ವಿದ್ಯಾರ್ಥಿಗಳಲ್ಲಿ ಅಧ್ಯಯನದ ಕೊರತೆ: ಎಂ.ಕೆ. ವೀರಯ್ಯ
ತುಮಕೂರು: ಇಂದಿನ ದಿನದಲ್ಲಿ ವಿದ್ಯಾರ್ಥಿಗಳಲ್ಲಿ ಅಧ್ಯಯನದ ಕೊರತೆ ಎದ್ದು ಕಾಣುತ್ತಿದೆ. ಆದರೆ ಈ ಕೊರತೆಯನ್ನು ನೀಗಿಸಿಕೊಳ್ಳಲು ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪ್ರಾಯೋಗಿಕ ವಿಷಯಗಳಿಗೂ ಒತ್ತು ನೀಡಿದಾಗ ಕ್ರಿಯಾಶೀಲವಾಗಬಹುದು ಎಂದು ಶ್ರೀ ಸಿದ್ಧಾರ್ಥ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಕೆ.ವೀರಯ್ಯ ಅಭಿಪ್ರಾಯಪಟ್ಟರು.
ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಟೆಲಿಕಮ್ಯೂನಿಕೇಷನ್ ಎಂಜಿನಿಯರಿಂಗ್ ಮತ್ತು ಟೆಕ್ವಿಪ್ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ ಎಂಬೆಡೆಡ್ ಸಿಸ್ಟಮ್ ಮತ್ತು ಆರ್ಡಿಯುನೊ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಕಾರ್ಯಾಗಾರಗಳಲ್ಲಿ ವಿಷಯತಜ್ಞರು ಮಂಡಿಸುವ ವಿಷಯಗಳನ್ನು ಗ್ರಹಿಸಿಕೊಂಡು ಪ್ರಾಯೋಗಿಕ ಜ್ಞಾನವನ್ನು ವೃದ್ಧಿಸಿಕೊಳ್ಳುವಂತೆ ಡಾ ವೀರಯ್ಯ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಕಾರ್ಯಾಗಾರದಲ್ಲಿ ಮಾತನಾಡಿದ ಗುಲ್ಬರ್ಗಾದ ಇಂಟಿಗ್ರೇಟೆಡ್ ಐಡಿಯಾಸ್‌ನ ಸಿಇಒ ಡಾ. ರೂಪಂದಾಸ್ ಮಾತನಾಡಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೆಚ್ಚಿನ ಕಾಲವನ್ನು ಪ್ರಯೋಗಾಲಯಗಳಲ್ಲಿ ಕಳೆಯಬೇಕು. ಆ ಮೂಲಕ ತಾಂತ್ರಿಕ ಆವಿಷ್ಕಾರಗಳಿಗೆ ತಮ್ಮನ ತಾವು ತೊಡಗಿಸಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು. ಟೆಲಿಕಮ್ಯೂನಿಕೇಷನ್ ವಿಭಾಗದ ಮುಖ್ಯಸ್ಥ ಪ್ರೊ. ಎಚ್. ಎಸ್. ಜಯರಾಮ್, ಪ್ರಾಧ್ಯಾಪಕರಾದ ಡಾ.ಕೆ.ಬಿ.ಶಿವಕುಮಾರ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

