ಮೋದಿ ಅಲೆಯಿಂದ ಕಾಂಗ್ರೆಸ್ಗೆ ಹತಾಶೆ
ಪಾವಗಡ: ಮೋದಿ ಅಲೆಯಿಂದ ಹತಾಶೆಗೊಂಡ ಕಾಂಗ್ರೆಸ್, ಮೋದಿ ವಿರುದ್ಧ ಅಪಪ್ರಚಾರದಲ್ಲಿ ನಿರತವಾಗಿದೆ. ಮೋದಿ ಸೇರಿದಂತೆ ಬಿಜೆಪಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಾಂಗ್ರೆಸ್ಗೆ ಇಲ್ಲವೆಂದು ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಪಾವಗಡ ಶಿವಪ್ರಸಾದ್ ಕಿಡಿಕಾರಿದ್ದಾರೆ.
ಚಿತ್ರದುರ್ಗ ಲೋಕಸಭಾ ಬಿಜೆಪಿ ಅಭ್ಯರ್ಥಿ ಜನಾರ್ದನಸ್ವಾಮಿ ಪರ ಮತಯಾಚನೆಗೆ ಆಗಮಿಸಿದ್ದ ಅವರು ಶನಿವಾರ ಏರ್ಪಾಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರನ್ನು ನರಹಂತಕ ಎಂದು ಸಂಬೋಧಿಸಿರುವ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಚುನಾವಣೆ ಅಯೋಗ ಛೀಮಾರಿ ಹಾಕಿದೆ ಎಂದರು. ಸಿಎಂ ಸ್ಥಾನದಲ್ಲಿರುವವರು ಜವಾಬ್ದಾರಿ ಅರಿತು ಮಾತನಾಡಬೇಕು ಎಂದರು. ಮೋದಿ ಬಗ್ಗೆ ಅಪಪ್ರಚಾರದಲ್ಲಿ ನಿರತರಾದ ಕಾಂಗ್ರೆಸ್ ನಾಯಕ ವಿ.ಎಸ್ ಉಗ್ರಪ್ಪ ಮೋದಿಯ ಬಗ್ಗೆ ಅಪಪ್ರಚಾರ ನಿಲ್ಲಿಸಲಿ. ಅವರು ಕಾಂಗ್ರೆಸ್ ಸೇಲುವ ಮುನ್ನ ಸೋನಿಯಾ ಬಗ್ಗೆ ಅವಹೇಳನ ಮಾಡಿರುವ ಬಗ್ಗೆ ನಮ್ಮಲ್ಲಿ ದಾಖಲೆಗಳಿವೆ ಎಂದರು. ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಕೋಮವಾತ ಸೃಷ್ಟಿಸುವ ಕಾಂಗ್ರೆಸ್ ಅಧಿಕಾರಕ್ಕೆ ತರಬಾರದೆಂದು ಜನಸಾಮಾನ್ಯರು ಮೋದಿ ಪರ ಪ್ರಚಾರದಲ್ಲಿ ನಿರತರಾಗಿದ್ದು, ಗುಜರಾತ್ನ ಪ್ರಗತಿ ಕಂಡ ಜನತೆ ದೇಶದಲ್ಲಿ ಮೋದಿ ಪ್ರಧಾನಿ ಆಗಬೇಕೆಂಬ ಸಂಕಲ್ಪ ತೊಟ್ಟಿದೆ. ಮೋದಿ ಅಲೆಯಿಂದ ಗಾಬರಿಗೊಂಡಿರುವ ಕಾಂಗ್ರೆಸ್ ಧರ್ಮ ಹಾಗೂ ಜಾತಿ ಹೆಸರಿನಲ್ಲಿ ವಿಷ ಬೀಜ ಬಿತ್ತುವ ಮೂಲಕ ವೋಟ್ ಬ್ಯಾಂಕ್ ರಾಜಕಾರಣದಲ್ಲಿ ನಿರತವಾಗಿದೆ.ಪೆಟ್ರೋಲ್, ಡೀಸೆಲ್ ಹಾಗೂ ಇತರೆ ದಿನಚರಿ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಕಂಗಾಲಾಗಿದ್ದು ವಾಜಪೇಯಿ ನೇತೃತ್ವದ ಬಿಜೆಪಿ ಆಡಳಿತ ಬಗ್ಗೆ ಜನ ಮಾತನಾಡುತ್ತಿದ್ದಾರೆ. ವಾಜಪೇಯಿ ಕಂಡ ಕನಸಿನಂತೆ ನದಿಗಳ ಜೋಡಣೆ ಮೂಲಕ ಸಮಗ್ರ ನೀರಾವರಿ ಅನುಷ್ಠಾನ, ಅಡಿಗೆ ಅನಿಲ, ವಿದ್ಯುತ್, ಮೂಲಭೂತ ಸಮಸ್ಯೆ ನಿವಾರಣೆ ಬಿಜೆಪಿ ಸ್ಪಷ್ಟ ನಿಲುವು ತೆಗೆದುಕೊಂಡಿದೆ. ದೇಶದ ರಕ್ಷಣೆಗೆ ಜನ ಮಂದೆ ಬಂದು ಮೋದಿಯನ್ನು ಬೆಂಬಲಿಸುತ್ತಿರುವುದಾಗಿ ಅವರು ತಿಳಿಸಿದರು.
ಬಿಜೆಪಿ ಅಧಿಕಾರಕ್ಕೆ ತನ್ನಿ: ನಿರುದ್ಯೋಗ, ನದಿ ಮೂಲದ ಕುಡಿಯುವ ನೀರು ಮತ್ತು ನೀರಾವರಿ ಅನುಷ್ಠಾನ, ಶೈಕ್ಷಣಿಕ ಪ್ರಗತಿಗೆ ಪಕ್ಷದ ಅಭ್ಯರ್ಥಿ ಜನಾರ್ದನಸ್ವಾಮಿ ಅವರಿಗೆ ಮತ ನೀಡಲು ಜನ ಮುಂದಾಗಿದ್ದು ಮೋದಿ ಅವರನ್ನು ಪ್ರಧಾನಿಯಾಗಿ ಆಯ್ಕೆ ಮಾಡುವ ಮೂಲಕ ಕೇಂದ್ರದಲ್ಲಿ ಅಧಿಕಾರಕ್ಕೆ ತರುವಂತೆ ಮತದಾರರಿಗೆ ಮನವಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

