇವರು ಕನ್ನಡ ಭವನ ನಿರ್ಮಾಣಕ್ಕೆ ಒಂದು ಲಕ್ಷ ಹಾಗೂ ದತ್ತಿ ನಿಧಿಗೆ 25 ಸಾವಿರ ರು. ನೀಡಿರುವುದಕ್ಕೆ ಅಭಿನಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

