ತುಮಕೂರು

ಚಿನ್ನಪ್ಪಗೆ ನಾನಾ ಸಂಘಟನೆಗಳ ಬೆಂಬಲ

Published On :

ತುಮಕೂರು: ತುಮಕೂರು ಲೋಕಸಭಾ ಕ್ಷೇತ್ರದ ಸಿಪಿಐ ಅಭ್ಯರ್ಥಿ ವಿ. ಚಿನ್ನಪ್ಪ ಅವರಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.
ಈ ಕುರಿತು ತುಮಕೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಅಖಿಲ ಭಾರತ ಯುವಜನ ಫೆಡರೇಷನ್, ಭಾರತೀಯ ಮಹಿಳಾ ಒಕ್ಕೂಟ, ಭಾರತೀಯ ಕೃಷಿ ಕೂಲಿ ಕಾರ್ಮಿಕ ಸಂಘಟನೆ ರಾಜ್ಯ ಮುಖಂಡರು ಸಾಮಾನ್ಯ ಜನತೆ, ರೈತ, ಕಾರ್ಮಿಕರ ಪರ ಹಲವು ದಶಕಗಳಿಂದ ಹೋರಾಟ ನಡೆಸುತ್ತಲೇ ಬಂದಿರುವ ಭಾರತೀಯ ಕಮ್ಯೂನಿಸ್ಚ್ ಪಕ್ಷದ ಧ್ಯೇಯ, ಧೋರಣೆ ಹಿನ್ನೆಲೆಯಲ್ಲಿ ಆ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ. ಚಿನ್ನಪ್ಪ ಅವರಿಗೆ ಬೆಂಬಲ ನೀಡುತ್ತಿರುವುದಾಗಿ ಘೋಷಿಸಿದರು.
ಕಾಂಗ್ರೆಸ್, ಬಿಜೆಪಿ ಒಂದೇ ನಾಣ್ಯದ ಎರಡು ಮುಖಗಳು. ರೈತ, ಕಾರ್ಮಿಕ, ಜನವಿರೋಧಿ ನೀತಿ ಅನುಸರಿಸುತ್ತಿರುವ ಎರಡು ರಾಷ್ಟೀಯ ಪಕ್ಷಗಳು. ಈ ಎರಡೂ ಪಕ್ಷಗಳು ಮಹಿಳಾ ವಿರೋಧಿಗಳೇ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರೈತರ ಆತ್ಮಹತ್ಯೆ ಕುರಿತಂತೆ ಬಿಜೆಪಿ, ಕಾಂಗ್ರೆಸ್ ಎರಡೂ ಪಕ್ಷಗಳಲ್ಲಿ ಸೊಲ್ಲೆತ್ತುವವರಿಲ್ಲ. ಕೃಷಿ ಕೂಲಿ ಕಾರ್ಮಿಕರ ಪರ ಯಾವುದೇ ನಿಲುವಿಲ್ಲ. ಬಾಲ ಕಾರ್ಮಿಕ ಪದ್ಧತಿ, ನೀರು, ಸೂರು ಕುರಿತು ಯಾವುದೇ ಸ್ಪಷ್ಟ ನಿಲುವಿಲ್ಲ  ಎಂದು ಟೀಕಿಸಿದರು.
ಸುದ್ದಿಗೋಷ್ಠಿಯಲ್ಲಿ ಅಖಿಲ ಭಾರತ ಯುವಜನ ಫೆಡರೇಷನ್ ರಾಜ್ಯ ಕಾರ್ಯದರ್ಶಿ ಎಸ್. ಮೋನಪ್ಪ, ರಾಜ್ಯ ಉಪಾಧ್ಯಕ್ಷ ವಾಸುದೇವಕುಮಾರ್, ಭಾರತೀಯ ಮಹಿಳಾ ಒಕ್ಕೂಟದ ರಾಜ್ಯಾಧ್ಯಕ್ಷೆ ಜ್ಯೋತಿ, ಭಾರತೀಯ ಕೃಷಿ ಕೂಲಿ ಕಾರ್ಮಿಕ ಸಂಘಟನೆಯ ರಾಜ್ಯ ಸಂಚಾಲಕ ಡಾ. ಜನಾರ್ಧನ್, ಎಐವೈಎಫ್ ನ ಜಿಲ್ಲಾಧ್ಯಕ್ಷ ಶಶಿಕಾಂತ್, ಸಿಪಿಐ ಲೋಕಸಭಾ ಅಭ್ಯರ್ಥಿ ವಿ. ಚಿನ್ನಪ್ಪ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.