ತುಮಕೂರು

ಅಕ್ರಮ ಮರಳು ಸಾಗಣೆ: 8 ಲಾರಿ, 2 ಜೆಸಿಬಿ ವಶ

Published On :

ಕುಣಿಗಲ್: ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ ಮುಂದುವರೆಸಿರುವ ಪೊಲೀಸರು, ಹುಲಿಯೂರುದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧೆಡೆಗಳಲ್ಲಿ ಬುಧವಾರ ಬೆಳಗಿನ ಜಾವ ಕ್ಷಿಪ್ರ ಕಾರ್ಯಚರಣೆ ನಡೆಸಿ ಎಂಟು ಲಾರಿ ಹಾಗೂ ಎರಡು ಜೆಸಿಬಿ ವಶಪಡಿಸಿಕೊಂಡಿದ್ದಾರೆ.
ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿಧೆಡೆ ಅಕ್ರಮ ಮರಳು ಸಾಗಾಣೆ ಬಗ್ಗೆ ಖಚಿತ ಮಾಹಿತಿ ಪಡೆದ ಅಮೃತೂರು ಪ್ರಭಾರ ಎಎಸ್ಪಿ ಧರ್ಮೇಂದ್ರಕುಮಾರ್ ಮೀನಾ, ಸಿಪಿಐ ಧರ್ಮೇಂದ್ರ, ಪಿಎಸೈ ರಂಜನ್ ಕುಮಾರ್ ಮತ್ತು ಸಿಬ್ಬಂದಿ ಸಂತೇಮಾವತ್ತೂರು ಸಮೀಪ ಎರಡು ಲಾರಿ, ಕೆ.ಹೊನ್ನಮಾಚನಹಳ್ಳಿ ಬಳಿ ಮೂರು, ತೊರೆಬೊಮ್ಮನಹಳ್ಳಿ ಬಳಿ ಎರಡು ಹಾಗೂ ಚೌಡನಕುಪ್ಪೆ ಗ್ರಾಮದ ಬಳಿ ಒಂದು ಮರಳು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಇವುಗಳ ಜೊತೆಯಲ್ಲಿ ತೋಟಗಳ ವ್ಯಾಪ್ತಿಯಲ್ಲಿ ಮರಳು ಸಂಗ್ರಹಣೆ ಮತ್ತು ಮರಳನ್ನು ಲಾರಿಗೆ ಲೋಡ್ ಮಾಡಲು ಬಳಸುತ್ತಿದ್ದ ಕೆ.ಹೊನ್ನಮಾಚನಹಳ್ಳಿ ಗ್ರಾಮದ ತೋಟದಲ್ಲಿ ಮತ್ತು ತೊರೆಬೊಮ್ಮನಹಳ್ಳಿ ತೋಟದಲ್ಲಿ ಒಂದು ಒಟ್ಟು ಎರಡು ಜೆಸಿಬಿಗಳನ್ನು  ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.