ಕೊರಟಗೆರೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಂದ ಮತಯಾಚನೆ
ಕೊರಟಗೆರೆ: ಯುಪಿಎ ಸರ್ಕಾರ ಕೇಂದ್ರದಲ್ಲಿ ಪ್ರಗತಿ ಪರ ಯೋಜನೆಗಳೊಂದಿಗೆ ದೇಶದ 14 ಕೋಟಿ ಬಡಜನರನ್ನು ಮೇಲೆತ್ತುವ ಕೆಲಸ ಮಾಡಿದೆ. ಈ ಸಾಧನೆಯಿಂದಾಗಿ ಮತದಾರು ಆಶೀರ್ವಾದ ಮಾಡಲಿದ್ದು, ಮತ್ತೊಮ್ಮೆ ಕೇಂದ್ರದಲ್ಲಿ ಯುಪಿಎ ಸರ್ಕಾರ ಅಧಿಕಾರದ ಗದ್ದುಗೆಗೆ ಏರಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ಅವರು ಕೊರಟಗೆರೆಯಲ್ಲಿ ದೈವಕಟ್ಟೆ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ನಂತರ ಪಟ್ಟಣ ವಾರ್ಡ್ಗಳಲ್ಲಿ ಮತ್ತು ಕೊರಟಗೆರೆ ವಿಧಾನ ಸಭಾ ಕ್ಷೇತ್ರದ 33 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕರ್ತರೊಂದಿಗೆ ತುಮಕೂರು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ. ಮುದ್ದಹನುಮೇಗೌಡರ ಪರ ಮನೆ ಮನೆ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.
ಬಡತನ ಮುಕ್ತ ಭಾರತ ನಿರ್ಮಾಣಕ್ಕಾಗಿ ದೇಶದ ಬಡಜನತೆಗೆ ರಿಯಾಯಿತಿ ದರದಲ್ಲಿ ಆಹಾರ ಧಾನ್ಯ ನೀಡುತ್ತಿರುವುದರೊಂದಿಗೆ ದೇಶದ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಅನೇಕ ಕೊಡುಗೆ ನೀಡಿದೆ ಎಂದರು.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಾಮಾಜಿಕ ನ್ಯಾಯ ಯೋಜನೆಗಳನ್ನು ಜನಸಾಮಾನ್ಯರಿಗೆ ತಲುಪಿಸಿ ದೇಶದಲ್ಲಿ ಪ್ರಜಾಪ್ರಭುತ್ವ ಉಳಿಯಬೇಕು. ಸಂವಿಧಾನದ ಆಶಯಗಳು ಜನರಿಗೆ ತಲುಪಬೇಕಾದರೆ ಕಾಂಗ್ರೆಸ್ ಸರಕಾರದಿಂದ ಮಾತ್ರ ಸಾಧ್ಯ ಎಂದರು.
ಇದನ್ನು ಅರಿತಿರುವ ಮತದರರು ಈ ಬಾರಿಯೂ ಕಾಂಗ್ರೆಸ್ ಪಕ್ಷಕ್ಕ ಬಹುಮತ ನೀಡಲ್ಲಿದ್ದಾರೆಂದು ತಿಳಿಸಿದರು. ದೇಶದಲ್ಲಿ ಎಲ್ಲಾ ಜಾತಿಯ ಜನರು ನೆಮ್ಮದಿಯಿಂದ ಬಾಳಬೇಕಾದಲ್ಲಿ, ದೇಶವು ಅಭಿವೃದ್ಧಿ ಹೊಂದಬೇಕಾದರೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದಿಂದ ಮಾತ್ರ ಸಾಧ್ಯ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

