ದಲಿತರಿಗೆ ಚುನಾವಣಾ ಜಾಗೃತಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಕೊರಟಗೆರೆ ಏ.13
ತಾಲೂಕಿನ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ನಡೆದ ದಲಿತರಿಗೆ ಚುನಾವಣಾ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಅಧ್ಯಕ್ಷ ಆರ್. ಲಕ್ಷ್ಮೀನರಸಯ್ಯನವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಶತಶತಮಾನಗಳಿಂದ ಶೋಷಣೆಗೆ ಒಳಪಟ್ಟು ಜೀತದಾಳಾಗಿ ಜೀವಿಸುತ್ತ, ವಿದ್ಯಾವಂತರಾಗದೆ, ಅವಿದ್ಯಾವಂತರಾಗಿ, ಆರ್ಥಿಕವಾಗಿ, ದಲಿತ, ಹಿಂದುಳಿದ ಅಲ್ಪಸಂಖ್ಯಾತರ ದೌರ್ಜನ್ಯಗಳನ್ನು ತಡೆಗಟ್ಟಲು ಅವಿರತವಾಗಿ ಕ್ರಾಂತಿ, ಧರಣಿ, ಹೋರಾಟಗಳನ್ನು ಮಾಡುತ್ತಾ ಶೋಷಿತ ಎಲ್ಲಾ ಜಾತಿಯ ಜನಾಂಗದ ಅಭಿವೃದ್ಧಿಗೆ ಶ್ರಮಿಸಿ, ದೌರ್ಜನ್ಯಗಳನ್ನು ತಡೆಗಟ್ಟಿ, ಅವಿರತವಾಗಿ ಶ್ರಮಹಾಕಿ ನ್ಯಾಯಯುತವಾಗಿ ಹೋರಾಟ ಮಾಡಬೇಕು ಎಂದು ಜಿಲ್ಲಾ ದಲಿತ ಸಂಘಷ ಸಮಿತಿ ಶ್ರಮಿಸುತ್ತ ಬಂದಿದೆ ಎಂದರು.
ಬೃಹತ್ ರಾಷ್ಟ್ರದೊಳಗೆ ಮಾನವ ನಿರ್ಮಿತ ಜಾತಿ ಗೋಡೆಗಳನ್ನು ಕೆಡವಲು ಶಿಕ್ಷಣ, ಸಂಘಟನೆ ಹಾಗೂ ಹೋರಾಟಗಳೆಂಬ ತ್ರಿಮಂತ್ರ ದ್ವೀಪಗಳಾಗಿ ದಲಿತ ಜನಾಂಗಕ್ಕೆ ಸೀಮಿತವಾಗಿದೆ, ಇಡೀ ಮನುಕುಲಕ್ಕೆ ದಾರಿದೀಪವಾದವರು ಎಂದರು.
ಕುಮಾರಸ್ವಾಮಿ ಬಹಿರಂಗ ಸಭೆ ಇಂದು
ತಿಪಟೂರು: ತುಮಕೂರು ಲೋಕಸಭಾ ಜೆಡಿಎಸ್ ಅಭ್ಯರ್ಥಿಎ.ಕೃಷ್ಣಪ್ಪನವರ ಪರ ಚುನಾವಣಾ ಪ್ರಚಾರಕ್ಕಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಹಿರಂಗ ಸಭೆ ಸೋಮವಾರ ಸಂಜೆ 5ಗಂಟೆಗೆ ಪಟ್ಟಣದ ಕಲ್ಪತರು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ತಾಲೂಕು ಜೆಡಿಎಸ್ ಘಟಕ ತಿಳಿಸಿದೆ.
ಜೆಡಿಎಸ್ ಜಿಲ್ಲಾಧ್ಯಕ್ಷ ಹುಲಿನಾಯ್ಕರ್, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಲ್. ಜಗದೀಶ್, ತಾ. ಜೆಡಿಎಸ್ ಅಧ್ಯಕ್ಷ ಗುರುಮೂರ್ತಿ ಭಾಗವಹಿಸಲಿದ್ದಾರೆ. ಪಕ್ಷದ ಎಲ್ಲಾ ಕಾರ್ಯಕರ್ತರು, ಮುಖಂಡರುಗಳು, ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಘಟಕವು ಮನವಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

