ನೊಣದ ಕಾಟಕ್ಕೆ ಬೇಸತ್ತು ಮತ ಬಹಿಷ್ಕಾರ!
ಶಿರಾ: 2014ನೇ ಸಾಲಿನ ಲೋಕಸಭಾ ಚುನಾವಣೆಯಲ್ಲಿ ಮತಗಳಿಸಲು ಒಂದೆಡೆ ಪಕ್ಷಗಳು ಶ್ರಮಿಸುತ್ತಿದ್ದರೆ, ಕೋಳಿ ಫಾರಂ ಮುಚ್ಚಿಸಿ ನೊಣಗಳಿಂದ ರಕ್ಷಿಸಿ ಎಂದು ಹಲ್ಕೂರು-ಕೊಂಡಮ್ಮನಹಳ್ಳಿ ಗ್ರಾಮಸ್ಥರು ಮತ್ತು ರಸ್ತೆ ಹಾಗೂ ಮೂಲಭೂತ ಸೌಕರ್ಯಗಳಿಗೆ ಆಗ್ರಹಿಸಿ ಗುಂಗರಪೆಂಟೆ ಗ್ರಾಮಸ್ಥರು ಚುನಾವಣೆ ಬಹಿಷ್ಕರಿಸುವ ಬೆದರಿಕೆ ಹಾಕಿದ್ದು, ಈ ಕುರಿತು ಶನಿವಾರ ತಹಸಿಲ್ದಾರರಿಗೆ ಮನವಿ ಸಲ್ಲಿಸಿದ್ದಾರೆ.
ಹಲ್ಕೂರು ಗ್ರಾಮದಲ್ಲಿ ಚುನಾವಣೆ ಬಹಿಷ್ಕಾರ ಶಿರಾ ತಾಲೂಕಿನ ಹಲ್ಕೂರು ಗ್ರಾಮದ ಬಳಿ ನಿರ್ಮಿಸಲಾಗಿರುವ ಕೋಳಿ ಫಾರಂನಿಂದಾಗಿ ಉಂಟಾಗಿರುವ ನೊಣಗಳ ಹಾವಳಿಯಿಂದ ಬೇಸತ್ತ ಹಲ್ಕೂರು ಮತ್ತು ಸುತ್ತಲಿನ ಏಳೆಂಟು ಹಳ್ಳಿ ಗ್ರಾಮಸ್ಥರು ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿ, ಕೋಳಿ ಫಾರಂನಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನು ವಿವರಿಸಿ ಫಾರಂ ಮುಚ್ಚಿಸುವಂತೆ ಮನವಿ ಸಲ್ಲಿಸಿದ್ದರು.
ತಾಲ್ಲೂಕು ಆಡಳಿತ ಮತ್ತು ಅಧಿಕಾರಿಗಳು ಈ ಕುರಿತು ಕ್ರಮ ಕೈಗೊಳ್ಳಲು ವಿಫಲರಾದಾಗ ತಾಲ್ಲೂಕು ಕಚೇರಿ ಮುಂದೆ ನಿರಂತರ ಪ್ರತಿಭಟನೆ ಹಮ್ಮಿಕೊಂಡಿದ್ದರು. ಇದಕ್ಕೆ ರೈತಸಂಘ, ಹಸಿರುಸೇನೆ, ವಕೀಲರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದ್ದು ಪ್ರತಿಭಟನೆ ರಾಜ್ಯಾದ್ಯಂತ ಸುದ್ದಿ ಮಾಡಿತ್ತು.
ಚುನಾವಣೆ ಬಹಿಷ್ಕಾರ: ನೊಣಗಳ ಹಾವಳಿಯಿಂದ ಬೇಸತ್ತ ಹಲ್ಕೂರು ಮತ್ತು ಸುತ್ತಲಿನ ಏಳೆಂಟು ಹಳ್ಳಿ ಗ್ರಾಮಸ್ಥರು ಇಲ್ಲಿನ ತಾಲ್ಲೂಕು ಕಚೇರಿ ಮುಂದೆ ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿ, ಕೋಳಿ ಫಾರಂನಿಂದಾಗಿ ಉಂಟಾಗಿರುವ ಸಮಸ್ಯೆಗಳನ್ನು ವಿವರಿಸಿ ಫಾರಂ ಮುಚ್ಚಿಸುವಂತೆ ಮನವಿ ಸಲ್ಲಿಸಿದ್ದರು.
ಚುನಾವಣೆ ನೆಪ ಒಡ್ಡಿ ಪ್ರತಿಭಟನಾಕಾರರ ಮನವೊಲಿಸಿ ಅವರನ್ನು ಸ್ಥಳದಿಂದ ತೆರವುಗೊಳಿಸಲಾಗಿತ್ತು. ಚುನಾವಣೆ ವೇಳೆಯೊಳಗೆ ಕ್ರಮ ಕೈಗೊಳ್ಳದೇ ಹೋದರೆ ಚುನಾವಣೆ ಬಹಿಷ್ಕರಿಸಲಾಗುವುದು ಎನ್ನುವ ಷರತ್ತಿನೊಂದಿಗೆ ಪ್ರತಿಭಟನೆ ಹಿಂಪಡೆದಿದ್ದ ಆ ಭಾಗದ ಜನತೆ ತಮಗೆ ಚುನಾಯಿತ ಸರಕಾರ ಮತ್ತು ಅಧಿಕಾರಿಗಳಿಂದ ನೆರವು ಸಿಕ್ಕಿಲ್ಲವೆಂದು ಆಪಾದಿಸಿ ಚುನಾವಣೆ ಬಹಿಷ್ಕರಿಸುವುದಾಗಿ ತಹಸೀಲ್ದಾರ್‌ಗೆ ಶನಿವಾರ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

