ನನ್ನ ಎದುರಾಳಿ ಕಾಂಗ್ರೆಸ್ ಅಲ್ಲ, ಬಿಜೆಪಿ: ಎ. ಕೃಷ್ಣಪ್ಪ
ತುಮಕೂರು: ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಅಲ್ಲ, ಬಿಜೆಪಿ ಮಾತ್ರ. ಈ ಚುನಾವಣೆಯಲ್ಲಿ ಗೆಲವು ನನ್ನದೇ ಎಂಬ ವಿಶ್ವಾಸವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಅಭ್ಯರ್ಥಿ ಎ. ಕೃಷ್ಣಪ್ಪ ವ್ಯಕ್ತಪಡಿಸಿದರು.
ಅವರು ತುಮಕೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ನಿಜ ಹೇಳಬೇಕೆಂದರೆ ತಮಗೆ ಯಾರೂ ಎದುರಾಳಿಗಳೇ ಇಲ್ಲ. ಎಲ್ಲೆಡೆ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿ ಪರ ಜನ ಆಕ್ರೋಶದ ಮಾತುಗಳನ್ನಾಡುತ್ತಿದ್ದಾರೆ. ತಮಗೆ ಒಳ್ಳೆಯ ಪ್ರತಿಕ್ರಿಯೆ ಸಿಗುತ್ತಿದ್ದು ಈ ಬಾರಿ ಗೆಲವು ಖಚಿತ ಎಂದರು.
ತಾವು ಈಗಾಗಲೇ ಎಲ್ಲಾ 8 ತಾಲೂಕು ಮತ್ತು 30 ಹೋಬಳಿಗಳಲ್ಲಿ ಪ್ರಚಾರ ಮಾಡಿದ್ದೇನೆ. ಎಲ್ಲಿ ಹೋದರೂ ಬಿಜೆಪಿ ಅಭ್ಯರ್ಥಿ ವಿರುದ್ಧ ಜನ ಮಾತನಾಡುತ್ತಿದ್ದಾರೆ. ಅವರು ಸಂಸದರಾಗಿ ಆಯ್ಕೆಯಾದ ಬಳಿಕ ಒಂದು ನಯಾ ಪೈಸೆ ಹಣವನ್ನು ಗ್ರಾಮಗಳಿಗೆ ಕೊಟ್ಟಿಲ್ಲ ಎಂದರು. ಕೇವಲ ವೀರಶೈವ ಜನಾಂಗಕ್ಕೆ ಮಾತ್ರ ಬಸವರಾಜು ಅವರು ಸಹಕಾರ ನೀಡಿದ್ದಾರೆ ಎಂದರು. 20 ವರ್ಷ ಸಂಸತ್ ಸದಸ್ಯರಾಗಿದ್ದರೂ ಒಂದಿಷ್ಟು ಅಭಿವೃದ್ಧಿ ಮಾಡಿಲ್ಲ ಎಂಬ ಆರೋಪವನ್ನು ಗ್ರಾಮಸ್ಥರು ತಮ್ಮ ಬಳಿ ದೂರಿಕೊಂಡಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಶೇ. 90 ರಷ್ಟು ಭಾಗದಲ್ಲಿ ಪ್ರಚಾರ ಮಾಡಿದ್ದು ಕನಿಷ್ಠ 100 ಕ್ಕೂ ಹೆಚ್ಚು ಸಭೆ ನಡೆಸಿದ್ದಾಗಿ ತಿಳಿಸಿದರು. ಎಲ್ಲಾ ಕಡೆ ಅಭೂತಪೂರ್ವ ಬೆಂಬಲ ತಮಗೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು.
ಇಂದು ಬೈಕ್ ರ್ಯಾಲಿ: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೈಕ್ ರ್ಯಾಲಿ ನಡೆಸಲಾಗುವುದು. ಸುಮಾರು 5 ಸಾವಿರಕ್ಕೂ ಹೆಚ್ಚು ಮಂದಿ ಈ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಚುನಾವಣೆ ಒಂದಿಷ್ಟು ವರ್ಣರಂಜಿತವಾಗಿ ಇರಬೇಕು ಎಂಬ ಕಾರಣಕ್ಕಾಗಿ ಈ ರ್ಯಾಲಿ ನಡೆಸಲಾಗುವುದು ಎಂದರು.
ಎಂ.ಪಿ. ಯಾರು ಅನ್ನೋದೇ ಗೊತ್ತಿಲ್ಲವಂತೆ: ತಾವು ಹೋದ ಕಡೆಯಲೆಲ್ಲಾ ಜನ ನಮ್ಮ ಸಂಸತ್ ಸದಸ್ಯರನ್ನು ನೋಡಿಯೇ ಇಲ್ಲ ಎಂದು ದೂರಿದರು. ಇವೆಲ್ಲಾ ಕೂಡ ತಮಗೆ ವರವಾಗಿ ಪರಿಣಮಿಸಲಿದೆ ಎಂದರು. ಪಕ್ಷದ ಕಾರ್ಯಕರ್ತರು, ಶಾಸಕರು ತಮ್ಮ ಪರವಾಗಿ ವ್ಯಾಪಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಜಯಗಳಿಸುತ್ತದೆ. ತುಮಕೂರು ಜೆಡಿಎಸ್ನ ಭದ್ರಕೋಟೆ. ಎಲ್ಲಾ ಸಮುದಾಯದವರು ತಮ್ಮನ್ನು ಬೆಂಬಲಿಸುವ ವಿಶ್ವಾಸವನ್ನು ಕೃಷ್ಣಪ್ಪ ಅವರು ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ಹುಲಿನಾಯ್ಕರ್ ಇತರರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

