ತುಮಕೂರು

ಗಾಂಧಿ ಅಧ್ಯಯನ ಕೇಂದ್ರಕ್ಕೆ ಚಾಲನೆ

Published On :

ತುಮಕೂರು: ತಿಪಟೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯಶಾಸ್ತ್ರ ವಿಭಾಗದ  ಕೌಟಿಲ್ಯ ರಾಜ್ಯಶಾಸ್ತ್ರ ವೇದಿಕೆ ಮತ್ತು ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಬೆಂಗಳೂರು ಇವರ ಸಹಯೋಗದಲ್ಲಿ ಗಾಂಧಿ ಅಧ್ಯಯನ ಕೇಂದ್ರದ ಉದ್ಘಾಟನೆ ಮತ್ತು ಗಾಂಧಿ ವಿಚಾರಗಳ ಪ್ರಚಾರಾಂದೋಲನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರಿನ  ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ಹೊ. ಶ್ರೀನಿವಾಸಯ್ಯ ಅವರು ಗಾಂಧೀಜಿಯವರೊಂದಿಗಿನ ತಮ್ಮ ಒಡನಾಟದ ಕ್ಷಣಗಳನ್ನು ನೆನಪಿಸಿಕೊಂಡರು.  ಸತ್ಯ, ಅಹಿಂಸೆ, ಕ್ಷಮೆ ಮುಂತಾದ ಗಾಂಧೀಜಿಯವರ ತತ್ವಾದರ್ಶಗಳು ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ, ಕರಿಯರ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟಗಳ ಮೇಲೆ ಹೇಗೆ ಪ್ರಭಾವ ಬೀರಿದವು  ಎಂಬುದನ್ನು ವಿವರಿಸಿದ ಅವರು  ನಮ್ಮ ಉದ್ಧಾರಕರೆಂದು ಹೇಳಿಕೊಂಡು ಬಂದ ಬ್ರಿಟಿಷರು ಇಂಗ್ಲಿಷ್ ಶಾಲೆ-ಕಾಲೇಜುಗಳನ್ನು ತೆರೆದಿದ್ದು ನಮ್ಮ ಸಂಸ್ಕೃತಿಯನ್ನು ನಾಶ ಮಾಡಲು  ಎಂದು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಗಾಂಧೀಜಿಯವರ ತತ್ವಗಳನ್ನು ನಾವೆಲ್ಲರೂ ತಪ್ಪದೇ ಪಾಲಿಸಿದ್ದೇ ಆದರೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವುದರೊಂದಿಗೆ ಸಮಾಜದಲ್ಲಿ ಹೇಗೆ ಬದುಕಬೇಕೆಂಬ ಅರಿವು ಮೂಡುತ್ತದೆ ಎಂದು ಅಭಿಪ್ರಾಯಪಟ್ಟರು.
 ವಿಶೇಷ ಉಪನ್ಯಾಸ ನೀಡಿದ ಬೆಂಗಳೂರಿನ  ಗಾಂಧಿ ಶಾಂತಿ ಪ್ರತಿಷ್ಠಾನದ ಅಧ್ಯಕ್ಷ ಡಾ. ವುಡೇ ಪಿ. ಕೃಷ್ಣ ಅವರು  ಗಾಂಧೀಜಿ ಬಿಟ್ಟು ಭಾರತ ಇಲ್ಲ  ಭಾರತ ಬಿಟ್ಟು ಗಾಂಧೀಜಿ ಇಲ್ಲ  ಎಂದು ಹೇಳುವುದರೊಂದಿಗೆ ತೆರೆದ ಪುಸ್ತಕದಂತಿರುವ ಗಾಂಧೀಜಿಯವರ ಜೀವನ, ಮೌಲ್ಯಗಳು ಭಾರತಕ್ಕೆ ಅತ್ಯವಶ್ಯಕವಾಗಿವೆ ಎಂದು ಹೇಳಿದರು.
ಅರ್ಥವಾಗುವುದಿಲ್ಲ: ಪ್ರಾಸ್ತಾವಿಕವಾಗಿ ಮಾತನಾಡಿದ ಬೆಂಗಳೂರಿನ  ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಯ ಗೌರವ ಕಾರ್ಯದರ್ಶಿ ಪ್ರೊ. ಜಿ.ಬಿ. ಶಿವರಾಜು ಅವರು ನಾವು ಗಾಂಧೀಜಿಯವರ ಬಗೆಗಿನ ಪ್ರತಿ ಕಾರ್ಯಕ್ರಮವನ್ನೂ ನಮ್ಮ ಜೀವನದಲ್ಲಿ ಸ್ಮರಿಸಲೇಬೇಕು ಎಂದು ಹೇಳಿದರು. ಗಾಂಧಿಯವರನ್ನು ಅರ್ಥಮಾಡಿಕೊಳ್ಳದಿದ್ದರೆ ಇಂದಿನ ಜಗತ್ತಿಗೆ ಗಾಂಧೀಜಿಯವರ ಅನಿವಾರ್ಯತೆಯೂ ಅರ್ಥವಾಗುವುದಿಲ್ಲ ಎಂಬ ಆತಂಕ ವ್ಯಕ್ತಪಡಿಸಿದರು.
ಗಾಂಧೀಜಿಯವರಲ್ಲಿ ಎಲ್ಲ ಮಹಾನುಭಾವರನ್ನೂ ಕಾಣಲು ಸಾಧ್ಯ ಎಂದರು. ಪ್ರಾಂಶುಪಾಲ ಡಾ. ಜಯದೇವಪ್ಪ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಗುರುಕುಲ ಮಠದ ಕಾರ್ಯ ನಿರ್ವಹಣಾಧಿಕಾರಿ ಬಿ.ಎಂ ಹರಿಪ್ರಸಾದ್, ರಾಜ್ಯಶಾಸ್ತ್ರ ವಿಭಾಗದ ಪ್ರೊ. ಈರಯ್ಯ ಮತ್ತು ಡಾ. ಹೊನ್ನಾಂಜಿನಯ್ಯ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.